Advertisement

Budget: ತುಮಕೂರು, ದೇವನಹಳ್ಳಿಗೂ ನಮ್ಮ ಮೆಟ್ರೋ ಸೇವೆ ವಿಸ್ತರಣೆ

10:50 PM Feb 16, 2024 | Team Udayavani |

ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದೇವನಹಳ್ಳಿ ಮೆಟ್ರೋ ರೈಲು ಸೇವೆಗಳನ್ನು ನಗರದ ಹೊರ ವಲಯಗಳಿಗೂ ವಿಸ್ತರಿಸುವತ್ತ ಸರ್ಕಾರ ಒಲವು ತೋರಿದೆ. ಸಿಲಿಕಾನ್‌ ಸಿಟಿ ಬೆಂಗಳೂರಿನಿಂದ ತುಮಕೂರು ಮತ್ತು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದೇವನಹಳ್ಳಿವರೆಗೂ ಸಾರ್ವಜನಿಕ ಮತ್ತು ಖಾಸಗಿ ಸಹಭಾಗಿತ್ವದಲ್ಲಿ ಮೆಟ್ರೋ ರೈಲು ಯೋಜನೆಗಳನ್ನು ಆರಂಭಿಸುವುದನ್ನು ಬಜೆಟ್‌ನಲ್ಲಿ ಪ್ರಸ್ತಾಪಿಸಿದೆ.

Advertisement

ರಾಜಧಾನಿ ಬೆಂಗಳೂರಿನ ಬಿಐಇಸಿಯಿಂದ ತುಮಕೂರುವರೆಗೆ ಮತ್ತು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದೇವನಹಳ್ಳಿವರೆಗೆ ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಮೆಟ್ರೋ ರೈಲು ಯೋಜನೆಗಳನ್ನು ಪ್ರಾರಂಭಿಸಲು ಕಾರ್ಯಸಾಧ್ಯತಾ ವರದಿಯನ್ನು ತಯಾರಿಸಲಿದೆ. ಈ ಮೂಲಕ ಬೆಂಗಳೂರಿನ ಹೊರ ವಲಯಗಳಿಗೂ ಮೆಟ್ರೊ ರೈಲು ಸೇವೆ ವಿಸ್ತರಿಸಬೇಕೆಂಬ ಸ್ಥಳೀಯರ ಬೇಡಿಕೆಗೆ ಸರ್ಕಾರ ಸ್ಪಂದಿಸಿದೆ.

ಬೆಂಗಳೂರಿಗೆ ಪರ್ಯಾಯವಾಗಿ ರಾಜ್ಯದಲ್ಲಿ ಸುಸ್ಥಿರವಾದ ಮೂಲಸೌಕರ್ಯಗಳನ್ನು ಒಳಗೊಂಡ ಮತ್ತು ಉದ್ಯೋಗ ಅವಕಾಶಗಳನ್ನು ಸೃಜಿಸುವಂತೆ ಆಕರ್ಷಕ ನಗರಗಳನ್ನು ಅಭಿವೃದ್ಧಿಪಡಿಸುವ ಮೂಲಕ ಬೆಂಗಳೂರಿನ ಮೇಲಿನ ಒತ್ತಡವನ್ನು ತಗ್ಗಿಸಲು ಸರ್ಕಾರ ಒಲವು ಹೊಂದಿದೆ.

Advertisement

Udayavani is now on Telegram. Click here to join our channel and stay updated with the latest news.

Next