Advertisement
ಗೌತಮ ಬುದ್ಧ ಬೌದ್ಧ ಧರ್ಮದವರಿಗೆ ಮಾತ್ರ ಸೀಮಿತವಾಗಿಲ್ಲ. ಬದುಕುವ ರೀತಿ, ಅದಕ್ಕಾಗಿ ಅಳವಡಿಸಿಕೊಳ್ಳಬೇಕಾದ ಮೌಲ್ಯಗಳ ಬಗ್ಗೆ ತಿಳಿ ಹೇಳಿ, ಜಗತ್ತಿಗೆ ಗುರುವಾದವರು. ಅರಸೊತ್ತಿಗೆಯನ್ನು ತ್ಯಜಿಸಿ, ಬದುಕಿನಲ್ಲಿ ನೆಮ್ಮದಿ ಹಾಗೂ ಶಾಂತಿಯನ್ನು ಅರಿಸಿ, ವಿರಾಗಿಯಾಗಿ ಭರತಖಂಡದುದಕ್ಕೂ ಶಾಂತಿ, ಅಹಿಂಸಾ ತಣ್ತೀಗಳನ್ನು ಸಾರಿದರು. ಲೋಕದ ಸಂಕಟಗಳಿಗೆ ಪರಿಹಾರ ಹುಡುಕಿಕೊಟ್ಟ ಆಧ್ಯಾತ್ಮಿಕ ಪುರುಷ. ಧ್ಯಾನ, ದಾನ ಜೀವನದ ಬಗ್ಗೆ ಸದಾಕಾಲ ಚಿಂತಿಸಿ ಅದನ್ನು ಜನರಿಗೆ ತಿಳಿಸಿ ಅಪಾರ ಅನುಯಾಯಿಗಳನ್ನು ಗಳಿಸಿಕೊಂಡವರು.
Related Articles
ಹಲವು ವರ್ಷಗಳ ಧ್ಯಾನ, ತಪಸ್ಸು, ಅನುಭವ, ಅಧ್ಯಯನಗಳ ಮೂಲಕ ನಿಜವಾದ ಮಾನವ ಧರ್ಮದ ಆಶಯಗಳನ್ನು ಬುದ್ಧ ಜಗತ್ತಿಗೆ ತಿಳಿಸಿದ್ದಾನೆ. ವಾರಾಣಾಸಿಯ ಜಿಂಕೆಗಳ ವನದಲ್ಲಿ ಮೊದಲ ಬಾರಿಗೆ ಧಾರ್ಮಿಕ, ಅಧ್ಯಾತ್ಮ ಉಪನ್ಯಾಸಗಳನ್ನು ನೀಡುವ ಮೂಲಕ ಬೌದ್ಧ ಧರ್ಮದ ಆಶಯಗಳನ್ನು ಬಿತ್ತಿದ್ದ ಬುದ್ಧ, ಮನುಕುಲ ಅನುಭವಿಸುತ್ತಿರುವ ಕಷ್ಟಗಳಿಗೆ ಸ್ಪಂದಿಸುವುದೇ ಧರ್ಮದ ನಿಜವಾದ ಅರ್ಥ ಎನ್ನುತ್ತಾನೆ.
Advertisement
ನಮ್ಮದು ಆ ಧರ್ಮ, ಈ ಧರ್ಮವೆಂದು ನಿರಂತರ ಕಚ್ಚಾಡುತ್ತೇವೆ. ಪ್ರತಿಯೊಬ್ಬರೂ ತಮ್ಮ ಧರ್ಮವೇ ಶ್ರೇಷ್ಠ ಎಂದು ಅನಗತ್ಯ ಚರ್ಚೆಯಲ್ಲಿ ತೊಡಗುತ್ತಾರೆ. ಆದರೆ ನಿಜ ವಾದ ಧರ್ಮವು ಒಬ್ಬರ ಕಷ್ಟಗಳಿಗೆ ಇನ್ನೊಬ್ಬರು ಸ್ಪಂದಿಸುವುದೇ ಆಗಿರುತ್ತದೆ ಎನ್ನುತ್ತಾನೆ ಬುದ್ಧ.
ಯಶಸ್ವಿ ಜೀವನಕ್ಕೆ ಎಂಟು ಸನ್ಮಾರ್ಗಜೀವನವೂ ಯಶಸ್ವಿಯಾಗಿ ಸಾಕಾರಗೊಳ್ಳಬೇಕಾದರೆ ಎಂಟು ಸನ್ಮಾರ್ಗಗಳಾದ ಸದ್ಭಾವನೆ, ಸತ್ಸಂಕಲ್ಪ, ಸದ್ವಚನ, ಸದ್ವರ್ತನೆ, ಸತ್‌ಶುದ್ಧಿ, ಸದಾಲೋಚನೆ, ಸದಾಂತರ್ಯ ಮತ್ತು ಸದಾಮೋದ ಎಂಬ ಎಂಟು ಸನ್ಮಾರ್ಗಗಳ ಪಾಲಿ ಸು ವಂತೆ ಹೇಳಿ ರುವ ಬುದ್ಧ ಈ ಮೂಲಕ ಜೀವನದ ಯಶಸ್ಸಿನ ಮೆಟ್ಟಿಲುಗಳನ್ನು ಸುಲಭವಾಗಿ ಹತ್ತಬಹುದು ಎನ್ನುತ್ತಾನೆ. ನಾವು ನಡೆಯುವ ದಾರಿ ಸರಿಯಾಗಿದ್ದರೆ, ನಾವು ಮಾಡುವ ಕಾರ್ಯ ಸತ್ಯ ಶುದ್ಧವಾಗಿದ್ದರೆ ಸಾಧನೆಯ ಶಿಖರವೇರಲು ನಮಗೆ ಯಾವುದೇ ಅಡೆತಡೆಗಳು ಉಂಟಾಗಲಾರದು ಎಂಬುದು ಬುದ್ಧನ ಬೋಧನೆಯ ಸಾರ. ಅಹಿಂಸೆಯನ್ನು ಪ್ರತಿಪಾದಿಸಿದ ಬುದ್ಧ ದಾನ ಮಾಡುವುದು, ಸತ್ಯ ಬೋಧನೆ, ಮದ್ಯಪಾನ ಮಾಡದಿರುವುದು ಹಾಗೂ ಶೀಲವಂತನಾಗಿ ಬದುಕುವಂತೆ ಕರೆ ನೀಡಿದನು. ಪ್ರತಿಯೊಬ್ಬರೂ ತಮ್ಮ ಬದುಕಿನಲ್ಲಿ ಈ ಪಂಚಶೀಲಗಳನ್ನು ಅಳವಡಿಸಿಕೊಂಡರೆ ಈ ಸಮಾಜ ಸುಖ, ಶಾಂತಿ, ನೆಮ್ಮದಿಯಿಂದ ಇರಲು ಸಾಧ್ಯವಿದೆ ಎನ್ನುತ್ತಾನೆ. ಅಹಿಂಸೆಯ ಪ್ರತಿಪಾದನೆ
ಬುದ್ಧ, ಮಹಾವೀರ, ವಿವೇಕಾನಂದ, ಸೂಫಿ ಸಂತರು ಹಾಗೂ ಗಾಂಧೀಯವರೆಗೂ ಎಲ್ಲ ಆಧ್ಯಾತ್ಮಿಕ ಪುರುಷರು ಬೋಧಿಸಿದ್ದು ಆಹಿಂಸೆಯ ಪ್ರತಿಪಾದನೆಯನ್ನು. ಕ್ರಿ.ಪೂ. 6ನೇ ಶತಮಾನದಲ್ಲಿ ನಡೆಯುತ್ತಿದ ಪ್ರಾಣಿ ಹಿಂಸೆ, ನರಬಲಿ, ಸಾಮಾಜ್ಯ ವಿಸ್ತರಣೆಯ ದಾಹದ ಹಿಂಸೆ, ಇದನ್ನು ಬುದ್ಧನು ವಿರೋಧಿಸಿ, ಅಹಿಂಸೆಯನ್ನು ಪ್ರತಿಪಾದಿಸಿದನು. ಅಹಿಂಸೆಯ ಪ್ರತಿಪಾದನೆ ಕುರಿತು ಬುದ್ಧನೇ ಹೇಳುವಂತೆ, ನಾವು ಯಾವ ಪ್ರಾಣಿಗೂ ಜೀವ ಕೊಡಲಾರೆವೂ, ಅವುಗಳ ಜೀವ ತೆಗೆಯುವ ಹಕ್ಕು ನಮ್ಮಗಿಲ್ಲ. ನಾವು ನಮ್ಮ ದೇಹವನ್ನು ಪ್ರಾಣವನ್ನು ಪ್ರೀತಿಸುವಂತೆ ಇತರೆ ಪ್ರಾಣಿಗಳನ್ನು ಪ್ರೀತಿಸಬೇಕೆಂದು ಹೇಳಿ ನಿಜ ಪ್ರೀತಿಯ ಅಂತಃಕರಣದ
ಬೋಧನೆಯನ್ನು ಮಾಡುತ್ತಾನೆ. ಬಾಳೇ ಬೋಧನೆ
ಬೌದ್ಧ ಧರ್ಮ ಹಾಗೂ ಬುದ್ಧನ ಉಪದೇಶ ಏನಿರಬಹುದು ಎಂಬ ಉತ್ತರವನ್ನು ಹುಡುಕುತ್ತಾ ಹೊರಟರೇ, ತಿಳಿಯುವುದನೇಂದರೆ ಬುದ್ಧನ ಬಾಳೇ (ಜೀವನ)ಆತನ ಬೋಧನೆಯಾಗಿತ್ತು. ಎಂದಿಗೂ ಕೂಡ ತನ್ನ ಆದರ್ಶ, ಆಶಯಗಳನ್ನು ದಿಕ್ಕರಿಸಿದವನಲ್ಲ. ಎಂತ ಸಾವಿನ ದವಡೆಯಲ್ಲೂ ಸಿಲುಕಿಕೊಂಡರೂ ತಾನೂ ನಂಬಿದ ಸತ್ಯಗಳನ್ನು ಬಿಟ್ಟವನಲ್ಲ. ಬುದ್ಧ ಜೀವನದುದ್ದಕ್ಕೂ ನೊಂದವರ ಬಾಳಿಗೆ ಬೆಳಕಾದವನೂ. ಸಮಾಜದಲ್ಲಿ ತುಡಿತಕ್ಕೊಳಗಾದವರ ಕಣ್ಣೀರ ಒರೆಸಿದನು. ದ್ವೇಷ, ಅಸೂಯೆಗಳನ್ನು ನಿರ್ನಾಮ ಮಾಡಿ ಸಮಾಜದಲ್ಲಿ ಪ್ರೀತಿಯ ಚಿಲುಮೆಯನ್ನು ಉಕ್ಕಿಸಿದನು. ಹುಟ್ಟು ಮತ್ತು ಸಾವು ಈ ಎರಡು ಬಂಧನಗಳಲ್ಲಿ ನಾವು ಗಳಿಸಬೇಕಾದದ್ದು ಅಪ್ರತಿಮವಾದದ್ದು ಪ್ರೀತಿಯೊಂದೇ ಎಂದು ಜಗತ್ತಿಗೆ ಸಾರಿದನು. ನಾವು ಯಾವ ಪ್ರಾಣಿಗೂ ಜೀವ ಕೊಡಲಾರೆವೂ, ಅವುಗಳ ಜೀವ ತೆಗೆಯುವ ಹಕ್ಕು ನಮ್ಮಗಿಲ್ಲ. ನಾವು ನಮ್ಮ ದೇಹವನ್ನು ಪ್ರಾಣವನ್ನು ಪ್ರೀತಿಸುವಂತೆ ಇತರೆ ಪ್ರಾಣಿಗಳನ್ನು ಪ್ರೀತಿಸಬೇಕು. ಯಾವುದನ್ನೂ ಪ್ರಶ್ನಿಸದೆ ಒಪ್ಪಿಕೊಳ್ಳದಿರಿ.ಯಾರೇ, ಏನೇ ಹೇಳಿದರೂ ಕೂಡ ಅದನ್ನು ಒರೆಗಚ್ಚಿ ನೋಡಿ, ಆಲೋಚಿಸಿ ನಿರ್ಧಾರಕ್ಕೆ ಬನ್ನಿ ಮನುಕುಲ ಅನುಭವಿಸುತ್ತಿರುವ ಕಷ್ಟಗಳಿಗೆ ಸ್ಪಂದಿಸುವುದೇ ಧರ್ಮದ ನಿಜವಾದ ಅರ್ಥ. ಬುದ್ಧ ಪೂರ್ಣಿಮೆ
ಬುದ್ಧನಿಗೆ ಜ್ಞಾನೋದಯವಾದ ದಿನ, ಹುಟ್ಟಿದ ದಿನ ಹಾಗೂ ನಿರ್ವಾಣ ಹೊಂದಿದ ದಿನವನ್ನೂ ಭಾರತಾದ್ಯಂತ ಬುದ್ಧ ಪೂರ್ಣಿಮಾ ಎಂದು ಆಚರಿಸಲಾಗುತ್ತದೆ. ಇದನ್ನು ಕೆಲವು ದೇಶಗಳ ಬುದ್ಧನ ಅನುಯಾಯಿಗಳು ಈ ದಿನವನ್ನು ವೆಸಕ ಎಂದು ಕರೆಯುತ್ತಾರೆ. ವೆಸೆಕ ಎಂದರೆ ಎಪ್ರಿಲ್- ಮೇ ತಿಂಗಳ ಪವಿತ್ರ ದಿನ ಎಂದರ್ಥ.