ಶಿವಮೊಗ್ಗ: ಕೇರಳದಿಂದ ಬಂದಿದ್ದವರು ಮುಖಕ್ಕೆ ಬಟ್ಟೆ ಕಟ್ಟಿಕೊಂಡು ಇಂತಹ ಕೆಲಸ ಮಾಡಲು ಹೊರಟ್ಟಿದ್ದರು. ಮಂಗಳೂರು ಗಲಭೆಯಲ್ಲಿ ಪೊಲೀಸ್ ಠಾಣೆ ಸುಡಲು, ಶಸ್ತ್ರಾಸ್ತ್ರ ತೆಗೆದುಕೊಳ್ಳಲು ಹೋಗಿದ್ದಕ್ಕೆ ಗೋಲಿಬಾರ್ ಅಗಿದೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದರು.
ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಮಂಗಳೂರು ಘಟನೆಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದಿದ್ದೇನೆ. ಉದ್ದೇಶಪೂರ್ವಕವಾಗಿ ಅಲ್ಪ ಸಂಖ್ಯಾತರಲ್ಲಿ ಗೊಂದಲ ಮೂಡಿಸುವ ಕೆಲಸ ಮಾಡಲಾಗಿದೆ. ಎಲ್ಲಾ ರೀತಿಯಲ್ಲೂ ಹಿನ್ನಡೆ ಅಗಿದ್ದರಿಂದ ಈ ರೀತಿ ಮಾಡುತ್ತಿದ್ದಾರೆ. ಮಂಗಳೂರು ಘಟನೆ ಬಗ್ಗೆ ಸಿಐಡಿ ಹಾಗು ಮ್ಯಾಜಿಸ್ಟ್ರೇಟ್ ತನಿಖೆ ಮಾಡಲಾಗುತ್ತದೆ ಎಂದರು.
ಪ್ರಧಾನಿ ನರೇಂದ್ರ ಮೋದಿಯವರು ಸಹ ಇದರ ಬಗ್ಗೆ ನಿನ್ನೆ ಹೇಳಿದ್ದಾರೆ. ಕಾನೂನಿನ ಚೌಕಟ್ಟಿನಲ್ಲಿ ಕಾಯ್ದೆ ರೂಪಿಸಲಾಗಿದೆ. ಪ್ರತಿಭಟನೆ ಮಾಡುವವರು ಶಾಂತ ರೀತಿಯಲ್ಲಿ ಮಾಡಿ. ಹಿಂಸಾ ಕೃತ್ಯ ಮಾಡಿದರೆ ದಿಟ್ಟ ಕಾನೂನು ಕ್ರಮ ಕೈಗೊಳ್ಳುವುದು ಅನಿವಾರ್ಯ ಎಂದ ಸಿಎಂ ಎಚ್ಚರಿಸಿದರು.