Advertisement
ತುಮಕೂರಿನ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸೋಮವಾರ ನಡೆದ ಸಮಗ್ರ ಮಕ್ಕಳ ರಕ್ಷಣಾ ಯೋಜನೆಯಡಿ ಜಿಲ್ಲಾ ಮಟ್ಟದ ಸಮಿತಿ ಸಭೆ, ಮಕ್ಕಳ ರಕ್ಷಣಾ ಸಮಿತಿ ಹಾಗೂ ಮಕ್ಕಳ ಸಹಾಯ ವಾಣಿ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿ ದರು. ಪರಿತ್ಯಕ್ತ ಮಕ್ಕಳನ್ನು ವಶಕ್ಕೆ ನೀಡಲು ಪ್ರಾಥಮಿಕ ಆರೋಗ್ಯ ಕೇಂದ್ರ, ಸಾರ್ವಜನಿಕ ಆಸ್ಪತ್ರೆ ಸೇರಿದಂತೆ ಜಿಲ್ಲೆಯ 170 ಸ್ಥಳಗಳಲ್ಲಿ ಮಮತೆಯ ತೊಟ್ಟಿಲನ್ನು ಈಗಾಗಲೇ ಆರಂಭಿಸಲಾಗಿದೆ. ಜಿಲ್ಲಾ ಹಾಗೂ ತಾಲೂಕು ಕೇಂದ್ರದಲ್ಲಿ ಸುಸಜ್ಜಿತವಾದ ಸುರಕ್ಷತೆ ಮಾದರಿ ಮಮತೆಯ ತೊಟ್ಟಿಲನ್ನು ನಿರ್ಮಾಣ ಮಾಡಿ ಮುಂದಿನ ಸಭೆಯ ಹೊತ್ತಿಗೆ ವರದಿ ನೀಡುವಂತೆ ಸೂಚಿಸಿದರು.
Related Articles
Advertisement
ಬಾಲ್ಯ ವಿವಾಹ, ಮಕ್ಕಳ ರಕ್ಷಣೆ, ಮತ್ತಿತರ ಪ್ರಕರಣಗಳಲ್ಲಿ ಜಿಲ್ಲಾ ಮಟ್ಟದ ಸಮಿತಿ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಪ್ರಕರಣಗಳ ತೀವ್ರತೆಯನ್ನು ಆಧರಿಸಿ ಸಮನ್ವಯದಿಂದ ಕಾರ್ಯ ನಿರ್ವಹಿಸಬೇಕು ಎಂದರು. ಮಕ್ಕಳ ಸಹಾಯವಾಣಿ 1098 ಬಗ್ಗೆ ವ್ಯಾಪಕ ಪ್ರಚಾರ ನೀಡಲು ಪ್ರಚಾರ ಫಲಕವನ್ನು ಜಿಲ್ಲೆಯ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಪ್ರದರ್ಶಿಸುವಂತೆ ಸೂಚನೆ ನೀಡಲಾಗುವುದು ಎಂದರು.
ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಡಾ. ಶೋಭಾರಾಣಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ನಟರಾಜು, ಜಿಲ್ಲಾ ಮಕ್ಕಳ ಸಂರಕ್ಷಣಾಧಿಕಾರಿ ವಾಸಂತಿ ಉಪ್ಪಾರ್, ಡಿಎಚ್ಒ ಡಾ.ಚಂದ್ರಿಕಾ ಸೇರಿದಂತೆ ಅಧಿಕಾರಿಗಳಿದ್ದರು.