Advertisement

ನೆರೆ ಸಂತ್ರಸ್ತರ ಗಂಜಿ ಕೇಂದ್ರದಲ್ಲಿ ನಡೆಯುತ್ತಿದೆ ಬಡ್ಡಿ ವಸೂಲಿ ದಂಧೆ

09:23 AM Sep 11, 2019 | keerthan |

ಬೆಂಗಳೂರು: ನೆರೆ ಸಂತ್ರಸ್ತರು ವಾಸವಾಗಿರುವ ಗಂಜಿ ಕೇಂದ್ರದಲ್ಲಿ ಬಡ್ಡಿ ವಸೂಲಿ ಮಾಡುತ್ತಿರುವ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರು ರಾಯಚೂರು ಭಾಗದ ಮೈಕ್ರೋ ಫೈನಾನ್ಸ್ ಕಂಪನಿಗಳಿಗೆ ಸೋಮವಾರ ಎಚ್ಚರಿಕೆ ನೀಡಿದ್ದಾರೆ.

Advertisement

ಗೃಹ ಕಚೇರಿ ಕೃಷ್ಣಾದಲ್ಲಿ ದೂರವಾಣಿ ಮೂಲಕ ಎಚ್ಚರಿಕೆ ನೀಡಿದ ಸಿಎಂ ಯಡಿಯೂರಪ್ಪನವರು, ನೆರೆಪೀಡಿತ ಪ್ರದೇಶದಲ್ಲಿ ಇಂತಹ ಪ್ರಕರಣಗಳು ಕಂಡು ಬಂದರೆ ಶಿಸ್ತು ಕ್ರಮ ಕೈಗೊಳ್ಳುವಂತೆ ರಾಯಚೂರು ಜಿಲ್ಲಾಧಿಕಾರಿಗೆ ಸೂಚನೆ ನೀಡಿದರು.

ನೆರೆಪೀಡಿತ ಪ್ರದೇಶದ ಗಂಜಿ ಕೇಂದ್ರದಲ್ಲಿ ವಾಸಿಸುತ್ತಿರುವ ಸಂತ್ರಸ್ತರಿಗೆ ಸಾಲ ಮತ್ತು ಬಡ್ಡಿ ವಸೂಲಿ ಮಾಡಲು ಮೈಕ್ರೋ ಫೈನಾನ್ಸ್ ಕಂಪನಿಗಳು ಮುಂದಾಗಿರುವ ಬಗ್ಗೆ ಆರೋಪಗಳು ಕೇಳಿ ಬಂದ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರು ಈ ಸೂಚನೆ ನೀಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next