Advertisement
ರಾಜ್ಯದಲ್ಲಿ ಮಾನವ – ಕಾಡಾನೆ ಸಂಘರ್ಷ ಹೆಚ್ಚಾಗಿರುವ ಪ್ರದೇಶಗಳಲ್ಲಿ ಹೆಚ್ಚಾಗಿರುವ ಕಾಡಾನೆಗಳು ಅರಣ್ಯ ಪ್ರದೇಶದಿಂದ ಹೊರಗೆ ಬಾರದಂತೆ ನಿಯಂತ್ರಿಸಲು ಕಾಂಗ್ರೆಸ್ ಸರ್ಕಾರದ ಹಿಂದಿನ ಅವಧಿಯಲ್ಲಿ 520 ಕಿಲೋ ಮೀಟರ್ ಗಳ ಬ್ಯಾರಿಕೇಡ್ ಗಳನ್ನು ನಿರ್ಮಿಸಲು ಘೋಷಿಸಿತ್ತು. ಈ ಯೋಜನೆಯಡಿಯಲ್ಲಿ ಇಲ್ಲಿಯವರೆಗೂ 312 ಕಿ.ಮೀನಷ್ಟು ಬ್ಯಾರಿಕೇಡ್ ನಿರ್ಮಿಸಲಾಗಿದ್ದು, ಬಾಕಿ ಉಳಿದಿರುವ ಬ್ಯಾರಿಕಡ್ ನಿರ್ಮಾಣ ಪೂರ್ಣಗೊಳಿಸಲು ಆದ್ಯತೆ ನೀಡಲಾಗುವುದು ಎಂದು ಬಜೆಟ್ ನಲ್ಲಿ ತಿಳಿಸಿದ್ದಾರೆ.
Related Articles
Advertisement
ಕರ್ನಾಟಕ ರಾಜ್ಯದ ಬಯಲುಸೀಮೆ ಪ್ರದೇಶದ 17 ಜಿಲ್ಲೆಗಳಲ್ಲಿ ಶೇ.10ಕ್ಕಿಂತ ಕಡಿಮೆ ಅರಣ್ಯಪ್ರದೇಶವಿದೆ. ಆ ನಿಟ್ಟಿನಲ್ಲಿ ಈ ಜಿಲ್ಲೆಗಳಲ್ಲಿ 500 ಕೋಟಿ ರೂ.ವೆಚ್ಚದಲ್ಲಿ ಹಸಿರೀಕಣ ಕಾರ್ಯಕ್ರಮವನ್ನು ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯೊಂದಿಗೆ ಸಂಯೋಜಿಸಿ ಐದು ವರ್ಷಗಳ ಅವಧಿಯಲ್ಲಿ ಅನುಷ್ಠಾನಗೊಳಿಸಲು ಉದ್ದೇಶಿಸಲಾಗಿದೆ.
ಡಿಕಾರ್ಬೊನೈಸೇಷನ್ನಿನ ಆರ್ಥಿಕತೆಯನ್ನು ಪ್ರೋತ್ಸಾಹಿಸಲು ಮತ್ತು ಹಸಿರು ಬೆಳವಣಿಗೆಯನ್ನು ಉತ್ತೇಜಿಸಲು ರಾಜ್ಯದಲ್ಲಿನ ಸಂಸ್ಥೆಗಳಿಂದ ಸ್ವಯಂಪ್ರೇರಿತವಾಗಿ Green House Gases ಹೊರಸೂಸುವಿಕೆಯ ಬಹಿರಂಗಪಡಿಸುವ ಯೋಜನೆಯನ್ನು ಪ್ರಾರಂಭಿಸಲಾಗುವುದು.