Advertisement
ಜು.25 ರಾತ್ರಿ ಭೋಜನಕೂಟ ಮುಗಿಸಿ ಜಿಲ್ಲಾ ಉಸ್ತುವಾರಿ ಸಚಿವರುಗಳು ತಮ್ಮ ಜಿಲ್ಲೆಗಳಿಗೆ ತೆರಳಿ ಮರುದಿನ (ಜು.26) ರಂದು ಎರಡು ವರ್ಷದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಸಾಧ್ಯವಿಲ್ಲ ಎಂಬ ಕಾರಣಕ್ಕೆ ಭೋಜನ ಕೂಟವನ್ನು ಮುಂದೂಡಿಕೆ ಮಾಡಲಾಗಿದೆ ಎಂದು ವರದಿಯಾಗಿದೆ.
Related Articles
Advertisement
ಶಾಸಕಾಂಗ ಸಭೆಯೂ ರದ್ದು: ಜು. 26ಕ್ಕೆ ರಾಜ್ಯ ಸರ್ಕಾರ 2 ವರ್ಷ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಜು.25ರಂದು ಸಿಎಂ ಕರೆದಿದ್ದ ಶಾಸಕಾಂಗ ಪಕ್ಷದ ಸಭೆ ರದ್ದಾಗಿದೆ. ಸರ್ಕಾರ ಎರಡು ವರ್ಷ ಪೂರೈಸಿದ್ದರಿಂದಾಗಿ ಶಾಸಕರೊಂದಿಗೆ ಮುಕ್ತವಾಗಿ ಚರ್ಚಿಸಲು ಸಿಎಂ ಬಿಎಸ್‌ವೈ ನಿರ್ಧರಿಸಿದ್ದರು. ಈ ಬಗ್ಗೆ ಮಾಧ್ಯಮಗಳಿಗೂ ಅಧಿಕೃತವಾಗಿ ಹೇಳಿದ್ದರು. ಆದರೆ, ಪಕ್ಷದ ಹೈಕಮಾಂಡ್ ಈ ಸಂದರ್ಭದಲ್ಲಿ ಶಾಸಕಾಂಗ ಸಭೆ ನಡೆಸದಂತೆ ಸೂಚನೆ ನೀಡಿದೆ ಎಂದು ಹೇಳಲಾಗುತ್ತಿದೆ.
ಜು. 25ರ ಬೆಳಿಗ್ಗೆ 11.30ಕ್ಕೆ ಕರೆದಿದ್ದ ಶಾಸಕಾಂಗ ಪಕ್ಷದ ಸಭೆಯನ್ನು ರದ್ದುಪಡಿಸಲಾಗಿದೆ ಎಂದು ಸರ್ಕಾರದ ಮುಖ್ಯ ಸಚೇತಕ ಸುನೀಲ್‌ಕುಮಾರ್ ಪಕ್ಷದ ಶಾಸಕರಿಗೆ ಮಾಹಿತಿ ನೀಡಿದ್ದಾರೆ. ಇದರ ಬೆನ್ನಲ್ಲೇ ಭೋಜನ ಕೂಟವೂ ರದ್ದಾಗಿದೆ.