Advertisement

Budget 2024:ಅತ್ಯಾಧುನಿಕ ಕ್ರೀಡಾ ನಗರ ಸ್ಥಾಪನೆ, ಒಲಿಂಪಿಕ್ಸ್‌ ಕ್ರೀಡಾ ವಿಜೇತರಿಗೆ ಬಂಪರ್‌

01:58 PM Feb 16, 2024 | Team Udayavani |

ಬೆಂಗಳೂರು: 2024-25ನೇ ಸಾಲಿನ ರಾಜ್ಯ ಬಜೆಟ್‌ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ (ಫೆ.16) ವಿಧಾನಸಭೆಯಲ್ಲಿ ಮಂಡಿಸಿದ್ದಾರೆ. ಪ್ರಸಕ್ತ ಸಾಲಿನ ಬಜೆಟ್‌ ನಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಕ್ಷೇತ್ರಕ್ಕೆ ಘೋಷಿಸಿರುವ ವಿವರ ಇಲ್ಲಿದೆ.

Advertisement

ಇದನ್ನೂ ಓದಿ:Budget 2024; ಮೊದಲ ಸಮುದ್ರ ಆಂಬುಲೆನ್ಸ್ ಖರೀದಿ; ಮೀನುಗಾರಿಕೆ ಕ್ಷೇತ್ರಕ್ಕೆ ಸಿಕ್ಕಿದ್ದೇನು?

ಬೆಂಗಳೂರಿನ ಉತ್ತರ ತಾಲೂಕಿನಲ್ಲಿ ಲಭ್ಯವಿರುವ ಅಂದಾಜು 70 ಎಕರೆ ನಿವೇಶನದಲ್ಲಿ ಅತ್ಯಾಧುನಿಕ ಮತ್ತು ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾ ಸಮುಚ್ಛಯಗಳನ್ನು ಒಳಗೊಂಡ ಕ್ರೀಡಾ ನಗರವನ್ನು (Sports City) ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ಸ್ಥಾಪಿಸಲಾಗುವುದು.

ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾ ಸೌಕರ್ಯಗಳನ್ನು ಅಭಿವೃದ್ಧಿಪಡಿಸುವ ಉದ್ದೇಶದಿಂದ 4 ಸ್ಥಳಗಳಲ್ಲಿ ಬಹುಕ್ರೀಡಾ ಸೌಲಭ್ಯಗಳನ್ನೊಳಗೊಂಡ ಅತ್ಯಾಧುನಿಕ ಕ್ರೀಡಾ ಸಂಕೀರ್ಣಗಳನ್ನು ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ನಿರ್ಮಿಸಲಾಗುವುದು.

ರಾಜ್ಯದ ವಿವಿಧ ಕ್ರೀಡೆಗಳನ್ನು ಪ್ರೋತ್ಸಾಹಿಸಲು ಹಾಗೂ ಕ್ರೀಡಾಪಟುಗಳಿಗೆ ಉತ್ತೇಜನ ನೀಡಲು ರೈಫಲ್‌ ಶೂಟಿಂಗ್‌ ಅಸೋಸಿಯೇಶನ್‌, ಹಾಕಿ ಕರ್ನಾಟಕ, ಅಮೆಚೂರ್‌ ಬಾಕ್ಸಿಂಗ್‌ ಅಸೋಸಿಯೇಶನ್‌, ಅರ್ಚರಿ ಅಸೋಸಿಯೇಶನ್‌, ಅಥ್ಲೆಟಿಕ್‌ ಅಸೋಸಿಯೇಶನ್‌, ಕಯಾಕಿಂಗ್‌ And Canoeing Academu, ಸೈಕಲಿಂಗ್‌ ಅಕಾಡೆಮಿ ವಿಜಯಪುರ ಹಾಗೂ ಫೆನ್ಸಿಂಗ್‌ ಅಸೋಸಿಯೇಶನ್‌ ಗಳಿಗೆ ಒಟ್ಟಾರೆ 12 ಕೋಟಿ ರೂ. ಅನುದಾನ ನೀಡಲಾಗುವುದು.

Advertisement

ರಾಜ್ಯದ ಕ್ರೀಡಾಪಟುಗಳಿಗೆ ಅತ್ಯುನ್ನತ ಸ್ಪರ್ಧಾ ಅವಕಾಶ ಒದಗಿಸಲು ಪ್ರತಿ ವರ್ಷ ಒಂದು ರಾಜ್ಯ ಮಟ್ಟದ ಒಲಿಂಪಿಕ್ಸ್‌ ಮತ್ತು 14 ವರ್ಷ ವಯೋಮಾನದ ಒಳಗಿನವರಿಗೆ ಮಿನಿ ಒಲಿಂಪಿಕ್ಸ್‌ ಆಯೋಜಿಸಲಾಗುವುದು.

ಮುಂಬರುವ ಪ್ಯಾರಿಸ್‌ ಒಲಿಂಪಿಕ್ಸ್‌ ನಲ್ಲಿ ಚಿನ್ನದ ಪದಕ ಗಳಿಸುವ ಕ್ರೀಡಾಪಟುಗಳಿಗೆ 6 ಕೋಟಿ ರೂಪಾಯಿ, ಬೆಳ್ಳಿ ಪದಕ ಪಡೆಯುವ ಕ್ರೀಡಾಪಟುಗಳಿಗೆ 4 ಕೋಟಿ ರೂಪಾಯಿ ಹಾಗೂ ಕಂಚಿನ ಪದಕ ಪಡೆಯುವ ಕ್ರೀಡಾಪಟುಗಳಿಗೆ 3 ಕೋಟಿ ರೂ. ಪ್ರೋತ್ಸಾಹಧನ ನೀಡಲಾಗುವುದು ಎಂದು ಬಜೆಟ್‌ ನಲ್ಲಿ ಘೋಷಿಸಲಾಗಿದೆ.

ಏಷಿಯನ್‌ ಮತ್ತು ಕಾಮನ್‌ ವೆಲ್ತ್‌ ಕ್ರೀಡಾಕೂಟಗಳಲ್ಲಿ ಚಿನ್ನದ ಪದಕ ವಿಜೇತ ಕ್ರೀಡಾಪಟುಗಳಿಗೆ 35 ಲಕ್ಷ ರೂ. ಬೆಳ್ಳಿ ಪದಕ ವಿಜೇತ ಕ್ರೀಡಾಪಟುಗಳಿಗೆ 25 ಲಕ್ಷ ರೂ. ಹಾಗೂ ಕಂಚಿನ ಪದಕ ವಿಜೇತ ಕ್ರೀಡಾಪಟುಗಳಿಗೆ 15 ಲಕ್ಷ ರೂ. ಪ್ರೋತ್ಸಾಹ ಧನ ನೀಡುವುದಾಗಿ ಬಜೆಟ್‌ ನಲ್ಲಿ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next