ಶಿವಮೊಗ್ಗ: ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ ಅವರ ಸಹೋದರನ ಮಗನ ಸಾವು ಮೇಲ್ನೋಟಕ್ಕೆ ಕೊಲೆಯಂತಿದೆ. ಇದರ ಕುರಿತು ಸಮಗ್ರ ತನಿಖೆ ನಡೆಸಲಾಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಕರಣಕ್ಕೆ ಸಂಬಂಧಿಸಿದಂತೆ ಸಮಗ್ರ ತನಿಖೆ ಮಾಡಿಸುತ್ತೇವೆ. ಮೇಲ್ನೋಟಕ್ಕೆ ಕೊಲೆ ಎಂದು ಕಾಣಿಸುತ್ತಿದೆ. ತನಿಖೆಯಿಂದ ಸತ್ಯ ಗೊತ್ತಾಗಲಿದೆ. ಈ ಕುರಿತು ಮುಖ್ಯಮಂತ್ರಿ ಅವರೊಂದಿಗೆ ಚರ್ಚೆ ಮಾಡಿ, ಶೀಘ್ರ ತನಿಖೆ ನಡೆಸುವಂತೆ ಮಾಡಸಲಿದ್ದೇವೆ ಎಂದು ತಿಳಿಸಿದರು.
ಇದನ್ನೂ ಓದಿ:ಟಿ20 ವಿಶ್ವಕಪ್: ಕಿವೀಸ್ ವಿರುದ್ಧ ಹ್ಯಾಟ್ರಿಕ್ ಪಡೆದ ಐರಿಷ್ ವೇಗಿ ಲಿಟಲ್
ಇತ್ತ ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ ಅವರು ಹೊನ್ನಾಳಿಯಲ್ಲಿ ಶಾಸಕ ರೇಣುಕಾಚಾರ್ಯ ಅವರ ಮನೆಗೆ ಭೇಟಿ ನೀಡಿ, ಕುಟುಂಬದವರಿಗೆ ಸಾಂತ್ವನ ಹೇಳಿದರು. ಇದೆ ವೇಳೆ ಮಾತಾಡಿದ ಅವರು, ಚಂದ್ರಶೇಖರ್ ಅವರು ಸಕ್ರಿಯ ರಾಜಕಾರಣದಲ್ಲಿ ಇದ್ದರು. ಅವರ ಸಾವಿನಿಂದ ಬಿಜೆಪಿ ಪಕ್ಷಕ್ಕೆ ನಷ್ಟವಾಗಿದೆ. ಪ್ರಕರಣ ಸಂಬಂಧ ಸೂಕ್ತ ತನಿಖೆಯಾಗಬೇಕಿದೆ ಎಂದರು.