ಬೆಂಗಳೂರು: ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರಿಗೆ ವರಿಷ್ಠರು ಬುಲಾವ್ ನೀಡಿದ್ದು, ಇಂದು ಬೆಳಿಗ್ಗೆ ದಿಲ್ಲಿ ವಿಮಾನ ಏರಿದ್ದಾರೆ. ಈ ದಿಢೀರ್ ಬೆಳವಣಿಗೆಯಿಂದ ಸಚಿವ ಸ್ಥಾನ ಆಕಾಂಕ್ಷಿಗಳಿಗೆ ಮತ್ತೆ ನಿರೀಕ್ಷೆ ಗರಿಗೆದರಿದೆ.
ದಿಲ್ಲಿಗೆ ತೆರಳಲೆಂದು ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಆಗಮಿಸಿದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಬಿಎಸ್ ವೈ, “ದಿಲ್ಲಿ ನಾಯಕರು ಕರೆದಿದ್ದಾರೆ. ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಬಿಜೆಪಿ ಉತ್ತಮ ಸಾಧನೆ ಮಾಡಿದೆ. ಈ ವಿಚಾರವನ್ನು ಅವರಿಗೆ ತಿಳಿಸಲಿದ್ದೇನೆ” ಎಂದರು.
ಇದನ್ನೂ ಓದಿ:ಸಂಪುಟ ವಿಸ್ತರಣೆ ಸನ್ನಿಹಿತ?
ಸಂಪುಟ ವಿಸ್ತರಣೆ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು, ನಾನು ಈ ಬಗ್ಗೆ ಚರ್ಚೆ ನಡೆಸಲಿದ್ದೇನೆ ಎಂದರು.
ಸಿಎಂ ರವಿವಾರ ಬೆಳಗ್ಗೆ ದಿಲ್ಲಿಗೆ ಪ್ರಯಾಣ ಬೆಳೆ ಸಿ ಅಲ್ಲಿ ಕೇಂದ್ರದ ಕೆಲವು ಸಚಿವರನ್ನು ಭೇಟಿ ಮಾಡಿ, ರಾಜ್ಯ ಅಭಿವೃದ್ಧಿ ಮತ್ತು ಅನುದಾನದ ವಿಚಾರವಾಗಿ ಚರ್ಚಿಸಲಿದ್ದಾರೆ. ಬಳಿಕ ಪಕ್ಷದ ಹಿರಿಯ ನಾಯಕರೊಂದಿಗೆ ಸಂಪುಟ ವಿಸ್ತರಣೆಯ ಬಗ್ಗೆ ಮಾತುಕತೆ ನಡೆಸುವ ಸಾಧ್ಯತೆಯಿದೆ.
ಇದೇ ತಿಂಗಳ 16 ಮತ್ತು 17ರಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. ಇದಕ್ಕೂ ಮೊದಲು ಸಂಕ್ರಾಂತಿ ವೇಳೆಗೆ ಸಂಪುಟ ವಿಸ್ತರಣೆ ಆಗಬಹುದು ಎನ್ನಲಾಗಿದೆ.