Advertisement

ಅಕ್ರಮ ಭೂಮಿಯನ್ನು ಒತ್ತುವರಿ ಮಾಡಿ ಬಡವರಿಗೆ ಮನೆ ಕಟ್ಟಲಾಗುವುದು: ಯಡಿಯೂರಪ್ಪ

09:58 AM Jan 29, 2020 | keerthan |

ಬೆಂಗಳೂರು:  ನಗರದಲ್ಲಿ ಅಕ್ರಮವಾಗಿ ಭೂಮಿ ಒತ್ತುವರಿ ಮಾಡಿಕೊಂಡಿರುವವರ ವಿರುದ್ಧ ತನಿಖೆ ನಡೆಸಿ, ಒತ್ತುವರಿ ಭೂಮಿಯನ್ನು ಸರ್ಕಾರದ ವ್ಯಾಪ್ತಿಗೆ ಒಳಪಡಿಸಿ, ಅಲ್ಲೆಲ್ಲಾ ಬಡವರಿಗೆ ಮನೆ ಕಟ್ಟಿಸಿಕೊಡಲಾಗುವುದು ಎಂದು ಸಿಎಂ ಯಡಿಯೂರಪ್ಪ ಹೇಳಿದರು.

Advertisement

ನಗರದ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಬೆಂಗಳೂರು ನಗರ ಹಾಗೂ ಗ್ರಾಮಾಂತರ ಜಿಲ್ಲೆಗಳ ಜಿಲ್ಲಾಡಳಿತದ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ಅಕ್ರಮ ಸಕ್ರಮ ಯೋಜನೆ ಅಡಿಯಲ್ಲಿ 10 ಸಾವಿರ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣಾ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಬೆಂಗಳೂರು ನಗರದಲ್ಲಿ ಎಲ್ಲೆಲ್ಲಿ ಅಕ್ರಮವಾಗಿ ಉಳ್ಳವರು ಒತ್ತುವರಿ ಮಾಡಿರುವ ಭೂಮಿಯನ್ನು ವಾಪಸ್ ಪಡೆಯುವ ಸಲುವಾಗಿ ಈಗಾಗಲೇ ಸಮಿತಿ ಮಾಡಲಾಗಿದೆ. ಒತ್ತುವರಿ ಮಾಡಿರುವವರ ವಿರುದ್ಧ ತನಿಖೆ ನಡೆಸಿ ಕ್ರಮ ಕೈಗೊಳ್ಳಲಾಗುತ್ತದೆ‌. ಅಲ್ಲದೆ, ಎಲ್ಲಾ ಕಡೆಗಳಲ್ಲಿ ಬಡವರಿಗೆ, ನಿರ್ಗತಿಕರಿಗೆ ಮನೆ ಕಟ್ಟಿಸಿಕೊಡಲು ಕ್ರಮ ಕೈಗೊಳ್ಳಲಾಗುವುದು ಎಂದರು.

ಕಂದಾಯ ಸಚಿವ ಆರ್ ಅಶೋಕ್ ಮಾತನಾಡಿ, ವೃದ್ದಾಪ್ಯ ವೇತನಕ್ಕೆ ಆಧಾರ್ ಕಾರ್ಡನ್ನು ಲಿಂಕ್ ಮಾಡಲಾಗುವುದು. ನಿಜವಾದ ಫಲಾನುಭವಿಗಳು ಮಾತ್ರ ಉಳಿಯುತ್ತಾರೆ. ಇದರಿಂದ ಸರ್ಕಾರಕ್ಕೆ 700 ಕೋಟಿ ರೂ. ಉಳಿತಾಯವಾಗಲಿದೆ ಎಂದು ತಿಳಿಸಿದರು

Advertisement

Udayavani is now on Telegram. Click here to join our channel and stay updated with the latest news.

Next