Advertisement

ವಲಸೆ ಕಾರ್ಮಿಕರ ಕುರಿತು ಒಡಿಶಾ ಮುಖ್ಯಮಂತ್ರಿಗಳೊಂದಿಗೆ ಬಿಎಸ್ ವೈ ಚರ್ಚೆ

04:55 PM May 02, 2020 | keerthan |

ಬೆಂಗಳೂರು: ಕರ್ನಾಟಕದಲ್ಲಿ ನೆಲೆಸಿರುವ ಒಡಿಶಾ ರಾಜ್ಯದ ವಲಸೆ ಕಾರ್ಮಿಕರನ್ನು ಆ ರಾಜ್ಯಕ್ಕೆ ಕಳುಹಿಸುವ ಬಗ್ಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರೊಂದಿಗೆ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಹಾಗೂ ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ಸಮಾಲೋಚನೆ ನಡೆಸಿದರು.

Advertisement

ರಾಜ್ಯದಲ್ಲಿ ಲಾಕ್ ಡೌನ್ ಸಂದರ್ಭದಲ್ಲಿ ವಲಸೆ ಕಾರ್ಮಿಕರಿಗೆ ಎಲ್ಲ ಅಗತ್ಯ ಸೌಲಭ್ಯಗಳನ್ನು ಒದಗಿಸಲಾಗಿದೆ. ಕಾರ್ಮಿಕರು ಹಸಿವಿನಿಂದ ಬಳಲದಂತೆ ಎಚ್ಚರ ವಹಿಸಲಾಗಿದೆ ಎಂದು ಒಡಿಶಾ ಮುಖ್ಯಮಂತ್ರಿಯವರಿಗೆ ಹಾಗೂ ಕೇಂದ್ರದ ಮಂತ್ರಿಗಳಿಗೆ ಮನವರಿಕೆ ಮಾಡಿಕೊಡಲಾಗಿದೆ.

ಪ್ರಸ್ತುತ ಕೇಂದ್ರ ಸರ್ಕಾರದ ಮಾರ್ಗಸೂಚಿಗಳಂತೆ ವಿವಿಧ ವಲಯಗಳಲ್ಲಿ ಆರ್ಥಿಕ ಚಟುವಟಿಕೆಗಳನ್ನು ಮರು ಪ್ರಾರಂಭ ಮಾಡಲಾಗುತ್ತಿದೆ. ಇದರಿಂದ ಬಹುತೇಕ ಕಾರ್ಮಿಕರಿಗೆ ಮತ್ತೆ ಉದ್ಯೋಗ ದೊರೆಯಲಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಹೊರ ರಾಜ್ಯಗಳಿಗೆ ಕಾರ್ಮಿಕರನ್ನು ಕಳುಹಿಸುವ ಕುರಿತು ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದ್ದು, ಅವರು ಒಡಿಶಾದ ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿದ್ದು, ಸಮನ್ವಯ ನಿರ್ವಹಿಸುವರು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಒಡಿಶಾ ರಾಜ್ಯಕ್ಕೆ ಹಿಂತಿರುಗುವ ಕಾರ್ಮಿಕರ ವಿವರ, ಅವರ ಆರೋಗ್ಯ ತಪಾಸಣೆ ಹಾಗೂ ಅವರ ಕ್ವಾರಂಟೈನ್ ವ್ಯವಸ್ಥೆ ಮತ್ತಿತರ ವಿಷಯಗಳ ಕುರಿತು ಚರ್ಚಿಸಲಾಯಿತು.

Advertisement

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್, ಒಡಿಶಾ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು

Advertisement

Udayavani is now on Telegram. Click here to join our channel and stay updated with the latest news.

Next