Advertisement
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸತೀಶ್ ಜಾರಕಿಹೊಳಿ ಹೇಳಿಕೆಯನ್ನು ಒಪ್ಪಲು ಸಾಧ್ಯವಿಲ್ಲ. ಅವರ ಪಕ್ಷದವರೇ ಒಪ್ಪಿಕೊಳ್ಳುತ್ತಿಲ್ಲ. ಹೇಳಿದ್ದನ್ನು ಮತ್ತೆ ಸಮರ್ಥಿಸಿಕೊಳ್ಳುವುದು ಎಷ್ಟರ ಮಟ್ಟಿಗೆ ಸರಿ ಎಂದರು.
Related Articles
Advertisement
ಪಕ್ಷದ ಕೇಂದ್ರ ಚುನಾವಣಾ ಸಮಿತಿ ಸಭೆ ಇರುವುದರಿಂದ ದೆಹಲಿಗೆ ತೆರಳುತ್ತಿದ್ದೇನೆ. ಟಿಕೆಟ್ ಹಂಚಿಕೆ ಸಂಬಂಧ ಸಭೆ ನಡೆಯಲಿದೆ. ಇಂಥ ಸಂದರ್ಭದಲ್ಲಿ ಕರ್ನಾಟಕದ ರಾಜಕೀಯ ಬೆಳವಣಿಗೆಗಳ ಬಗ್ಗೆ ಮಾತುಕತೆ ನಡೆಯುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಸಚಿವ ಸಂಪುಟ ವಿಸ್ತರಣೆ ಹಾಗೂ ಪಕ್ಷದ ನಾಯಕರನ್ನು ಭೇಟಿ ಮಾಡುವ ಕುರಿತು ಮಾತನಾಡಿದ ಅವರು, ಕರ್ನಾಟಕದ ವಿಷಯ ಬಂದಾಗ ಮುಖ್ಯಮಂತ್ರಿಗಳು, ಪಕ್ಷದ ರಾಜ್ಯಾಧ್ಯಕ್ಷರು, ರಾಜ್ಯ ಉಸ್ತುವಾರಿಗಳಿದ್ದಾಗ ಚರ್ಚೆಗೆ ಬರುತ್ತದೆ ಎಂದು ಹೇಳಿದರು.
ಮಾಜಿ ಸಚಿವ ರಮೇಶ್ ಜಾರಕಿಹೊಳಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗುತ್ತಾರೆ ಎಂಬ ಮಾಧ್ಯಮದವರ ಪ್ರಶ್ನೆಗೆ ನನಗೆ ಗೊತ್ತಿಲ್ಲದ ಯಾವುದೇ ವಿಷಯಗಳ ಬಗ್ಗೆ ಮಾತನಾಡುವುದಿಲ್ಲ ಎಂದು ಯಡಿಯೂರಪ್ಪ ಸ್ಪಷ್ಟನೆ ಕೊಟ್ಟರು.
ತಮ್ಮ ಪುತ್ರ ಬಿ.ವೈ.ವಿಜಯೇಂದ್ರ ಅವರು ವರುಣಾದಿಂದ ಸ್ಪರ್ಧಿಸುತ್ತಾರ ಎಂಬ ಮಾಧ್ಯಮದವರ ಪ್ರಶ್ನೆಗೆ ನಾನು ಶಿಕಾರಿಪುರದಿಂದ ಸ್ಪರ್ಧಿಸಬೇಕೆಂದು ಸೂಚಿಸಿದ್ದೇನೆ. ಅಂತಿಮವಾಗಿ ಯಾರಿಗೆ ಟಿಕೆಟ್ ನೀಡಬೇಕು ಎಂಬುದನ್ನು ಹೈಕಮಾಂಡ್ ನಿರ್ಧರಿಸುತ್ತದೆ. ಅವರು ತೆಗೆದುಕೊಳ್ಳುವ ನಿರ್ಧಾರಕ್ಕೆ ಎಲ್ಲರೂ ಬದ್ದವಾಗಿರಬೇಕಾಗುತ್ತದೆ ಎಂದು ಹೇಳಿದರು.