Advertisement

Buddhadeb Bhattacharjee: ಪಶ್ಚಿಮ ಬಂಗಾಳದ ಮಾಜಿ ಸಿಎಂ ಬುದ್ಧದೇವ್ ಭಟ್ಟಾಚಾರ್ಯ ನಿಧನ

11:07 AM Aug 08, 2024 | Team Udayavani |

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಬುದ್ಧದೇವ್ ಭಟ್ಟಾಚಾರ್ಯ ಅವರು ದೀರ್ಘಕಾಲದ ಅನಾರೋಗ್ಯದಿಂದ ಗುರುವಾರ (ಆಗಸ್ಟ್ 8) ಬೆಳಿಗ್ಗೆ ತಮ್ಮ ಸ್ವಗೃಹದಲ್ಲಿ ನಿಧನರಾದರು. ಅವರಿಗೆ 80 ವರ್ಷ ವಯಸ್ಸಾಗಿತ್ತು.

Advertisement

ಮಾಜಿ ಸಿಎಂ ದೀರ್ಘಕಾಲದ ಉಸಿರಾಟದ ಸಮಸ್ಯೆಯಿಂದ ಹಲವಾರು ವರ್ಷಗಳಿಂದ ಬಳಲುತ್ತಿದ್ದರು ಎನ್ನಲಾಗಿದ್ದು ಇತ್ತೀಚಿಗೆ ಒಂದು ವಾರದ ಹಿಂದೆ ಉಸಿರಾಟದ ತೊಂದರೆ ಉಲ್ಬಣಗೊಂಡಿದ್ದು ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿ ಮನೆಗೆ ಕರೆತರಲಾಗಿತ್ತು ಎಂದು ಕುಟುಂಬ ಮೂಲಗಳು ತಿಳಿಸಿವೆ.

ಬುದ್ಧದೇವ್ ಭಟ್ಟಾಚಾರ್ಯ ಅವರು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ) ಪಾಲಿಟ್‌ಬ್ಯೂರೋ ಸದಸ್ಯರಾಗಿದ್ದರು ಮತ್ತು 2000 ರಿಂದ 2011 ರವರೆಗೆ ಪಶ್ಚಿಮ ಬಂಗಾಳದ 7 ನೇ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದರು.

ಬುದ್ಧದೇವ್ ಭಟ್ಟಾಚಾರ್ಯ ಅವರು ಪತ್ನಿ ಮೀರಾ ಮತ್ತು ಮಗಳು ಸುಚೇತನಾ ಅವರನ್ನು ಅಗಲಿದ್ದಾರೆ.

ಇದನ್ನೂ ಓದಿ: Amrit Lal Meena: ಹೃದಯಾಘಾತದಿಂದ ರಾಜಸ್ಥಾನದ ಬಿಜೆಪಿ ಶಾಸಕ ಅಮೃತಲಾಲ್ ಮೀನಾ ನಿಧನ

Advertisement

Advertisement

Udayavani is now on Telegram. Click here to join our channel and stay updated with the latest news.