ನವದೆಹಲಿ: ಬೌದ್ಧ ಧರ್ಮೀಯರ ಪವಿತ್ರ ದಿನಗಳಲ್ಲಿ ಒಂದಾಗಿರುವ ಬುದ್ಧ ಪೂರ್ಣಿಮಾ ದಿನವನ್ನು ವಿಶ್ವದೆಲ್ಲೆಡೆ ಆಚರಿಸಲಾಗುತ್ತಿದ್ದು, ಈ ಹಿನ್ನಲೆಯಲ್ಲಿ ದೇಶದ ಜನತೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ,ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಯವರು ಶುಕ್ರವಾರ ಶುಭ ಕೋರಿದ್ದಾರೆ.
ಬುದ್ಧ ಪೂರ್ಣಿಮೆ ಹಿನ್ನಲೆಯಲ್ಲಿ ಸಾಮಾಜಿಕ ಜಾಲತಾಣ ಟ್ವಿಟರ್ ಮೂಲಕ ದೇಶದ ಜನತೆಗೆ ಶುಭಾಶಯಗಳನ್ನು ಕೋರಿರುವ ರಾಷ್ಟ್ರಪತಿದ್ರೌಪದಿ ಮುರ್ಮು, ನಾನು ಎಲ್ಲಾ ದೇಶವಾಸಿಗಳಿಗೆ ಮತ್ತು ಪ್ರಪಂಚದಾದ್ಯಂತದ ಭಗವಾನ್ ಬುದ್ಧನ ಅನುಯಾಯಿಗಳಿಗೆ ನನ್ನ ಹೃತ್ಪೂರ್ವಕ ಶುಭಾಶಯಗಳನ್ನು ಸಲ್ಲಿಸುತ್ತೇನೆ” ಎಂದು ರಾಷ್ಟ್ರಪತಿಗಳು ಟ್ವೀಟ್ ಮಾಡುವ ಮೂಲಕ ದೇಶದ ಜನತೆಗೆ ಶುಭಾಶಯ ಹೇಳಿದ್ದಾರೆ.
ವಿಡಿಯೋವನ್ನು ಹಂಚಿಕೊಂಡು ಬುದ್ಧ ಪೂರ್ಣಿಮೆಯ ಶುಭಾಶಯ ಕೋರಿದ ಪ್ರಧಾನಿ ಮೋದಿ, ಭಗವಾನ್ ಬುದ್ಧನ ಆದರ್ಶಗಳು ನಮಗೆಲ್ಲರಿಗೂ ಬೆಳಕನ್ನು ನೀಡಲಿ ಮತ್ತು ಶಕ್ತಿಯನ್ನು ನೀಡಲಿ ಎಂದು ಹೇಳಿದ್ದಾರೆ.
Related Articles
ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡ ಶುಭಾಶಯ ಕೋರಿದ್ದಾರೆ. ಎಲ್ಲಾ ದೇಶವಾಸಿಗಳಿಗೆ ಬುದ್ಧ ಪೂರ್ಣಿಮೆಯ ಶುಭಾಶಯಗಳು. ಭಗವಾನ್ ಬುದ್ಧ ಇಡೀ ಜಗತ್ತಿಗೆ ಸತ್ಯ, ಅಹಿಂಸೆ ಮತ್ತು ಕರುಣೆಯ ಸಂದೇಶವನ್ನು ನೀಡಿದರು. ಅವರ ಜೀವನ ಮತ್ತು ಬೋಧನೆಗಳು ನಮಗೆ ಸ್ಫೂರ್ತಿ ನೀಡುತ್ತವೆ ಎಂದು ಹೇಳಿದರು.