Advertisement
ರಾಜ್ಯಕ್ಕೆ ಮಾಸಿಕ 1.5 ಕೋಟಿ ಲಸಿಕೆ ನೀಡುವಂತೆ ಸಂವಾದದ ಸಂದರ್ಭ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಮೋದಿ ಅವರಲ್ಲಿ ಮನವಿ ಮಾಡಿದರು.
ಕೊರೊನಾ 3ನೇ ಅಲೆಯನ್ನು ಎದುರಿಸಲು ಸರಕಾರ ಅಗ ತ್ಯ ಸಿದ್ಧತೆ ನಡೆಸಿದೆ. ಎಲ್ಲ ಆರೋಗ್ಯ ಕೇಂದ್ರಗಳಲ್ಲಿ ಆಮ್ಲಜನಕ ಸಹಿತ ಹಾಸಿಗೆ, ವೆಂಟಿಲೇಟರ್ ಹಾಸಿಗೆ ಮತ್ತು ಮಕ್ಕಳ ಐಸಿಯು ಮೊದಲಾದ ಸೌಲಭ್ಯ ಹೆಚ್ಚಿಸಲಾಗುತ್ತಿದೆ. ವೈದ್ಯರು, ದಾದಿಯರು, ಪ್ರಯೋ ಗಾಲಯ ತಂತ್ರಜ್ಞರ ಸೇವೆ ಒದಗಿಸಲಾಗುತ್ತಿದೆ. ಅಗತ್ಯ ಪರಿಕರಗಳನ್ನೂ ಸಹ ಖರೀದಿಸಲಾಗುತ್ತಿದೆ ಎಂದರು.
Related Articles
ತಮಿಳುನಾಡು, ಕೇರಳ, ಆಂಧ್ರ ಪ್ರದೇಶ, ಒಡಿಶಾ ಮತ್ತು ಮಹಾರಾಷ್ಟ್ರ ರಾಜ್ಯಗಳ ಮುಖ್ಯ ಮಂತ್ರಿಗಳೂ ಈ ಸಂವಾದದಲ್ಲಿ ಭಾಗಿಯಾಗಿದ್ದರು. ವಿದೇಶಗಳಲ್ಲಿ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ವಹಿಸಬೇಕು. ಪೂರ್ವಸಿದ್ಧತೆ ಮಾಡಿಕೊಳ್ಳಬೇಕು. ಪರೀಕ್ಷೆ, ಪತ್ತೆ, ಚಿಕಿತ್ಸೆ ಮತ್ತು ಲಸಿಕೆ ಪ್ರಕ್ರಿಯೆಗೆ ವೇಗ ನೀಡಬೇಕು ಎಂದು ಪ್ರಧಾನಿ ಮೋದಿ ಸಲಹೆ ನೀಡಿದರು.
Advertisement