Advertisement

ಸೋಮವಾರದಿಂದ ಬಜೆಟ್‌ ಅಧಿವೇಶನದ 2ನೇ ಹಂತ ಕಲಾಪ ಆರಂಭ

11:32 PM Mar 07, 2021 | Team Udayavani |

ನವದೆಹಲಿ: ಸಂಸತ್‌ನ ಬಜೆಟ್‌ ಅಧಿವೇಶನದ ದ್ವಿತೀಯಾರ್ಧದ ಕಲಾಪಗಳು ಸೋಮವಾರದಿಂದ ಆರಂಭಗೊಳ್ಳಲಿವೆ. ಕಲಾಪಗಳಲ್ಲಿ ನಡೆಯುವ ಚರ್ಚೆಗಳಲ್ಲಿ 2021-22ರ ಬಜೆಟ್‌ನಲ್ಲಿ ಉಲ್ಲೇಖೀಸಲಾಗಿರುವ ತೆರಿಗೆ ಪ್ರಸ್ತಾವನೆಗಳು ಹಾಗೂ ಅನುದಾನಗಳ ಬಗ್ಗೆ ಹೆಚ್ಚಿನ ಒತ್ತು ನೀಡಲು ಕೇಂದ್ರ ನಿರ್ಧರಿಸಿದೆ.

Advertisement

ಇದಲ್ಲದೆ, ಕೆಲವು ವಿಧೇಯಕಗಳನ್ನು ಮಂಡಿಸಲು ಕೇಂದ್ರ ತೀರ್ಮಾನಿಸಿದೆ. ಅವುಗಳಲ್ಲಿ, ಪಿಂಚಣಿ ನಿಧಿ ನಿಯಂತ್ರಣ ಹಾಗೂ ಅಭಿವೃದ್ಧಿ ಕಾಯ್ದೆ ತಿದ್ದುಪಡಿ ವಿಧೇಯಕ, ಹಣಕಾಸು ಮೂಲಸೌಕರ್ಯ ಹಾಗೂ ಅಭಿವೃದ್ಧಿಗಾಗಿ ರಾಷ್ಟ್ರೀಯ ಬ್ಯಾಂಕ್‌ ವಿಧೇಯಕ, ವಿದ್ಯುತ್ಛಕ್ತಿ ನಿಯಂತ್ರಣ ಕಾಯ್ದೆ ತಿದ್ದುಪಡಿ ವಿಧೇಯಕ ಹಾಗೂ ಕ್ರಿಪ್ಟೋ ಕರೆನ್ಸಿ ಮತ್ತು ನಿಯಂತ್ರಣ ವಿಧೇಯಕ ಪ್ರಮುಖವಾದವು.

ತಮಿಳುನಾಡು, ಪಶ್ಚಿಮ ಬಂಗಾಳ, ಅಸ್ಸಾಂ, ಕೇರಳ ಹಾಗೂ ಪುದುಚ್ಚೇರಿಯಲ್ಲಿ ಈ ಮಾಸಾಂತ್ಯದಲ್ಲಿ ಹಾಗೂ ಏಪ್ರಿಲ್‌ನಲ್ಲಿ ಚುನಾವಣೆಗಳು ನಡೆಯಲಿರುವ ಹಿನ್ನೆಲೆಯಲ್ಲಿ ಈ ಬಾರಿಯ ಕಲಾಪಕ್ಕೆ ಹಲವಾರು ಸಂಸದರು ಗೈರಾಗುವ ಸಾಧ್ಯತೆಗಳಿವೆ.

ಇದನ್ನೂ ಓದಿ :ಎಲ್‌ಐಸಿ ಮೂಲ ಬಂಡವಾಳ 25,000 ಸಾವಿರ ಕೋಟಿ ರೂ.ಗಳಿಗೆ ಹೆಚ್ಚಿಸಲು ಕೇಂದ್ರ ನಿರ್ಧಾರ

Advertisement

Udayavani is now on Telegram. Click here to join our channel and stay updated with the latest news.

Next