Advertisement

Budget 2024: ಎಲ್ಲ ಆಶಾ, ಅಂಗನವಾಡಿ ಕಾರ್ಯಕರ್ತೆಯರಿಗೂ ಆಯುಷ್ಮಾನ್ ಭಾರತ್ ಯೋಜನೆ

12:43 PM Feb 01, 2024 | Team Udayavani |

ನವದೆಹಲಿ: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ೨೦೨೪ರ ಬಜೆಟ್ ಮಂಡಿಸಿದ್ದು, ಈ ಬಾರಿಯ ಬಜೆಟ್ ನಲ್ಲಿ ಆಶಾ, ಅಂಗನವಾಡಿ ಕಾರ್ಯಕರ್ತೆಯರು ಸೇರಿದಂತೆ ಅಂಗನವಾಡಿ ಸಹಾಯಕರಿಗೂ ಹೆಚ್ಚಿನ ಸೌಲಭ್ಯಗಳನ್ನು ಕೇಂದ್ರ ನೀಡಿದೆ.

Advertisement

ಹಣಕಾಸು ಸಚಿವೆ ಮಂಡಿಸಿದ ಬಜೆಟ್ ನಲ್ಲಿ “ಆಯುಷ್ಮಾನ್ ಭಾರತ್ ಯೋಜನೆಯಡಿ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು ಸೇರಿದಂತೆ ಸಹಾಯಕರಿಗೂ ಆರೋಗ್ಯ ರಕ್ಷಣೆಯನ್ನು ವಿಸ್ತರಿಸಲಾಗುವುದು” ಎಂದು ಸಚಿವೆ ನಿರ್ಮಲಾ ಸೀತಾರಾಮನ್ ಘೋಷಿಸಿದರು.

ಇದರೊಂದಿಗೆ ಆಶಾ, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಅಂಗನವಾಡಿ ಸಹಾಯಕರಿಗೂ ಆಯುಷ್ಮಾನ್ ಪ್ರಯೋಜನೆಗಳನ್ನು ವಿಸ್ತರಿಸಲಾಗಿದೆ.

ಆಯುಷ್ಮಾನ್ ಭಾರತ್ ಯೋಜನೆ ಬಡವರಿಗೆ ಸಹಾಯವಾಗುವ ಆರೋಗ್ಯ ವಿಮಾ ಯೋಜನೆಯಾಗಿದ್ದು, ವರ್ಷಕ್ಕೆ ಪ್ರತಿ ಕುಟುಂಬಕ್ಕೆ ರೂ 5 ಲಕ್ಷದವರೆಗೆ ಉಚಿತ ವೈದ್ಯಕೀಯ ಚಿಕಿತ್ಸೆ ಒದಗಿಸುತ್ತದೆ. ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶ ಅನುಷ್ಠಾನಗೊಳಿಸುವ ಅರ್ಹ ಫಲಾನುಭವಿಗಳು ನಗದು ರಹಿತ ಸೇವೆಗಳಿಗೆ ಅರ್ಹರಾಗಿದ್ದರು ಆದರೆ ಈ ಯೋಜನೆಗೆ ಇದೀಗ ಆಶಾ, ಅಂಗನವಾಡಿ ಕಾರ್ಯಕರ್ತೆಯರು ಜೊತೆಗೆ ಅಂಗನವಾಡಿ ಸಹಾಯಕರನ್ನು ಸೇರಿಸಲಾಗಿದೆ.

ಈ ಯೋಜನೆಯು 30.6 ಕೋಟಿ ಬಡ ಮತ್ತು ದುರ್ಬಲ ಕುಟುಂಬಗಳನ್ನು ಒಳಗೊಂಡಿದ್ದು. ಅರ್ಹತಾ ಮಾನದಂಡಗಳನ್ನು ಪೂರೈಸುವ ಹಿರಿಯ ನಾಗರಿಕರು ಮತ್ತು ಅಂಗವಿಕಲರು ಯೋಜನೆಯ ಪ್ರಯೋಜನಗಳನ್ನು ಪಡೆಯಬಹುದಾಗಿದೆ. ಈ ಯೋಜನೆಯು 2018 ರಲ್ಲಿ ಪ್ರಾರಂಭವಾದಾಗಿನಿಂದ ಹೆಚ್ಚಿನ ಜನರು ಇದರ ಲಾಭವನ್ನು ಪಡೆಯುತ್ತಿದ್ದಾರೆ.

Advertisement

ಇದನ್ನೂ ಓದಿ: Budget 2024: ತೆರಿಗೆ ಪಾವತಿದಾರರಿಗೆ ಅಭಿನಂದನೆ…57 ನಿಮಿಷಗಳಲ್ಲಿ ಬಜೆಟ್‌ ಭಾಷಣ ಅಂತ್ಯ

Advertisement

Udayavani is now on Telegram. Click here to join our channel and stay updated with the latest news.

Next