Advertisement
ಗ್ರಾಮೀಣ ಪ್ರದೇಶದಲ್ಲಿ ಸ್ಥಳೀಯ ಆಹಾರವನ್ನು ಶುಚಿ-ರುಚಿಯಾಗಿ ಕೈಗೆಟಕುವ ದರದಲ್ಲಿ ನೀಡುವ ಮಹಿಳೆಯರೇ ನಡೆಸುವ “ಕೆಫೆ ಸಂಜೀವಿನಿ’ ಹೆಸರಿನ ವಿಶಿಷ್ಟ ಕಾರ್ಯ ಕ್ರಮವನ್ನು ಘೋಷಿಸಲಾಗಿದೆ. ಪ್ರಸಕ್ತ ಸಾಲಿನಲ್ಲಿ 50 ಕೆಫೆ ಗಳ ಸ್ಥಾಪನೆಗೆ 7.50 ಕೋಟಿ ರೂ. ಮೀಸಲಿರಿ ಸಲಾಗಿದೆ. ಕಾಫಿ ಮಂಡಳಿಯ ಸಹಭಾಗಿತ್ವದಲ್ಲಿ ಸ್ವ-ಸಹಾಯ ಗುಂಪುಗಳ ಸದಸ್ಯ ಮಹಿಳೆಯರಿಗೆ ಕಾಫಿ ಉದ್ಯಮಿಗಳಾಗಲು ತರಬೇತಿ, 25 ಕೋಟಿ ರೂ. ವೆಚ್ಚದಲ್ಲಿ 2,500 ಕಾಫಿ ಕಿಯೋಸ್ಕ್ ಸ್ಥಾಪನೆಯನ್ನು ಪ್ರಕಟಿಸಲಾಗಿದೆ.
ಸ್ಕಿಲ್ ಅಕಾಡೆಮಿ ಸ್ಥಾಪನೆ: ಬಳ್ಳಾರಿ ಜಿಲ್ಲೆಯ ಸಂಡೂರಿನಲ್ಲಿ ಸ್ಕಿಲ್ ಅಕಾಡೆಮಿಯ ಸ್ಥಾಪನೆ, ವಿಶ್ವೇಶ್ವರಯ್ಯ ತಾಂತ್ರಿಕ ವಿವಿಯ ಸಹಯೋಗದಲ್ಲಿ ಕಲಬುರಗಿ, ಕೊಪ್ಪಳದ ತಳಕಲ್ ಮತ್ತು ಮೈಸೂರಿ ನ ವರುಣಾದಲ್ಲಿ ಒಟ್ಟು 350 ಕೋಟಿ ರೂ. ವೆಚ್ಚದಲ್ಲಿ ಜಿ.ಟಿ.ಟಿ.ಸಿ. ಬಹು ಕೌಶಲ್ಯ ಅಭಿವೃದ್ಧಿ ಕೇಂದ್ರಗಳ ಸ್ಥಾಪನೆ, ಬಳ್ಳಾರಿ ಮತ್ತು ಚಿತ್ರದುರ್ಗದಲ್ಲಿ ಜಿಲ್ಲಾ ಖನಿಜನಿಧಿಯ ಮೂಲಕ ಹಾಗೂ ಗದಗ ಜಿಲ್ಲೆಯ ರೋಣದಲ್ಲಿ ನಬಾರ್ಡ್ ಸಹಯೋಗದಲ್ಲಿ ಒಟ್ಟು 150 ಕೋಟಿ ರೂ. ವೆಚ್ಚದಲ್ಲಿ ಹೊಸ ಜಿ.ಟಿ.ಟಿ.ಸಿಗಳು, ಜಿ.ಟಿ.ಟಿ.ಸಿ ಗಳಲ್ಲಿ ಎಲೆಕ್ಟ್ರಾನಿಕ್ಸ್, ಕಮ್ಯುನಿಕೇಶನ್, ಮೆಕ್ಯಾಟ್ರಾನಿಕ್ಸ್, ಎಲೆಕ್ಟ್ರಿಕಲ್, ಎಲೆಕ್ಟ್ರಾನಿಕ್ಸ್ ಎಂಜಿನಿಯ ರಿಂಗ್, ರೊಬೊಟಿಕ್ಸ್ ಇತ್ಯಾದಿ ಹೆಚ್ಚುವರಿ ಡಿಪ್ಲೊಮ ಕೋರ್ಸ್‌ಗಳನ್ನು ಆರಂಭಿಸುವ ಪ್ರಸ್ತಾಪವನ್ನು ಮಂಡಿಸಲಾಗಿದೆ. 16ಕೋಟಿ ರೂ. ವೆಚ್ಚದಲ್ಲಿ ಕಲಬುರಗಿಯ ಕೆ.ಜಿ.ಟಿ.ಟಿ.ಐ.ನಲ್ಲಿ ಸಿ.ಎನ್.ಸಿ ಯಂತ್ರವನ್ನು ಕೇಂದ್ರೀಕರಿಸುವ ಶ್ರೇಷ್ಠತಾ ಕೇಂದ್ರ, ಐ.ಟಿ.ಐ. ಮತ್ತು ಜಿ.ಟಿ.ಟಿ.ಸಿ. ವಿದ್ಯಾರ್ಥಿಗಳಿಗೆ ಆಂಗ್ಲ ಮತ್ತು ಸಂವಹನ ಕೌಶಲ್ಯ ತರಬೇತಿಗೆ 5 ಕೋಟಿ ರೂ. ಅನುದಾನ ಮೀಸಲಿಡಲಾಗಿದೆ.