Advertisement
ನಗರದ ನೆಹರು ಕ್ರೀಡಾಂಗಣದಲ್ಲಿ ಗುರುವಾರ ಸಹಕಾರಿ ಇಲಾಖೆ ಆಯೋಜಿಸಿದ್ದ 65ನೇ ಸಹಕಾರ ಸಪ್ತಾಹ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ತಾವು ಹಿಂದೆ ಮುಖ್ಯಮಂತ್ರಿಯಾಗಿದ್ದಾಗ ಆರಂಭಿಸಿರುವ ಗ್ರಾಮ ವಾಸ್ತವ್ಯ ಸಂದರ್ಭದಲ್ಲಿ ಬೀದರ ಜಿಲ್ಲೆಯ ಹುಮನಾಬಾದ ತಾಲೂಕಿನ ಹಣಕುಣಿ ಗ್ರಾಮದಲ್ಲಿ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯ ಮನೆಯಲ್ಲಿ ವಾಸ್ತವ್ಯ ಹೂಡಿದ್ದೆ. ಆಗ ಕುಟುಂಬದ ಮನೆಯೊಡೆಯ ತೀರಿ ಹೋದ ಕಾರಣಗಳು ಹಾಗೂ ಈ ಭಾಗದ ರೈತರ ಸಮಸ್ಯೆಗಳನ್ನು ಆಲಿಸಿ ರೈತರ ಪರಿಸ್ಥಿತಿ ಬಗ್ಗೆ ತಿಳಿದುಕೊಂಡು ಮರುಕ ಪಟ್ಟಿದೆ. ಆ ಬಳಿಕ ಬೀದರ ನಗರದ ಗಣೇಶ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ರೈತರ ಸಾಲ ಮನ್ನಾ ಮಾಡಲು ತೀರ್ಮಾನಿಸಿ, ಘೋಷಣೆ ಮಾಡಿದ ಸಂದರ್ಭದಲ್ಲಿ ಆಗ ಆರ್ಥಿಕ ಮಂತ್ರಿಯೂ ಆಗಿದ್ದ ಉಪಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು, ಸಾಲ ಮನ್ನಾ ಮಾಡಲು ಎಲ್ಲಿದೆ ಹಣ. ರೈತರ ಸಾಲ ಮನ್ನಾ ಮಾಡಲು ಸಾಧ್ಯವಿಲ್ಲ ಎಂದು ಶಿವಮೊಗ್ಗದಲ್ಲಿ ಹೇಳಿಕೆ ನೀಡಿದ್ದರು ಎಂದರು.
ನಿಜವಾದ ರೈತಪರ ಕಾಳಜಿವುಳ್ಳ ನಾಯಕರು ಎಂಬುದನ್ನು ತಿಳಿದುಕೊಳ್ಳಬೇಕು ಎಂದರು. ಉತ್ತರ ಪ್ರದೇಶದಲ್ಲಿ ಅಲ್ಲಿನ ಬಿಜೆಪಿ ನೇತೃತ್ವದ ಸರ್ಕಾರ ರೈತರ 32 ಸಾವಿರ ಕೋಟಿ ರೂ. ಸಾಲ ಮನ್ನಾ ಮಾಡುವುದಾಗಿ ಘೋಷಿಸಿದೆ. ಎರಡು ವರ್ಷಗಳಾದರೂ ರೈತರಿಗೆ ಪರಿಹಾರ ಸಿಕ್ಕಿಲ್ಲ. ಅದೇ ಪರಿಸ್ಥಿತಿ ಮಹಾರಾಷ್ಟ್ರ ಸರ್ಕಾರದಲ್ಲೂ ಆಗಿದೆ. ಈ ಬಗ್ಗೆ ಪ್ರಜ್ಞಾವಂತ ರೈತರು ಅವಲೋಕನ ಮಾಡಬೇಕಿದೆ. ಅಲ್ಲದೆ, ಬಿಜೆಪಿಯವರು ಕೂಡ ಅವರ ಪಕ್ಷ ಅಧಿಕಾರದಲ್ಲಿರುವ ರಾಜ್ಯಗಳಲ್ಲಿ ರೈತರ ಸಾಲಮನ್ನ ಬಗ್ಗೆ ಏನಾಗಿದೆ ಎಂಬುವುದನ್ನು ತಿಳಿಸಿದುಕೊಳ್ಳಬೇಕು.
Related Articles
Advertisement
ಕಾರ್ಯಕ್ರಮದಲ್ಲಿ ರಾಜ್ಯದ 10 ಸಹಕಾರಿಗಳಿಗೆ ಸಹಕಾರ ರತ್ನ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು. ನಾಡಿನ ಹಲವೆಡೆಯ ಸಹಕಾರಿಗಳು ಸೇರಿದಂತೆ ಜಿಲ್ಲೆಯ ಸ್ವಸಹಾಯ ಗುಂಪುಗಳ ಮಹಿಳಾ ಸದಸ್ಯರು ಪಾಲ್ಗೊಂಡಿದ್ದರು. ಸಹಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಂಡೆಪ್ಪ ಖಾಶೆಂಪೂರ್, ಗಣಿ ಮತ್ತು ಭೂ ವಿಜ್ಞಾನ ಸಚಿವ ರಾಜಶೇಖರ್ ಪಾಟೀಲ, ಪಶು ಸಂಗೋಪನಾ ಸಚಿವ ವೆಂಕಟರಾವ್ ನಾಡಗೌಡ, ಸಂಸದ ಭಗವಂತ್ ಖೂಬಾ, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ, ಶಾಸಕರಾದ ರಹೀಂ ಖಾನ್, ಬಿ.ನಾರಾಯಣರಾವ್, ಅರವಿಂದ ಅರಳಿ, ಚಂದ್ರಶೇಖರ್ ಪಾಟೀಲ, ಸಹಕಾರಿ ಇಲಾಖೆ ಪ್ರಧಾನ ಕಾರ್ಯದರ್ಶಿ ಡಾ|ಎನ್.ನಾಗಾಂಬಿಕಾದೇವಿ, ಕರ್ನಾಟಕ ರಾಜ್ಯ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಕೆ.ಎನ್. ರಾಜಣ್ಣ, ಕುರಿ ಮತ್ತು ಮೇಕೆ ಸಾಕಾಣಿಕೆದಾರರ ಸಂಘಟಗಳ ಮಹಾಮಂಡಳ ಅಧ್ಯಕ್ಷ ಪಂಡಿತರಾವ್ ಚಿದ್ರಿ, ರಾಜ್ಯ ಸಹಕಾರ ಮಹಿಳಾ ಮಂಡಳ ಅಧ್ಯಕ್ಷೆ ಶಕುಂತಲಾ ಬೆಲ್ದಾಳೆ, ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಭಾರತಬಾಯಿ ಶೇರಕಾರ, ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಅಧ್ಯಕ್ಷ ಉಮಾಕಾಂತ್ ನಾಗಮಾರಪಳ್ಳಿ, ಉಪಾಧ್ಯಕ್ಷ ಭೀಮರಾವ್ ಪಾಟೀಲ, ನಗರಸಭೆ ಉಪಾಧ್ಯಕ್ಷೆ ಶಾಲೀನಿ ಚಿಂತಾಮಣಿ ಸೇರಿದಂತೆ ಸಹಕಾರಿ ಇಲಾಖೆ ಅಧಿಕಾರಿಗಳುಹಾಗೂ ನಿರ್ದೇಶಕರು ಉಪಸ್ಥಿತರಿದ್ದರು.