ಚನ್ನಪಟ್ಟಣ: ಪಟ್ಟಣದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಹಾಗೂ ರೇಷ್ಮೆ ಗೂಡು ಮಾರುಕಟ್ಟೆಗಳಲ್ಲಿ ಸ್ಥಾಪಿಸಲಾಗಿರುವ ಸೋಂಕು ನಿವಾರಕ ದ್ರಾವಣ ಸಿಂಪಡಣೆ ಟನಲ್‌ಗಳನ್ನು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹಾಗೂ ಶಾಸಕಿ ಅನಿತಾ ಕುಮಾರಸ್ವಾಮಿ ಉದ್ಘಾಟನೆ ಮಾಡಿದರು.
ಸಂದರ್ಭದಲ್ಲಿ ಮಾತನಾಡಿದ ಅವರು, ರೈತರು ಯಾವುದೇ ಆತಂಕವಿಲ್ಲದೆ ತಮ್ಮ ಉತ್ಪನ್ನಗಳನ್ನು ಮಾರಾಟ ಮಾಡಬಹುದು, ಸಾಮಾಜಿಕ ಅಂತರ ಕಾಯ್ದುಕೊಂಡು ಅಗತ್ಯ ಕ್ರಮಗಳನ್ನು ಅನುಸರಿಸಬೇಕು. ಎಪಿಎಂಸಿ ಹಾಗೂ ರೇಷ್ಮೆಗೂಡಿನ ಮಾರುಕಟ್ಟೆಗಳಲ್ಲಿ ಹೆಚ್ಚಿನ ರೈತರು ಆಗಮಿಸುವುದರಿಂದ ಸೋಂಕು ನಿವಾರಕ ದ್ರಾವಣ ಸಿಂಪಡಣಾ ಟನಲ್ ಗಳನ್ನು ಸ್ಥಾಪಿಸಲಾಗಿದೆ, ಇದರ ಮೂಲಕ ಹಾದುಹೋದರೆ ಸೋಂಕು ಹರಡುವುದು ತಪ್ಪುತ್ತದೆ ಎಂದರು.
ಸಾರ್ವಜನಿಕರು ಹೆಚ್ಚು ಓಡಾಡುವ ಸ್ಥಳದಲ್ಲಿ ತಮಿಳುನಾಡಿನ ಜಿಲ್ಲಾಧಿಕಾರಿಯೊಬ್ಬರು ಟನಲ್ ಮಾಡುವ ಮೂಲಕ ರೋಗವನ್ನು ತಾತ್ಕಾಲಿಕವಾಗಿ ತಡೆಯುವುದಕ್ಕೆ ಶುರು ಮಾಡಿದ್ದರು. ಇದನ್ನು ರಾಮನಗರ ಹಾಗೂ ಚನ್ನಪಟ್ಟಣದಲ್ಲಿ ಆರಂಭಿಸಲಾಗಿದೆ ಎಂದರು.
ಎಪಿಎಂಸಿ ಮಾರುಕಟ್ಟೆಗೆ ಭೇಟಿ ನೀಡಿ ರೈತರು ಹಾಗೂ ವರ್ತಕರೊಂದಿಗೆ ಸಮಾ ಲೋಚನೆ ನಡೆಸಿದ ಎಚಿxಕೆ, ಸದ್ಯ ಮಾವು ಬೆಲೆ ಕಡಿಮೆ ದರಕ್ಕೆ ಮಾರಾಟವಾಗುತ್ತಿರುವ ಬಗ್ಗೆ ಮಾಹಿತಿ ಬಂದಿದೆ, ವರ್ತಕರು ರೈತರ ಹಿತಕಾಯಲು ಮುಂದಾಗ ಬೇಕು. ಹಾಗೆಯೇ ಮಾರುಕಟ್ಟೆಯಲ್ಲಿ ಅಗತ್ಯವಿರುವ ಮೂಲ ಸೌಲಭ್ಯ ಒದಗಿಸಲಾಗು ವುದೆಂದರು. ರೇಷ್ಮೆಗೂಡು ಮಾರುಕಟ್ಟೆಯಲ್ಲಿ ಇಕ್ಕಟ್ಟಿನ ಪರಿಸ್ಥಿತಿ ಇಲ್ಲ, ಮುಕ್ತವಾಗಿ ರೇಷ್ಮೆಗೂಡು ಮಾರಾಟಕ್ಕೆ ಅಧಿಕಾರಿಗಳು ಅನುಮತಿ ನೀಡಬೇಕು, ರೈತರು ತಮ್ಮ ಉತ್ಪನ್ನಗಳನ್ನು ಸಾಗಣೆ ಮಾಡಲು ಹಾಗೂ ಹೊರರಾಜ್ಯಗಳಿಗೆ ಉತ್ಪನ್ನಗಳನ್ನು ಕಳುಹಿಸಲು ಯಾವುದೇ ಅಡೆತಡೆಯಿಲ್ಲ ಹಾಗಾಗಿ ಆತಂಕಕ್ಕೆ ಒಳಗಾಗುವುದು ಬೇಡ ಎಂದರು.
ತಾಲೂಕು ಜೆಡಿಎಸ್‌ನ ಮುಖಂಡರು, ಮಾರುಕಟ್ಟೆ ಅಧಿಕಾರಿಗಳಿದ್ದರು.