Advertisement

ಮುಂದಿನ ಮೂರು ವರ್ಷ ಬಿಎಸ್ ವೈ ಅವರೇ ಮುಖ್ಯಮಂತ್ರಿ: ನಳೀನ್ ಕುಮಾರ್ ಕಟೀಲ್

04:38 PM Sep 29, 2020 | keerthan |

ಹಾವೇರಿ: ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಮುಖ್ಯಮಂತ್ರಿ ಬದಲಾವಣೆ ಆಗುವುದಿಲ್ಲ. ಎಲ್ಲೂ ಇದರ ಕುರಿತು ಚರ್ಚೆ, ಮಾತುಕತೆಯಾಗಿಲ್ಲ. ಯಾರೂ ಕೂಡ ಇದರ ಬಗ್ಗೆ ಮಾತನಾಡಿಲ್ಲ. ಮುಂದಿನ ಮೂರು ವರ್ಷ ಬಿಎಸ್ ಯಡಿಯೂರಪ್ಪ ಅವರೇ ಮುಖ್ಯಮಂತ್ರಿಯಾಗಿ ಮುಂದುವರೆಯುತ್ತಾರೆ‌ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೇಳಿದರು.

Advertisement

ನಗರದಲ್ಲಿ ಮಾತನಾಡಿದ ಅವರು, ಸಚಿವ ಸಂಪುಟ ವಿಸ್ತರಣೆಯು ಮುಖ್ಯಮಂತ್ರಿ ವಿವೇಚನೆಗೆ ಬಿಟ್ಟ ವಿಚಾರ ಎಂದರು.

ಸುರೇಶ್ ಅಂಗಡಿಯವರನ್ನು ಮುಖ್ಯಮಂತ್ರಿ ಮಾಡಬೇಕು ಎಂದು ಹಿಂದೆ ಸಭೆಯಾಗಿತ್ತು ಎಂಬ ಸೋದರ ಮಾವ ಲಿಂಗರಾಜ ಹೇಳಿಕೆ ವಿಚಾರವಾಗಿ ಮಾತನಾಡಿದ ಕಟೀಲ್, ಸುರೇಶ್ ಅಂಗಡಿ ನನಗೆ ಬಹಳ ಆತ್ಮೀಯರು ಅವರು ಎಂದು ಹಾಗೇ ಹೇಳಿಲ್ಲ ಎಂದು ಸ್ಪಷ್ಟಪಡಿಸಿದರು.

ಕೇಂದ್ರ ಮತ್ತು ರಾಜ್ಯ ಸರ್ಕಾರದ ರೈತ ಪರವಾದ ಕಾಯ್ದೆ ವಿರುದ್ಧ ಕಾಂಗ್ರೆಸ್ ರಾಜಕಾರಣ ಮಾಡಿದೆ. ರೈತರನ್ನು ಎತ್ತಿ ಕಟ್ಟುವ ಕೆಲಸ ಮಾಡಿದೆ. ರೈತನೆ ತನ್ನ ಬೆಳೆಗಳ ಮಾರುಕಟ್ಟೆ ಧಾರಣೆ ರೈತನೇ ಮಾಡಬೇಕು. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಎಪಿಎಂಸಿ ಕಾಯ್ದೆ ತಿದ್ದುಪಡಿ ತಂದಿದೆ‌. ಈ ಕಾಯ್ದೆಯಿಂದ ಬಿಜೆಗೆ ಲಾಭವಾಗುತ್ತದೆ ಎಂದು ವಿರೋಧಿಸುತ್ತಿದ್ದಾರೆ ಎಂದರು.

ಇದನ್ನೂ ಓದಿ:ಶಾಲೆ ತೆರೆಯದ ಕಾರಣ ಬಾಲ್ಯ ವಿವಾಹ, ಬಾಲ ಕಾರ್ಮಿಕರ ಸಂಖ್ಯೆ ಹೆಚ್ಚುತ್ತಿದೆ: ಸುರೇಶ್ ಕುಮಾರ್

Advertisement

ದಲ್ಲಾಳಿಗಳ ಪರವಾಗಿ ಕಾಂಗ್ರೆಸ್ ಬ್ಯಾಟಿಂಗ್ ಮಾಡುತ್ತಿದೆ. ರೈತರ ದಲ್ಲಾಳಿಗಳ ತುಳಿತಕ್ಕೆ ಒಳಗಾಗಿದ್ದಾರೆ. ಇವತ್ತಿನಿಂದ ಅದು ಪರಿವರ್ತನೆಯಾಗಿದೆ‌. ಮುಂದೆ ರೈತನ ತೀರ್ಮಾನವೇ ಅಂತಿಮ ತೀರ್ಮಾನವಾಗುತ್ತದೆ. ದಲ್ಲಾಳಿಗಳು ರೈತ ಮನೆ ಬಾಗಿಲಿಗೆ ಬರುತ್ತಾರೆ. ರೈತ ವಿರೋಧಿಯಾಗಿ ಕಾಂಗ್ರೆಸ್ ತೀರ್ಮಾನ ಮಾಡಿದೆ.

ನಿನ್ನೆಯ ಬಂದ್ ಗೆ ಬೆಂಬಲ ಸೂಚಿಸಿ ಕಿಚ್ಚು ಹಚ್ಚುವ ಪ್ರಯತ್ನ ಮಾಡಿದ್ದಾರೆ. ಬಂದ್ ವಿಫಲವಾಗಿದೆ, ರಾಜ್ಯದ ಜನರು ಕೇಂದ್ರ,ರಾಜ್ಯ ಸರ್ಕಾರದ ಪರವಾಗಿ ನಿಂತಿದ್ದಾರೆ‌. ಕಾಂಗ್ರೆಸ್ ರೈತ ವಿರೋಧಿಯಾಗಿದೆ ಎಂದು ಕಟೀಲ್ ವಾಗ್ದಾಳಿ ನಡೆಸಿದರು.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ

Advertisement

Udayavani is now on Telegram. Click here to join our channel and stay updated with the latest news.

Next