Advertisement

ಭಾವುಕರಾಗಿಯೇ ಭಾಷಣ ಆರಂಭಿಸಿದ ಬಿ ಎಸ್ ವೈ ..!

11:53 AM Jul 26, 2021 | Shreeraj Acharya |

ಬೆಂಗಳೂರು :  ರಾಜ್ಯ ರಾಜಕಾರಣದಲ್ಲಿ ನಾಯಕತ್ವ ಬದಲಾವಣೆಯ ವಿಚಾರದ ನಡುವೆ ರಾಜ್ಯ ಬಿಜೆಪಿ ಸರ್ಕಾರ ಎಂದು ಎರಡನೇ ವರ್ಷದ ಸಂಭ್ರಮಾಚರಣೆ ಮಾಡಿಕೊಂಡಿದೆ.

Advertisement

ಸಭೆಯನ್ನು ಉದ್ದೇಶಿಸಿ ಮಾತನಾಡಿದ ಮುಖ್ಯ ಮಂತ್ರಿ ಬಿ ಎಸ್ ಯಡಿಯೂರಪ್ಪ, ಶಿಕಾರಿಪುರಿಂದ ಬಿಜೆಪಿಯೊಂದಿಗೆ ನಾನು ಬಂದಿದ್ದೇನೆ. ಶಿಕಾರಿಪುರದಲ್ಲಿ ಸಂಘದ ಪ್ರಚಾರಕನಾಗಿ ಕಾರ್ಯ ನಿರ್ವಹಿಸಿ, ಚುನಾವಣೆಯಲ್ಲಿ ಗೆದ್ದು, ಘಟಕದ ಅಧ್ಯಕ್ಷನಾಗಿ, ವಿಧಾನ ಸಭಾ ವಿಪಕ್ಷ ನಾಯಕನಾಗಿ, ಮುಖ್ಯಮಂತ್ರಿಯಾಗಿ ಪಕ್ಷದ ಬೇರೆ ಬೇರೆ ಹುದ್ದೆಗಳಲ್ಲಿ ಕೆಲಸ ಮಾಡಿ ಪಕ್ಷವನ್ನು ಕಟ್ಟಿ ಬೆಳೆಸಿದ್ದೇನೆ ಎಂಬ ತೃಪ್ತಿ ನನಗಿದೆ ಎಂದು ಬಿ ಎಸ್ ವೈ ಭಾವುಕರಾಗಿ ನುಡಿದಿದ್ದಾರೆ.

ಶಿಕಾರಿಪುರದ ಜನ ನನ್ನನ್ನು ಏಳು ಬಾರಿ ಆಯ್ಕೆ ಮಾಡಿದ್ದಾರೆ. ರಾಷ್ಟ್ರೀಯ ನಾಯಕರು ನನ್ನನ್ನು ಬೆಂಬಲಿಸಿದ್ದಾರೆ. ಬಿಜೆಪಿ ನೀಡಿದ ಸ್ಥಾನಕ್ಕೆ, ಅವಕಾಶಕ್ಕೆ ನಾನು ಎಂದಿಗೂ ಋಣಿಯಾಗಿರುತ್ತೇನೆ ಎಂದು ಅವರು ಹೇಳಿದ್ದಾರೆ.

ಮೋದಿ ಮತ್ತೆ ಲೋಕಸ ಸಭೆ ಚುನಾವಣೆಯಲ್ಲಿ ಗೆದ್ದು ಬರಲಿ, ದೇಶವನ್ನು ವಿಶ್ವ ಮಟ್ಟದಲ್ಲಿ ತೆಗೆದುಕೊಂಡು ಹೋಗುವ ಶಕ್ತಿ ಅವರಿಗೆ ಒಲಿಯಲಿ ಎಂದು ಅವರು ಶುಭ ಹಾರೈಸಿದ್ದಾರೆ.

ಇನ್ನು, ಕಾರ್ಗಿಲ್ ವಿಜಯ್ ದಿವಸ್ ಆಚರಣೆಯ ಶುಭಾಶಯವನ್ನು ತಿಳಿಸಿದ್ದಲ್ಲದೇ, ಕಾರ್ಗಿಲ್ ಯುದ್ಧದಲ್ಲಿ ಹೋರಾಡಿದ ಯೋಧರ ಶ್ರಮಕ್ಕೆ ಪ್ರಣಾಮಗಳನ್ನು ತಿಳಿಸಿದ್ದಾರೆ.

Advertisement

ಟೋಕಿಯೋ ಒಲಿಂಪಿಕ್ಸ್ ನಲ್ಲಿ ಭಾಗವಹಿಸುತ್ತಿರುವ ಕರ್ನಾಟಕದ ಕ್ರೀಡಾಳುಗಳಿಗೆ ಹಾಗೂ ದೇಶದ ಕ್ರೀಡಾಳುಗಳಿಗೆ ಶುಭಾಶಯ ತಿಳಿಸಿದ್ದಾರೆ.

ಇದನ್ನೂ ಓದಿ : ಕನ್ನಡದ ಹಿರಿಯ ನಟಿ ‘ಅಭಿನಯ ಶಾರದೆ’ ಜಯಂತಿ ಇನ್ನಿಲ್ಲ

Advertisement

Udayavani is now on Telegram. Click here to join our channel and stay updated with the latest news.

Next