Advertisement

ಬಜೆಟ್‌ ಸಿದ್ಧತೆ ಶುರು: ಸಚಿವೆ ನಿರ್ಮಲಾ ಬ್ಯುಸಿ

12:04 AM Jun 05, 2019 | Team Udayavani |

ನವದೆಹಲಿ: ಮುಂದಿನ ತಿಂಗಳ 5ರಂದು ಎನ್‌ಡಿಎ ಸರ್ಕಾರದ ಪೂರ್ಣ ಪ್ರಮಾಣದ ಬಜೆಟ್‌ ಮಂಡನೆ ಯಾಗಲಿದೆ. ಹೀಗಾಗಿ, ಸೋಮವಾರದಿಂದಲೇ ದೇಶದ ಮೊತ್ತಮೊದಲ ಮಹಿಳಾ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಸಿದ್ಧತೆಯಲ್ಲಿ ತೊಡಗಿಸಿ ಕೊಂಡಿದ್ದಾರೆ. ಹೀಗಾಗಿ ಅವರು ಯಾವುದೇ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಲಾರರು.

Advertisement

ಐದು ವರ್ಷಗಳಿಗೆ ಹೋಲಿಕೆ ಮಾಡಿದರೆ ದೇಶದ ಅರ್ಥ ವ್ಯವಸ್ಥೆ ಗಣನೀಯ ಪ್ರಮಾಣದಲ್ಲಿ ಕುಸಿದಿರುವ ಬಗ್ಗೆ ವರದಿಗಳ ಹಿನ್ನೆಲೆಯಲ್ಲಿ ಬಜೆಟ್‌ನಲ್ಲಿ ಅದಕ್ಕೆ ಸಂಬಂಧಿಸಿದ ಕ್ರಮಗಳು ಮತ್ತು ಪ್ರಣಾಳಿಕೆಯಲ್ಲಿ ವಾಗ್ಧಾನ ಮಾಡಿದಂತೆ ಕ್ರಮಗಳನ್ನು ಜಾರಿ ಮಾಡುವ ಬಗ್ಗೆ ಮಾರ್ಗೋಪಾಯಗಳನ್ನು ವಿತ್ತ ಸಚಿವರು ಜಾರಿ ಮಾಡಬೇಕಾಗಿದೆ.

ವಿತ್ತ ಖಾತೆ ಸಹಾಯಕ ಸಚಿವ ಅನುರಾಗ್‌ ಠಾಕೂರ್‌, ಮುಖ್ಯ ಆರ್ಥಿಕ ಸಲಹೆಗಾರ ಕೃಷ್ಣ ಮೂರ್ತಿ ಸುಬ್ರಹ್ಮಣ್ಯಂ ಸೇರಿ ಇಲಾಖೆಯ ಅಧಿಕಾರಿಗಳು ಬಜೆಟ್‌ ಸಿದ್ಧತೆಯಲ್ಲಿ ತೊಡಗಿಸಿಕೊಂಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next