Advertisement

ಉಪಚುನಾವಣಾ ಕಣದಲ್ಲಿ ಬಿಎಸ್‌ವೈ ಏಳು ದಿನ ಪ್ರಚಾರ

11:30 PM May 08, 2019 | Lakshmi GovindaRaj |

ಬೆಂಗಳೂರು: ವಿಧಾನಸಭೆಯಲ್ಲಿ ಸಂಖ್ಯಾಬಲ ವೃದ್ಧಿ ದೃಷ್ಟಿಯಿಂದ ಮಹತ್ವದ್ದೆನಿಸಿದ ಕುಂದಗೋಳ ಹಾಗೂ ಚಿಂಚೋಳಿ ವಿಧಾನಸಭೆ ಉಪಚುನಾವಣೆ ಗೆಲ್ಲಲು ಬಿಜೆಪಿ ರಣತಂತ್ರ ರೂಪಿಸಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಅವರು ಏಳು ದಿನಗಳ ಕಾಲ ಎರಡೂ ಕ್ಷೇತ್ರಗಳಲ್ಲಿ ಭರ್ಜರಿ ಪ್ರಚಾರ ನಡೆಸಲಿದ್ದಾರೆ.

Advertisement

ಯಡಿಯೂರಪ್ಪ ಅವರು ಬುಧವಾರ ಬೆಂಗಳೂರಿನಿಂದ ಶಿವಮೊಗ್ಗಕ್ಕೆ ತೆರಳಿದ್ದಾರೆ. ಶುಕ್ರವಾರದಿಂದ ಮೇ 17ರವರೆಗೆ ಕುಂದಗೋಳ ಹಾಗೂ ಚಿಂಚೋಳಿ ಕ್ಷೇತ್ರಗಳಲ್ಲಿ ಪ್ರಚಾರ ನಡೆಸಲಿದ್ದಾರೆ. ಮೇ 10ರಿಂದ 12ರವರೆಗೆ ಮೂರು ದಿನಗಳ ಕಾಲ ಕುಂದಗೋಳದಲ್ಲಿ ಹಾಗೂ ಮೇ 13, 14ರಂದು ಚಿಂಚೋಳಿ ಕ್ಷೇತ್ರದಲ್ಲಿ ಪ್ರಚಾರ ಸಭೆ, ಸಮಾವೇಶಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ಮೇ 16 ಹಾಗೂ 17ರಂದು ಮತ್ತೆ ಕುಂದಗೋಳ ಕ್ಷೇತ್ರದಲ್ಲಿ ಚುನಾವಣಾ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲಿದ್ದಾರೆ.

ಎರಡೂ ಕ್ಷೇತ್ರಗಳಲ್ಲಿ ಸಮುದಾಯವಾರು ಸ್ಥಳೀಯ ಅಗತ್ಯಕ್ಕೆ ತಕ್ಕಂತೆ ಇತರ ಕ್ಷೇತ್ರಗಳ ಶಾಸಕರು, ಸಂಸದರನ್ನು ನಿಯೋಜಿಸಲಾಗಿದೆ. ಮೈತ್ರಿ ಸರ್ಕಾರವು ಸಚಿವರು, ಪ್ರಭಾವಿ ಶಾಸಕರನ್ನು ಉಸ್ತುವಾರಿಯಾಗಿ ನೇಮಿಸಿರುವುದರಿಂದ ಬಿಜೆಪಿಯಿಂದಲೂ ಚುನಾವಣೆಗಳನ್ನು ನಡೆಸಿದ ಅನುಭವಿ ನಾಯಕರು, ಮುಖಂಡರನ್ನೇ ನಿಯೋಜಿಸಲಾಗುತ್ತಿದೆ ಎಂದು ಮೂಲಗಳು ಹೇಳಿವೆ.

Advertisement

Udayavani is now on Telegram. Click here to join our channel and stay updated with the latest news.

Next