Advertisement

ಕೇಂದ್ರ ಸರ್ಕಾರ ಬಜೆಟ್‌: ರಸಗೊಬ್ಬರ ಸಬ್ಸಿಡಿ 1.4 ಲಕ್ಷ ಕೋಟಿಗೆ ಏರಿಕೆ?

10:29 PM Jan 17, 2022 | Team Udayavani |

ನವದೆಹಲಿ: ಕೇಂದ್ರ ಸರ್ಕಾರ ಬಜೆಟ್‌ನಲ್ಲಿ ನೀಡುವ ರಸಗೊಬ್ಬರ ಸಬ್ಸಿಡಿಯನ್ನು ಈ ಬಾರಿ ಹೆಚ್ಚಳ ಮಾಡುವ ಸಾಧ್ಯತೆ ಇದೆ.

Advertisement

ಈ ಅಂಶ ಇನ್ನೂ ಪರಿಶೀಲನೆಯ ಹಂತದಲ್ಲಿ ಇದೆ. ಒಂದು ವೇಳೆ, ಫೆ.1ರ ಬಜೆಟ್‌ನಲ್ಲಿ ಘೋಷಣೆಯಾದರೆ, ಸಬ್ಸಿಡಿಯು 1.4 ಲಕ್ಷ ಕೋಟಿ ರೂ.ಗಳಿಗೆ ಏರಿಕೆಯಾಗುವ ಸಾಧ್ಯತೆ ಇದೆ.

2021-22ರ ಬಜೆಟ್‌ನಲ್ಲಿ ಈ ಸಬ್ಸಿಡಿಗಾಗಿ 1.3 ಲಕ್ಷ ಕೋಟಿ ರೂ.ಗಳನ್ನು ಮೀಸಲಿರಿಸಲಾಗಿತ್ತು. ಈಗ ರಸಗೊಬ್ಬರ ತಯಾರಿಕೆಗೆ ಬೇಕಾಗುವ ಕಚ್ಚಾವಸ್ತುಗಳ ಬೆಲೆಗಳು ಹೆಚ್ಚಾಗಿರುವುದರಿಂದ ಈ ಸಬ್ಸಿಡಿ ಮೊತ್ತವನ್ನು ಹೆಚ್ಚಿಸಲು ತೀರ್ಮಾನಿಸಲಾಗಿದೆ ಎಂದು ಹೇಳಲಾಗಿದೆ.

ಕೃಷಿ ಕ್ಷೇತ್ರದಲ್ಲಿ ಬಳಕೆಯಾಗುವ ರಸಗೊಬ್ಬರವನ್ನು ಮಾರುಕಟ್ಟೆ ಬೆಲೆಗಿಂತ ಕಡಿಮೆ ಬೆಲೆಯಲ್ಲಿ ರೈತರಿಗೆ ಸಿಗುವಂತೆ ಮಾಡಲು ಈ ಸಬ್ಸಿಡಿಯನ್ನು ನೀಡಲಾಗುತ್ತದೆ. ಮಾರುಕಟ್ಟೆ ಬೆಲೆಗಿಂತ ಕಡಿಮೆ ಬೆಲೆಯಲ್ಲಿ ರಸಗೊಬ್ಬರ ಮಾರಾಟ ಮಾಡಿದ ಕಂಪನಿಗಳಿಗೆ ಆಗುವ ನಷ್ಟವನ್ನು ತುಂಬಿ ಕೊಡಲು ಈ ಸಬ್ಸಿಡಿ ಹಣ ಬಳಕೆಯಾಗುತ್ತದೆ.

Advertisement

Udayavani is now on Telegram. Click here to join our channel and stay updated with the latest news.

Next