Advertisement
ಇದನ್ನೂ ಓದಿ:State budget 2024; ಅಂಗನವಾಡಿ ಕಾರ್ಯಕರ್ತೆಯರಿಗೆ ಸ್ಮಾರ್ಟ್ ಫೋನ್, ಗ್ರ್ಯಾಚ್ಯುಟಿ ಸವಲತ್ತು
Related Articles
Advertisement
ಗೋಕಾಕ ಜಲಪಾತವನ್ನು ಪ್ರೇಕ್ಷಣೀಯ ಸ್ಥಳವಾಗಿ ಅಭಿವೃದ್ಧಿಪಡಿಸಲಾಗುವುದು. ರಾಜ್ಯದ 530 ಸಂರಕ್ಷಿತ ಸ್ಮಾರಕಗಳನ್ನು 3 ಡಿ ಲೇಸರ್ ಸ್ಕ್ಯಾನಿಂಗ್ ಮೂಲಕ ಡಿಜಿಟಲ್ ದಾಖಲೀಕರಣ ಮಾಡಲಾಗಿದೆ. ಈ ಕಾರ್ಯವನ್ನು ದೇಶದಲ್ಲಿಯೇ ಪ್ರಥಮವಾಗಿ ಕೈಗೊಂಡಿರುವ ಶ್ರೇಯಸ್ಸು ರಾಜ್ಯ ಸರ್ಕಾರದ್ದಾಗಿದೆ.
ರಾಷ್ಟ್ರಕೂಟರ ಕಾಲದಲ್ಲಿ ಕರ್ನಾಟಕದ ಮೊಟ್ಟ ಮೊದಲ ವಿಶ್ವವಿದ್ಯಾಲಯವನ್ನು ಕಲಬುರಗಿ ಜಿಲ್ಲೆಯ ಚಿತ್ತಾಪೂರ ತಾಲೂಕಿನ ನಾಗಾವಿಯಲ್ಲಿ ಸ್ಥಾಪಿಸಲಾಗಿತ್ತು ಎಂಬುದು ಸ್ಥಳೀಯರ ನಂಬಿಕೆ. ಅಲ್ಲಿನ ಪ್ರಾಚ್ಯಾವೇಶಗಳ ಸಂಶೋಧನೆ ಮತ್ತು ಸಂರಕ್ಷಣೆಗಾಗಿ ನೆರವು ನೀಡಲು ಭಾರತೀಯ ಪುರಾತತ್ವ ಇಲಾಖೆ(ಎಎಸ್ ಐ)ಗೆ ಶಿಫಾರಸು ಮಾಡಲಾಗುವುದು ಎಂದು ಮುಂಗಡ ಪತ್ರದಲ್ಲಿ ತಿಳಿಸಲಾಗಿದೆ.
ಕೆಎಸ್ ಟಿಡಿಸಿ ವತಿಯಿಂದ ಬಾಗಲಕೋಟೆಯ ಐಹೊಳೆಯಲ್ಲಿ ಸುಸಜ್ಜಿತವಾದ ಹೋಟೆಲ್ ನಿರ್ಮಾಣ. ಹಾಗೂ ರೋರಿಚ್ ಮತ್ತು ದೇವಿಕಾರಾಣಿ ಎಸ್ಟೇಟ್ ಪ್ರದೇಶದಲ್ಲಿ ಮೂಲಭೂತ ಸೌಲಭ್ಯಗಳ ಅಭಿವೃದ್ಧಿಗೆ ಒತ್ತು.
ಬೀದರ್ ಹಾಗೂ ವಿಜಯಪುರದಲ್ಲಿ ಕರೇಜ್ ಎಂದು ಪ್ರಸಿದ್ಧವಾಗಿರುವ ಪುರಾತನ ನೀರು ಸರಬರಾಜು ವ್ಯವಸ್ಥೆಯನ್ನು ನುರಿತ ಸಂಸ್ಥೆಗಳ ತಾಂತ್ರಿಕ ನೆರವಿನೊಂದಿಗೆ 15 ಕೋಟಿ ರೂ. ವೆಚ್ಚದಲ್ಲಿ ಪುನಶ್ಚೇತನ.
ರಾಜ್ಯದಲ್ಲಿ ಪರಿಸರ ಪ್ರವಾಸೋದ್ಯಮ ಉತ್ತೇಜಿಸಲು ಬಂಡೀಪುರ, ದಾಂಡೇಲಿ ಮತ್ತು ಕಬಿನಿಯಲ್ಲಿ 25 ಕೋಟಿ ರೂ. ವೆಚ್ಚದಲ್ಲಿ ಇಂಟರ್ ಪ್ರಿಟೇಷನ್ ಸೆಂಟರ್ ಗಳನ್ನು ಜೆ.ಎಲ್ಾರ್ ಸಂಸ್ಥೆಯ ಮೂಲಕ ನಿರ್ಮಾಣ ಮಾಡುವುದಾಗಿ ಬಜೆಟ್ ನಲ್ಲಿ ಘೋಷಿಸಲಾಗಿದೆ.
ಗದಗ ಜಿಲ್ಲೆಯ ಕಪ್ಪತ್ತಗುಡ್ಡದಲ್ಲಿ ಪರಿಸರ ಪ್ರವಾಸೋದ್ಯಮಕ್ಕೆ ಉತ್ತೇಜನ. ಶ್ರೀಕ್ಷೇತ್ರ ರೇಣುಕಾ ಯಲ್ಲಮ್ಮ ದೇವಸ್ಥಾನ ಹಾಗೂ ಸುತ್ತಮುತ್ತಲಿನ ಪ್ರದೇಶ ಸಂರಕ್ಷಿಸಿ ಅಭಿವೃದ್ಧಿಗೊಳಿಸಲು ಶ್ರೀ ರೇಣುಕಾ ಯಲ್ಲಮ್ಮ ಕ್ಷೇತ್ರ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿ ರಚಿಸುವುದಾಗಿ ತಿಳಿಸಿದೆ.