Advertisement

ಮಕ್ಕಳ ಸ್ನೇಹಿ ಶಾಲಾ ಪರಿಸರ ನಿರ್ಮಿಸಿ: ಸಿಎಂ

12:29 AM Sep 12, 2020 | mahesh |

ಬೆಂಗಳೂರು: ಶಿಕ್ಷಕರು ಕಳಂಕರಹಿತವಾಗಿ ಸಮಾನತೆ, ಸಹೋದರತೆ, ಸಹಬಾಳ್ವೆ ಹಾಗೂ ಸಾಮಾಜಿಕ ನ್ಯಾಯವನ್ನು ಅಳವಡಿಸಿ ಕೊಂಡು ಮಕ್ಕಳ ಸ್ನೇಹಿ ಶಾಲಾ ಪರಿಸರ ನಿರ್ಮಿಸಬೇಕು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದರು. ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ವಿಧಾನಸೌಧದ ಬ್ಯಾಂಕ್ವೆಟ್‌ ಹಾಲ್‌ನಲ್ಲಿ ಶುಕ್ರವಾರ ಹಮ್ಮಿ ಕೊಂಡಿದ್ದ ರಾಜ್ಯ ಮಟ್ಟದ ಶಿಕ್ಷಕರ ದಿನಾಚರಣೆ ಮತ್ತು ರಾಜ್ಯ ಹಾಗೂ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಶಿಕ್ಷಕರ ಸಮ್ಮಾನ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.

Advertisement

ಸರಕಾರಿ ಶಾಲೆಗಳತ್ತ ಮಕ್ಕಳು
ಶಿಕ್ಷಣ ಇಲಾಖೆಯಲ್ಲಿ ಆಗಿರುವ ಅನೇಕ ಸುಧಾರಣೆಗಳಿಂದ ಇತ್ತೀಚೆಗೆ ಮಕ್ಕಳು ಖಾಸಗಿ ಶಾಲೆಗಳಿಂದ ಸರಕಾರಿ ಶಾಲೆಗಳತ್ತ ಮುಖ ಮಾಡುತ್ತಿದ್ದಾರೆ. ಇದು ಸರಕಾರಿ ಶಾಲೆ ಯಾವ ರೀತಿ ಅಭಿವೃದ್ಧಿಯಾಗುತ್ತಿದೆ ಎಂಬುದನ್ನು ಸಾಬೀತು ಮಾಡುತ್ತಿದೆ ಎಂದರು.

ಶಾಲಾರಂಭ ದಿನ ನಿಗದಿಯಾಗಿಲ್ಲ
ಶಾಲಾರಂಭಕ್ಕೆ ಸಂಬಂಧಿಸಿ ಯಾವುದೇ ನಿರ್ಧಾರ ತೆಗೆದು ಕೊಂಡಿಲ್ಲ. ಕೇಂದ್ರದ ಮಾರ್ಗಸೂಚಿ ಅನ್ವಯವೇ ಮುಂದಿನ ಹೆಜ್ಜೆ ಇಡಲಿ ದ್ದೇವೆ ಎಂದು ಸಚಿವ ಸುರೇಶ್‌ ಕುಮಾರ್‌ ಹೇಳಿದರು.

ಸರಕಾರದ ಶಿಕ್ಷಣ ಸುಧಾರಣೆಗಳ ಸಲಹೆಗಾರ ಪ್ರೊ| ಎಂ. ಆರ್‌. ದೊರೆಸ್ವಾಮಿ, ವಿಧಾನ ಪರಿಷತ್‌ ಸದಸ್ಯರಾದ ವೈ. ಎ. ನಾರಾಯಣ ಸ್ವಾಮಿ, ಅರುಣ್‌ ಶಹಾಪುರ, ಅ. ದೇವೇಗೌಡ, ಹನುಮಂತ ನಿರಾಣಿ, ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಎಸ್‌.ಆರ್‌. ಉಮಾಶಂಕರ್‌, ಆಯುಕ್ತ ಡಾ| ಕೆ.ಜೆ. ಜಗದೀಶ್‌ ಮೊದ ಲಾದವರು ಉಪಸ್ಥಿತರಿದ್ದರು.

ಅಂಕಪಟ್ಟಿ ಸುರಕ್ಷೆ ತಂತ್ರಜ್ಞಾನ
ಬ್ಲಾಕ್‌ ಚೈನ್‌ ಟೆಕ್ನಾಲಜಿ ಮೂಲಕ ಎಸೆಸೆಲ್ಸಿ ಅಂಕಪಟ್ಟಿಗಳ ಮಾಹಿತಿ ಪಡೆಯುವ ಸರ್ಟಿಫಿಕೇಟ್‌ ಚೈನ್‌ ತಂತ್ರಾಂಶವನ್ನು ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಅನಾವರಣಗೊಳಿಸಿದರು. ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಈಗಾಗಲೇ ಎಸೆಸೆಲ್ಸಿ ಅಂಕಪಟ್ಟಿಯನ್ನು ಡಿಜಿಟಲೀಕರಣಗೊಳಿಸಿದೆ. ಇದರ ಮುಂದುವರಿದ ಭಾಗವಾಗಿ ಅಂಕಪಟ್ಟಿ ಪರಿಶೀಲನೆಯನ್ನು ಆನ್‌ಲೈನ್‌ ಮೂಲಕವೇ ಮಾಡಬಹುದಾದ ವ್ಯವಸ್ಥೆಯನ್ನು ಜಾರಿ ಮಾಡಿದೆ. ಅಲ್ಲದೆ, ಅಂಕಪಟ್ಟಿ ವಿಚಾರವಾಗಿ ಕಾಗದ ರಹಿತ ವ್ಯವಸ್ಥೆಯನ್ನು ಜಾರಿಗೆ ತರಲಾಗುತ್ತಿದೆ ಎಂದು ಮಂಡಳಿಯ ನಿರ್ದೇಶಕಿ ವಿ. ಸುಮಂಗಳಾ ತಿಳಿಸಿದರು.

Advertisement

ಖಾಸಗಿ ಶಿಕ್ಷಕರ ಸಹಾಯಕ್ಕೆ ಚಿಂತನೆ: ಸುರೇಶ್‌ ಕುಮಾರ್‌
ಶಿಕ್ಷಕ ಸ್ನೇಹಿ ವರ್ಗಾವಣ ನೀತಿಯನ್ನು ಜಾರಿಗೆ ತಂದಿದ್ದು, ಪ್ರಕ್ರಿಯೆ ಜಾರಿಯಲ್ಲಿದೆ. ಕೊರೊನಾ ಹಿನ್ನೆಲೆಯಲ್ಲಿ ಖಾಸಗಿ ಅನುದಾನ ರಹಿತ ಶಾಲೆಗಳ ಶಿಕ್ಷಕರಿಗೆ ಸಹಾಯ ಮಾಡುವ ಬಗ್ಗೆ ಸರಕಾರ ಚಿಂತಿಸುತ್ತಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಸುರೇಶ್‌ ಕುಮಾರ್‌ ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next