Advertisement
ಇದೇ ವೇಳೆ ಬಿಜೆಪಿ ಸರ್ಕಾರ ಅಸ್ಥಿತ್ವಕ್ಕೆ ಬಂದರೆ ಕುಟುಂಬದ ಸದಸ್ಯರೋರ್ವರಿಗೆ ಸರ್ಕಾರಿ ಉದ್ಯೋಗ ನೀಡುವ ಭರವಸೆ ನೀಡಿದರು.
ಮನೆಯಲ್ಲಿದ್ದ ಸಂತೋಷ್ ತಾಯಿ ಸೇರಿದಂತೆ ಮಹಿಳೆಯರು ಬಿಎಸ್‌ವೈ ಸಮ್ಮುಖದಲ್ಲಿ ಕಣ್ಣೀರಿಟ್ಟರು. ಇಲ್ಲಿ ಗಾಂಜಾ ಮಾರಾಟ ಮಾಡುತ್ತಾರೆ, ಬೆದರಿಕೆ ಹಾಕುತ್ತಾರೆ. ಭಯದಿಂದ ಬದುಕಬೇಕಾಗಿದೆ ಎಂದು ನೋವು ತೋಡಿಕೊಂಡರು. ಆನಂದ್ ರಾವ್ ಸರ್ಕಲ್‌ನಲ್ಲಿ ಪ್ರತಿಭಟನೆ
ಬಿಜೆಪಿ ಸಂತೋಷ್ ಹತ್ಯೆ ಖಂಡಿಸಿ ರಾಜ್ಯಾಧ್ಯಂತ ಪ್ರತಿಭಟನೆಗೆ ಕರೆ ನೀಡಿದ್ದು, ಬೆಂಗಳೂರಿನ ಆನಂದ್ ರಾವ್ ಸರ್ಕಲ್‌ನಲ್ಲಿ ಬಿಜೆಪಿ ನಾಯಕರು ಬೃಹತ್ ಪ್ರತಿಭಟನೆ ನಡೆಸಿ ಆಕ್ರೋಶ ಹೊರ ಹಾಕಿದ್ದಾರೆ. ಸಂಸದೆ ಶೋಭಾ ಕರಂದ್ಲಾಜೆ, ಆರ್.ಅಶೋಕ್, ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಸೇರಿದಂತೆ ಪ್ರಮುಖ ನಾಯಕರು , ಶಾಸಕರು , ಬಿಬಿಎಂಪಿ ಸದಸ್ಯರು ಮತ್ತು ನೂರಾರು ಕಾರ್ಯಕರ್ತರು ಭಾಗಿಯಾಗಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.
Related Articles
ಬುಧವಾರ ಹತ್ಯೆಯಾಗಿದ್ದ ಬಿಜೆಪಿ ಕಾರ್ಯಕರ್ತ ಸಂತೋಷ್ ಕುಟುಂಬಕ್ಕೆ ರಾಜ್ಯ ಸರ್ಕಾರದಿಂದ 10 ಲಕ್ಷ ಪರಿಹಾರ ನೀಡುವುದಾಗಿ ಗೃಹ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ. ಸಂತೋಷ್ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡುವಂತೆ ಮನವಿ ಬಂದಿದೆ.ಈ ಬಗ್ಗೆ ಅಧಿಕಾರಿಗಳ ಜೊತೆ ಚರ್ಚಿಸಿ ಪರಿಶೀಲನೆ ಮಾಡಲಾಗುವುದು ಎಂದು ಹೇಳಿದ್ದಾರೆ.
Advertisement
ನಾಲ್ವರ ಬಂಧನ ಸಂತೋಷ್ ಕೊಲೆ ನಡೆದ ಕೆಲವೇ ನಿಮಿಷಗಳಲ್ಲಿ ಜೆ.ಸಿ.ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಖಾದರ್ ಷರೀಫ್ ಪುತ್ರ ವಾಸೀಂ ಹಾಗೂ ಫಿಲಿಪ್ಸ್‌ರನ್ನು ಬಂಧಿಸಿದ್ದ ಪೊಲೀಸರು, ತಲೆಮರೆಸಿಕೊಂಡಿದ್ದ ಇನ್ನಿಬ್ಬರು ಆರೋಪಿಗಳಾದ
ಉಮರ್ ಹಾಗೂ ಇರ್ಫಾನ್‌ರನ್ನು ಗುರುವಾರ ಬಂಧಿಸಿದ್ದರು. ಗಾಂಜಾ ಸೇದಬೇಡಿ ಎಂದು ಬುದ್ಧಿ ಹೇಳಿದ್ದಕ್ಕೆ ಸಂತೋಷ್ ಕೊಲೆ ನಡೆದಿದೆಎಂದು ಪೊಲೀಸರು ಹೇ ಳುತ್ತಿದ್ದರೂ, ಮೋದಿ ರ್ಯಾಲಿ ಹಿನ್ನೆಲೆಯಲ್ಲಿ ಬ್ಯಾನರ್ ಕಟ್ಟುವ ವಿಚಾರಕ್ಕೆ ಉಂಟಾದ ಜಗಳದಲ್ಲಿ ಸಂತೋಷ್ ಕೊಲೆಗೈಯಲಾಗಿದೆ ಎಂದು ಬಿಜೆಪಿ ಆರೋಪಿಸಿದೆ.