ಮುಖ್ಯಮಂತ್ರಿ ಸ್ಥಾನ ಕಳೆದುಕೊಳ್ಳಬೇಕಾಯಿತು ಎಂದು ನಾಗನೂರು ರುದ್ರಾಕ್ಷಿ ಮಠದ ಶ್ರೀ ಡಾ.ನಾಗನೂರು ಸಿದ್ದರಾಮ ಸ್ವಾಮೀಜಿ ಹೇಳಿದರು.
Advertisement
ನಗರದಲ್ಲಿ ಭಾನುವಾರ ಜಿಲ್ಲೆಯ ಲಿಂಗಾಯತ ಶಾಸಕರ ಸನ್ಮಾನ ಸಮಾರಂಭದಲ್ಲಿ ಮಾತನಾಡಿ, ಯಡಿಯೂರಪ್ಪ ಲಿಂಗಾಯತ ಪ್ರತ್ಯೇಕ ಧರ್ಮದ ಹೋರಾಟವನ್ನು ಬೆಂಬಲಿಸಲಿಲ್ಲ.
ಬಿಜೆಪಿ ಇನ್ನೂ ಹೆಚ್ಚಿನ ಸ್ಥಾನಗಳನ್ನು ಗೆದ್ದು ಬಹುಮತ ಪಡೆದು ಬಿಎಸ್‌ವೈ ಮುಖ್ಯಮಂತ್ರಿ ಆಗಿರುತ್ತಿದ್ದರು ಎಂದರು. 2008ರ ವಿಧಾನಸಭಾ ಚುನಾವಣೆ ವೇಳೆ ಯಡಿಯೂರಪ್ಪ ಲಿಂಗಾಯತರ ಬೆಂಬಲ ಪಡೆದು ಮುಖ್ಯಮಂತ್ರಿ ಆಗಿದ್ದರು. 2018ರಲ್ಲಿ ಕಾಂಗ್ರೆಸ್‌ಗೆ ಆಡಳಿತ ವಿರೋಧಿ ಅಲೆಯಿದ್ದರೂ ಲಿಂಗಾಯತ ಹೋರಾಟಕ್ಕೆ ಬೆಂಬಲ ಸೂಚಿಸಿದ್ದರಿಂದ 78 ಸ್ಥಾನ ಪಡೆದು ಅಧಿಕಾರ ನಡೆಸುತ್ತಿದೆ. ಸಮ್ಮಿಶ್ರ ಸರ್ಕಾರದಲ್ಲಿ ಲಿಂಗಾಯತ ಶಾಸಕರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಸಚಿವ ಸ್ಥಾನ ಹಂಚಿಕೆ ವೇಳೆ ಅನ್ಯಾಯವಾಗುತ್ತಿದೆ. ಶಾಸಕರ ಸಂಖ್ಯೆಯ ಅನುಗುಣವಾಗಿ ಸಚಿವ ಸ್ಥಾನ ನೀಡಬೇಕು ಎಂದರು.