Advertisement

Budget 2024: 3 ಕೋಟಿ ಸ್ತ್ರೀಯರಿಗೆ ಸಿಗಲಿದೆ ‘ಲಕ್‌ಪತಿ ದೀದಿ’ ಯೋಜನೆಯ ಲಾಭ

01:11 PM Feb 01, 2024 | Team Udayavani |

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಗುರುವಾರ ಸಂಸತ್ತಿನಲ್ಲಿ ಮಧ್ಯಂತರ ಬಜೆಟ್ ಮಂಡಿಸಿದ್ದಾರೆ. ಈ ಬಾರಿಯ ಬಜೆಟ್‌ನಲ್ಲಿ ಮಹಿಳೆಯರಿಗಾಗಿ ಹಲವು ದೊಡ್ಡ ಘೋಷಣೆಗಳನ್ನು ಘೋಷಣೆ ಮಾಡಲಾಗಿದೆ.

Advertisement

ಅದರಂತೆ ಆಗಸ್ಟ್ 15, 2023 ರಂದು ಕೆಂಪು ಕೋಟೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಈ ಲಕ್ ಪತಿ ದೀದಿ ಯೋಜನೆಯನ್ನು ಪ್ರಾರಂಭಿಸಿದ್ದರು. ಆರಂಭದಲ್ಲಿ 2 ಕೋಟಿ ಮಹಿಳೆಯರಿಗೆ ನಿಗದಿಪಡಿಸಲಾಗಿದ್ದ ‘ಲಕ್ ಪತಿ ದೀದಿ’ ಯೋಜನೆಯ ಗುರಿಯನ್ನು 3 ಕೋಟಿ ಮಹಿಳೆಯರಿಗೆ ಹೆಚ್ಚಿಸಲಾಗಿದೆ ಎಂದು ಹಣಕಾಸು ಸಚಿವರು ಹೇಳಿದರು.

ಈ ಯೋಜನೆಯಡಿ ಮಹಿಳೆಯರಿಗೆ ಕೌಶಲ್ಯ ತರಬೇತಿ ನೀಡಲಾಗುತ್ತಿದ್ದು, ಇದರಿಂದ ಮಹಿಳಾ ಸ್ವ-ಸಹಾಯ ಗುಂಪುಗಳ ಮೂಲಕ ವರ್ಷಕ್ಕೆ 1 ಲಕ್ಷ ರೂಪಾಯಿ ಸಹಾಯಧನ ನೀಡಿ ಈ ಯೋಜನೆಯನ್ನು ಜಾರಿಗೊಳಿಸುವ ಉದ್ದೇಶ ಹೊಂದಲಾಗಿದೆ ಎಂದರು.

ದೇಶದ ಮಹಿಳೆಯರು ಆರ್ಥಿಕವಾಗಿ ಸಾಕ್ಷರರಾಗಲು ಸಾಧ್ಯವಾಗುತ್ತದೆ.ಈ ಯೋಜನೆಯ ಮೂಲಕ ಮಹಿಳೆಯರಿಗೆ ಕಾರ್ಯಾಗಾರಗಳನ್ನು ನಡೆಸಲಾಗುವುದು ಅದರಲ್ಲಿ ಅವರಿಗೆ ಹಣಕಾಸಿನ ವ್ಯವಹಾರಗಳ ಬಗ್ಗೆ ತಿಳಿಸಲಾಗುವುದು. ಮಹಿಳೆಯರ ಸಬಲೀಕರಣ ಈ ಯೋಜನೆಯ ಉದ್ದೇಶವಾಗಿದೆ. ಈ ಕಾರ್ಯಾಗಾರಗಳು ಬಜೆಟ್, ಉಳಿತಾಯ, ಹೂಡಿಕೆ ಮತ್ತು ಹಣಕಾಸು ಸಾಧನಗಳನ್ನು ಅರ್ಥಮಾಡಿಕೊಳ್ಳುವಂತಹ ವಿಷಯಗಳನ್ನು ಒಳಗೊಂಡಿದೆ.

ಲಕ್ ಪತಿ ದೀದಿ ಯೋಜನೆ ಅಡಿಯಲ್ಲಿ, ಉದ್ಯಮಶೀಲತೆ ಉದ್ಯಮ, ಶಿಕ್ಷಣ ಅಥವಾ ಇತರ ಅಗತ್ಯಗಳಿಗಾಗಿ ಮಹಿಳೆಯರಿಗೆ ಸಣ್ಣ ಸಾಲಗಳನ್ನು ನೀಡಲಾಗುತ್ತದೆ.

Advertisement

ಅಷ್ಟುಮಾತ್ರವಲ್ಲದೆ ಈ ಯೋಜನೆಯಡಿಯಲ್ಲಿ, ಡಿಜಿಟಲ್ ಬ್ಯಾಂಕಿಂಗ್ ಸೇವೆಗಳು, ಮೊಬೈಲ್ ವ್ಯಾಲೆಟ್‌ಗಳು ಮತ್ತು ಇತರ ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳನ್ನು ಹೇಗೆ ಬಳಸುವುದು ಎಂಬುದನ್ನು ಕಲಿಯಲು ಮಹಿಳೆಯರನ್ನು ಪ್ರೋತ್ಸಾಹಿಸಲಾಗುತ್ತದೆ.

ಇದನ್ನೂ ಓದಿ: Budget 2024: ಎಲ್ಲ ಆಶಾ, ಅಂಗನವಾಡಿ ಕಾರ್ಯಕರ್ತೆಯರಿಗೂ ಆಯುಷ್ಮಾನ್ ಭಾರತ್ ಯೋಜನೆ

Advertisement

Udayavani is now on Telegram. Click here to join our channel and stay updated with the latest news.

Next