Advertisement
ರಾಜ್ಯಪಾಲರ ಭಾಷಣಕ್ಕೆ ವಂದನೆ ಸಲ್ಲಿಸುವ ನಿರ್ಣಯದ ಮೇಲೆ ನಡೆದ ಚರ್ಚೆಗೆ ಸರ್ಕಾರದ ಪರವಾಗಿ ಉತ್ತರ ನೀಡಿದ ಅವರು, ಸದನ ನಡೆಯುತ್ತಿರುವಾಗಲೇ ಸುಪ್ರೀಂಕೋರ್ಟ್ ನಮ್ಮ ಸರ್ಕಾರಕ್ಕೆ ಮತ್ತು ಜನತೆಗೆ ಮಹದಾಯಿ ತೀರ್ಪು ಅಧಿಸೂಚನೆಗೊಳಿಸಲು ಕೇಂದ್ರ ಸರ್ಕಾರಕ್ಕೆ ಆದೇಶ ಮಾಡಿದ್ದು, ಅದರನ್ವಯ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿದ್ದು ನಮಗೆ ಮಹದಾಯಿ ನೀರಿನ ಹಂಚಿಕೆ ವಿಷಯದಲ್ಲಿ ದೊಡ್ಡ ಗೆಲುವಾಗಿದೆ.ಈ ಆದೇಶಗನುಗುಣವಾಗಿ ನಮ್ಮ ಮಾರ್ಚ್ ಆಯವ್ಯಯದಲ್ಲಿ ತ್ವರಿತಗತಿಯಲ್ಲಿ ಕಾಮಗಾರಿಗಳನ್ನು ತೆಗೆದುಕೊಳ್ಳಲು ಹಣವನ್ನು ನಿಗದಿಪಡಿಸುತ್ತೇನೆ ಎಂದು ಹೇಳಿದರು.