Advertisement

ಬಡವರು, ರೈತರು, ಯುವ ಜನರಿಗೆ ಪೂರಕವಾಗಿಲ್ಲ: ಸಿದ್ದರಾಮಯ್ಯ

10:06 AM Feb 02, 2020 | sudhir |

ಮೈಸೂರು: ನಿರ್ಮಲಾ ಸೀತಾರಾಮನ್‌ ಅವರು ಮಂಡಿಸಿರುವ ಬಜೆಟ್‌ ಬಡವರು, ರೈತರು, ಯುವ ಜನರಿಗೆ ಪೂರಕವಾಗಿಲ್ಲ ಎಂದು ವಿಧಾನಸಭೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಟೀಕಿಸಿದರು.

Advertisement

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಬಾರಿಯ ಬಜೆಟ್‌ ಆಶಾದಾಯಕವಾಗಿಲ್ಲ. ಬಜೆಟ್‌ನಲ್ಲಿ ಘೋಷಿಸಿರುವ ಯೋಜನೆಗಳ ಹೆಸರು ಆಕರ್ಷಕವಾಗಿಯಷ್ಟೇ. ಆದರೆ, ಅವುಗಳನ್ನು ಅನುಷ್ಠಾನಗೊಳಿಸುವುದು ಸುಲಭವಲ್ಲ ಎಂದು ಹೇಳಿದರು.

30 ಲಕ್ಷ ಕೋಟಿ ರೂ. ಗಾತ್ರದ ಬಜೆಟ್‌ ಮಂಡಿಸಿದ್ದಾರೆ. ಕಳೆದ ಬಜೆಟ್‌ಗೂ ಈ ಬಜೆಟ್‌ಗೂ 3ಲಕ್ಷ ಕೋಟಿ ರೂ. ವ್ಯತ್ಯಾಸವಿದೆ. ಕಳೆದ ಬಜೆಟ್‌ ಅಂದಾಜುವೆಚ್ಚದಲ್ಲಿ 2ಲಕ್ಷ ಕೋಟಿ ಕಡಿಮೆ ಖರ್ಚಾಗಿದೆ. ತೆರಿಗೆ ಸಂಗ್ರಹದಲ್ಲಿ ನಿರೀಕ್ಷಿತ ಪ್ರಮಾಣದ ಆದಾಯ ಬಂದಿಲ್ಲ. ಇದರಿಂದ ರಾಜ್ಯಗಳಿಗೆ ಬರಬೇಕಾದ ಪಾಲೂ ಖೋತಾ ಆಗಿದೆ. ದೇಶದ ಆದಾಯವನ್ನು 5 ಟ್ರಿಲಿಯನ್‌ ಡಾಲರ್‌ ಮಾಡು¤ತೇವೆ ಅಂದಿದ್ದರು, ಆದರೆ ಅದು ಸಾಧ್ಯವಿಲ್ಲ ಎಂಬುದು ಎಲ್ಲರಿಗೂ ಈಗ ಗೊತ್ತಾಗುತ್ತಿದೆ. ಶೇ.3.5ಕ್ಕೆ ಕುಸಿತವಾಗಿರುವ ಜಿಡಿಪಿ ದರವನ್ನು ಶೇ.6ಕ್ಕೆ ಕೊಂಡೊಯ್ಯುತ್ತೇವೆ ಎನ್ನುವುದು ಗಗನಕುಸುಮದಂತಿದೆ. ಜಿಡಿಪಿ ಮೇಲೆತ್ತಲು ಸಾಧ್ಯವೇ ಇಲ್ಲ ಎಂದರು.

ಮನಮೋಹನ್‌ಸಿಂಗ್‌ ಸೇರಿ ಯಾವ ಆರ್ಥಿಕ ತಜ್ಞರ ಸಲಹೆಯನ್ನೂ ಪಡೆದಿಲ್ಲ. ನಿರ್ಮಲಾ ಸೀತಾರಾಮನ್‌ ಅವರಿಗೆ ಆರ್ಥಿಕ ಪರಿಸ್ಥಿತಿಯ ಮುನ್ನೋಟವೇ ಗೊತ್ತಿಲ್ಲ. ನಮ್ಮ ನಿರೀಕ್ಷೆಗಳೆಲ್ಲ ಹುಸಿಯಾಗಿದೆ. ಇದೊಂದು ನಿರಾಶದಾಯಕ ಬಜೆಟ್‌ ಎಂದು ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next