ವಿಜಯಪುರ: ಮುಂದಿನ ಬಜೆಟ್ ಅಧಿವೇಶನದಲ್ಲಿ ಆಲಮಟ್ಟಿಯ ಲಾಲ್ ಬಹಾದ್ದೂರ್ ಶಾಸ್ತ್ರಿ ಜಲಾಶಯದ ಗೇಟ್ ಎತ್ತರ ಹೆಚ್ಚಳ ತೀರ್ಮಾನಿಸುವುದಾಗಿ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಹೇಳಿದರು.
ಮಂಗಳವಾರ ಮುದ್ದೇಬಿಹಾಳ ಪಟ್ಟಣದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಪ್ರಸಕ್ತ ವರ್ಷ ಎಲ್ಲ ಕಾಲುವೆಗಳ ದುರಸ್ಥಿ, ನಿರ್ಮಾಣದ ಬಗ್ಗೆ ಕೆಬಿಜೆಎನ್ಎಲ್ ಹಿರಿಯ ಅಧಿಕಾರಿಗಳಿಂದ ವರದಿ ತರಿಸಿಕೊಂಡು, ಮುಂದಿನ ಕ್ರಮ ಕೈಗೊಳ್ಳುವುದಾಗಿ ಹೇಳಿದರು
ಆಲಮಟ್ಟಿ ಜಲಾಶಯದ ವ್ಯಾಪ್ತಿಯಲ್ಲಿ ಬರುವ ಎಲ್ಲ ಕೆರೆಗಳ ಭರ್ತಿಗೆ ಅದ್ಯತೆ ನೀಡಿ ಹಂತ ಹಂತವಾಗಿ ವಿಶೇಷ ಅನುದಾನ ಬಿಡುಗಡೆ ಮಾಡುವುದಾಗಿ ಭರವಸೆ ನೀಡಿದರು.
ಕಳೆದ ವರ್ಷ ಸಂಭವಿಸಿದ ಪ್ರವಾಹ ಸಂದರ್ಭದಲ್ಲಿ ಬಾಧೆ ಅನುಭವಿಸಿದ ಮುಳುಗಡೆ ಭೀತಿಯಲ್ಲಿರುವ ಗ್ರಾಮಗಳ ಸಂಪೂರ್ಣ ಸ್ಥಳಾಂತರಕ್ಕೆ ಕ್ರಮ ಕೈಗೊಳ್ಳಲಾಗುತ್ತದೆ. ಈ ಕುರಿತು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಒಲವು ತೋರಿದ್ದಲ್ಲದೇ, ಆಶ್ವಾಸನೆಯನ್ನೂ ನೀಡಿದ್ದಾರೆ ಎಂದರು.
ಪ್ರಸ್ತುತ ಕೊರೊನಾ ಸಂಕಷ್ಟ ಕಾಲದಲ್ಲಿ ಬಡವರಿಗಾಗಿ ಮುದ್ದೇಬಿಹಾಳ ಶಾಸಕ ಎ.ಎಸ್. ಪಾಟೀಲ ನಡಹಳ್ಳಿ ಕಳೆದ ಒಂದು ತಿಂಗಳಿಂದ ಹಗಲು-ರಾತ್ರಿ ಎನ್ನದೆ ನೆರವು ನೀಡುತ್ತಿದ್ದಾರೆ. ಹಣವನ್ನು ಲೆಕ್ಕಿಸದೇ ಬಡವರಿಗಾಹಿ ಮಾನವೀಯತೆ ಮೆರೆಯುತ್ತಿರುವ ಶ್ಲಾಘನೀಯ ಮಾತ್ರವಲ್ಲ ಅನುಕರಣೀಯ ಕೂಡ ಎಂದರು. ಮುದ್ದೇಬಿಹಾಳ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ಇದ್ದರು.