Advertisement
ಶುಕ್ರವಾರ ಜ್ಞಾನಜ್ಯೋತಿ ಸಭಾಂಗಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜ್ಞಾನಭಾರತಿಯಲ್ಲಿರುವ ಪರೀಕ್ಷಾ ಭವನವನ್ನು ಒಂದು ವರ್ಷದೊಳಗೆ ಉನ್ನತೀಕರಿಸಲಾಗುತ್ತದೆ. ನಿಗದಿತ ಸಮಯದೊಳಗೆ ಫಲಿತಾಂಶ ನೀಡಲಿದ್ದೇವೆ. ಯುಜಿಸಿಯ ನ್ಯಾಷನಲ್ ಅಕಾಡೆಮಿಕ್ ಡೆಪಾಸಿಟರಿ (ಎನ್‌ಎಡಿ) ಕಾರ್ಯಕ್ರಮದ ಸಹಕಾರದೊಂದಿಗೆ ಎಲ್ಲ ವಿದ್ಯಾರ್ಥಿಗಳಿಗೂ ಆನ್‌ಲೈನ್ ಮೂಲಕವೇ ಅಂಕಪಟ್ಟಿ ವಿತರಿಸಲಾಗುತ್ತದೆ ಎಂದರು.
Related Articles
Advertisement
ಯುವಿಸಿಇಗೆ ಸ್ವಾಯತ್ತ ಸ್ಥಾನಮಾನ: ವಿಶ್ವವಿದ್ಯಾಲಯ ವಿಶ್ವೇಶ್ವರಯ್ಯ ಕಾಲೇಜ್ ಆಫ್ ಇಂಜಿನಿಯರಿಂಗ್‌ಗೆ (ಯುವಿಸಿಇ) ಸ್ವಾಯತ್ತ ಸ್ಥಾನಮಾನ ನೀಡುವ ಸಂಬಂಧ ರಾಜ್ಯ ಸರ್ಕಾರಕ್ಕೆ ಅತಿ ಶೀಘ್ರದಲ್ಲಿ ಪ್ರಸ್ತಾವನೆ ಸಲ್ಲಿಸಲಿದ್ದೇವೆ. ಇಲ್ಲಿ ಸುಮಾರು 4500 ವಿದ್ಯಾರ್ಥಿಗಳು ಅಧ್ಯಯನ ಮಾಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಖಾಲಿ ಇರುವ ಬೋಧಕ ಮತ್ತು ಬೋಧಕೇತರ ಹುದ್ದೆ ಭರ್ತಿ ಮಾಡಿಕೊಳ್ಳಲಿದ್ದೇವೆ. ಬೆಂವಿವಿ ರಸಾಯಶಾಸ್ತ್ರ, ಭೌತಶಾಸ್ತ್ರ ಹಾಗೂ ಗಣಿತಶಾಸ್ತ್ರ ವಿಭಾಗ ಸೇರಿದಂತೆ ವಿವಿಧ ಇಂಜಿನಿಯರಿಂಗ್ ವಿಭಾಗದಲ್ಲಿ ಒಟ್ಟು 200 ಬೋಧಕ ಹುದ್ದೆಗಳಲ್ಲಿ 96 ಹುದ್ದೆ ಖಾಲಿ ಇದ್ದು, ಅತಿ ಶೀಘ್ರದಲ್ಲಿ ಭರ್ತಿಗೆ ಕ್ರಮ ತೆಗೆದುಕೊಳ್ಳಲಾಗುತ್ತದೆ. ಬೋಧಕೇತರ ಸಿಬ್ಬಂದಿ ನೇಮಕವು ನಡೆಯಲಿದೆ ಎಂದು ಹೇಳಿದರು.
ಸೋಲಾರ್ ಅಳವಡಿಕೆ: ಜ್ಞಾನಭಾರತಿ ಆವರಣದಲ್ಲಿ ಸೋಲಾರ್ ಪ್ಯಾನಲ್‌ಗಳನ್ನು ಅಳವಡಿಸುತ್ತಿದ್ದೇವೆ. ಇದರಿಂದ ಶೇ.50ರಷ್ಟು ವಿದ್ಯುತ್ ಬಿಲ್ ಉಳಿತಾಯವಾಗಲಿದೆ. ಸದ್ಯ ವಾರ್ಷಿಕ 80 ಲಕ್ಷ ವಿದ್ಯುತ್ ಬಿಲ್ ಪಾವತಿಸುತ್ತಿದ್ದು, ಅದು 40 ಲಕ್ಷಕ್ಕೆ ಇಳಿಯಲಿದೆ. ಹಾಗೆಯೇ ಮುಂದಿನ ಶೈಕ್ಷಣಿಕ ವರ್ಷದಿಂದ 25ಕ್ಕೂ ಅಧಿಕ ಹೊಸ ಕೋರ್ಸ್‌ಗಳನ್ನು ಆರಂಭಿಸಲಿದ್ದೇವೆ. ಯುವ ಸಂಶೋಧನಾ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಲು ಸಂಶೋಧನಾ ನಿಧಿ ಸ್ಥಾಪಿಸಲಿದ್ದೇವೆ ಎಂದು ಮಾಹಿತಿ ನೀಡಿದರು. ಕುಲಸಚಿವ ಪ್ರೊ.ಬಿ.ಕೆ.ರವಿ ಸುದ್ದಿಗೋಷ್ಠಿಯಲ್ಲಿದ್ದರು.
ರಾಮನಗರ ವಿವಿಯಾಗಲಿ: ರಾಮನಗರ ಸ್ನಾತಕೋತ್ತರ ಕೇಂದ್ರದ ಸಮಗ್ರ ಅಭಿವೃದ್ಧಿಗೆ ಎಂ.ಕಾಂ, ಅರ್ಥಶಾಸ್ತ್ರ ಕೋರ್ಸ್‌ಗಳ ಜತೆಗೆ ಈ ವರ್ಷ ಗಣಿತಶಾಸ್ತ್ರ, ಕನ್ನಡ, ಇತಿಹಾಸ, ರಾಜ್ಯಶಾಸ್ತ್ರ, ಸಮಾಜಶಾಸ್ತ್ರ, ಗ್ರಾಮೀಣಾಭಿವೃದ್ಧಿ ಮತ್ತು ಸಮಾಜ ಕಾರ್ಯ ಕೋರ್ಸ್‌ಗಳನ್ನು ಆರಂಭಿಸಲಿದ್ದೇವೆ. ಮುಂದಿನ 10 ವರ್ಷದಲ್ಲಿ ಈ ಪಿಜಿ ಕೇಂದ್ರ ವಿಶ್ವವಿದ್ಯಾಲಯವಾಗಿ ರೂಪುಗೊಳ್ಳಬೇಕು ಎಂಬ ಆಶಯ ವ್ಯಕ್ತಪಡಿಸಿದರು.