Advertisement
ಶಿರಾ ತಾಲೂಕಿನ ಕಳ್ಳಂಬೆಳ್ಳ ಹೋಬಳಿಯ ಯಲದಬಾಗಿ ಗ್ರಾಪಂ ಆವರಣದಲ್ಲಿ ಆಯೋಜಿಸಿದ್ದ ಮಕ್ಕಳ ಹಕ್ಕುಗಳ ಗ್ರಾಮ ಸಭೆಯಲ್ಲಿ ಮಾತ ನಾಡಿದರು. ಕಟಾವೀರನಹಳ್ಳಿಯ ಕೆ.ಮಲ್ಲಣ್ಣ ಸ್ಮಾರಕ ಪ್ರೌಢಶಾಲೆ ವಿದ್ಯಾರ್ಥಿ ಅನಿಲ್ ಕುಮಾರ್, ಶಾಲೆಯಲ್ಲಿ ಇಂಗ್ಲಿಷ್ ಬೋಧಿಸುವ ಶಿಕ್ಷಕರಿಲ್ಲ. ಇದರಿಂದ ವಿದ್ಯಾಭ್ಯಾಸಕ್ಕೆ ತೊಂದರೆಯಾಗುತ್ತಿದೆ. ಇಂಗ್ಲಿಷ್ ಶಿಕ್ಷಕರ ಅವಶ್ಯಕತೆಯಿದೆ. ಆದ್ದರಿಂದ ಸಂಬಂಧಪಟ್ಟ ಅಧಿಕಾರಿಗಳು ಗಮನಹರಿಸ ಬೇಕು ಎಂದು ಮನವಿ ಮಾಡಿದರು. ಮಕ್ಕಳ ಹಕ್ಕುಗಳ ಕಾರ್ಯಕರ್ತ ಮಂಜು ನಾಥ್ ಅಮಲಗೊಂದಿ ಮಾತನಾಡಿ, ಮಕ್ಕಳಿಗೆ ಬದುಕುವ ಹಕ್ಕು, ರಕ್ಷಣೆ ಹಕ್ಕು, ವಿಕಾಸ ಹೊಂದುವ ಹಕ್ಕು ಮತ್ತು ಭಾಗವಹಿಸುವ ಹಕ್ಕುಗಳಿವೆ. ಇದಕ್ಕೆ ಸಂಬಂಧಿಸಿ ಉತ್ತೇಜನ ನೀಡುವುದು ಎಲ್ಲರ ಜವಬ್ದಾರಿಯಾಗಿದೆ ಎಂದರು.
Advertisement
ಗ್ರಾಮದಲ್ಲಿ ಗ್ರಂಥಾಲಯ ನಿರ್ಮಿಸಿ
05:00 PM Nov 25, 2019 | Suhan S |
Advertisement
Udayavani is now on Telegram. Click here to join our channel and stay updated with the latest news.