ನವದೆಹಲಿ : ಹೊಸದಾಗಿ ನಿರ್ಮಿಸಿರುವ ಸಂಸತ್ ಕಟ್ಟಡದಲ್ಲಿ ಸಂಸತ್ ಉಭಯ ಸದನಗಳ ಜಂಟಿ ಅಧಿವೇಶನ ನಡೆಯಲಿದೆ ಎನ್ನುವ ಊಹಾಪೋಹಗಳಿಗೆ ತೆರೆ ಬಿದ್ದಿದ್ದು, ಪ್ರಸಕ್ತ ಅಸ್ತಿತ್ವದಲ್ಲಿರುವ ಕಟ್ಟಡದಲ್ಲೇ ರಾಷ್ಟ್ರಪತಿ ಉಭಯ ಸದನವನ್ನುದ್ಧೇಶಿಸಿ ಮಾತನಾಡಲಿದ್ದಾರೆ ಎಂದು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಹೇಳಿದ್ದಾರೆ.
ಸಂಸತ್ ಕಟ್ಟಡದ ಕೆಲ ಫೋಟೋಗಳು ಬಿಡುಗಡೆಯಾಗಿದ್ದು, ಅಲ್ಲಿಯೇ ಬಜೆಟ್ ಅಧಿವೇಶನ ನಡೆಯಲಿದೆ ಎನ್ನಲಾಗಿತ್ತು. ಈ ಹಿನ್ನೆಲೆ ಸ್ಪೀಕರ್ ಓಂ ಬಿರ್ಲಾ ಟ್ವೀಟ್ ಮಾಡಿದ್ದಾರೆ.
“ರಾಷ್ಟ್ರಪತಿ ದ್ರೌಪದಿ ಮುರ್ಮು ಹಾಲಿ ಸಂಸತ್‌ನಲ್ಲಿಯೇ ಬಜೆಟ್ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಿದ್ದಾರೆ.
ಹೊಸ ಕಟ್ಟಡ ಇನ್ನೂ ನಿರ್ಮಾಣ ಹಂತದಲ್ಲಿದೆ’ ಎಂದು ಬರೆದುಕೊಂಡಿದ್ದಾರೆ.