ಹೊಸದಿಲ್ಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು 2021-22ರ ಸಾಲಿನ ಬಜೆಟ್ ಮಂಡಿಸಿದ್ದಾರೆ. ಸತತ ಮೂರನೇ ಬಾರಿಗೆ ಕೇಂದ್ರ ಬಜೆಟ್ ಮಂಡಿಸಿದ ನಿರ್ಮಲಾ ಸೀತಾರಾಮನ್, ಕೆಲವೇ ತಿಂಗಳಲ್ಲಿ ವಿಧಾನಸಭೆ ಚುನಾವಣೆ ನಡೆಯಲಿರುವ ಪಶ್ಚಿಮ ಬಂಗಾಳ, ತಮಿಳು ನಾಡು ಮತ್ತು ಕೇರಳ ರಾಜ್ಯಗಳಿಗೆ ಉತ್ತಮ ಕೊಡುಗೆ ನೀಡಿದ್ದಾರೆ.
ಪಶ್ಚಿಮ ಬಂಗಾಳದಲ್ಲಿ 25 ಸಾವಿರ ಕೋಟಿ ರೂ. ವೆಚ್ಚದಲ್ಲಿ 675 ಕಿ.ಮೀ ಹೆದ್ದಾರಿ ಕಾಮಗಾರಿ ಘೊಷಣೆ ಮಾಡಲಾಗಿದೆ.
ಇದನ್ನೂ ಓದಿ:ವಾಹನ ಸವಾರರಿಗೆ ಕಹಿ ಸುದ್ದಿ: ಪೆಟ್ರೋಲ್ , ಡೀಸೆಲ್ ಬೆಲೆ ಮತ್ತಷ್ಟು ದುಬಾರಿ
ಅಸ್ಸಾಂ ನಲ್ಲಿ 1,300 ಕಿ.ಮೀ ಉದ್ದದ ರಾಷ್ಟ್ರೀಯ ಹೆದ್ದಾರಿ ಅಭಿವೃದ್ದಿಗೊಳಿಸಲು 34 ಸಾವಿರ ಕೋಟಿ ರೂ ನೀಡಲಾಗಿದೆ.
ಕೇರಳದಲ್ಲಿ ಮುಂದಿನ ವರ್ಷದಿಂದಲೇ 11 ಸಾವಿರ ಕಿಲೋ ಮೀಟರ್ ರಾಷ್ಟ್ರೀಯ ಹೆದ್ದಾರಿ ನಿರ್ಮಾಣಕ್ಕೆ ಚಾಲನೆ. ಇದಕ್ಕಾಗಿ 65 ಸಾವಿರ ಕೋಟಿ ರೂಪಾಯಿ ಘೋಷಣೆ.
ಇದನ್ನೂ ಓದಿ:Budget 2021: ಈ ಬಾರಿಯೂ ವೇತನದಾರರಿಗೆ ನಿರಾಸೆ: ಆದಾಯ ತೆರಿಗೆಯಲ್ಲಿ ಬದಲಾವಣೆ ಇಲ್ಲ!
ತಮಿಳು ನಾಡು ರಾಜ್ಯದಲ್ಲಿ 3,500 ಕಿ.ಮೀ ಉದ್ದದ ರಸ್ತೆ ಅಭಿವೃದ್ಧಿ ಕಾರ್ಯಗಳಿಗೆ 1.03 ಲಕ್ಷ ಕೋಟಿ ರೂಪಾಯೀ ಘೋಷಣೆ ಮಾಡಲಾಗಿದೆ.
ಇದನ್ನೂ ಓದಿ:Budget 2021: ಹಿರಿಯ ನಾಗರಿಕರಿಗೆ ತೆರಿಗೆ ರಿಲೀಫ್: ಅಗ್ಗದ ಸಾಲ ನೀಡಲು ಕೇಂದ್ರದ ಒತ್ತು