Advertisement

ಓದಿನೊಂದಿಗೆ ಕ್ರೀಡಾಸಕ್ತಿ ಬೆಳೆಸಿಕೊಳ್ಳಿ: ಶೇರಿಕಾರ

03:04 PM Oct 23, 2018 | Team Udayavani |

ಬೀದರ: ವಿದ್ಯಾರ್ಥಿಗಳು ದೈಹಿಕ ಮತ್ತು ಮಾನಸಿಕ ಬೆಳವಣಿಗೆ ಸಾಧಿಸಲು ಓದಿನೊಂದಿಗೆ ಕ್ರೀಡಾ ಚಟುವಟಿಕೆಗಳಲ್ಲಿ ಆಸಕ್ತಿ ಬೆಳೆಸಿಕೊಳ್ಳಬೇಕು ಎಂದು ಜಿಲ್ಲಾ ಪಂಚಾಯತ್‌ ಅಧ್ಯಕ್ಷೆ ಭಾರತಬಾಯಿ ಶೇರಿಕಾರ ಹೇಳಿದರು.

Advertisement

ನಗರದ ಶಾಹೀನ್‌ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ಶಾಹೀನ್‌ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ಸಂಯುಕ್ತಾಶ್ರಯದಲ್ಲಿ ನಡೆದ ಪ್ರಸಕ್ತ ಸಾಲಿನ ರಾಜ್ಯಮಟ್ಟದ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ಟೇಬಲ್‌ ಟೆನ್ನಿಸ್‌ ಪಂದ್ಯಾವಳಿ ಉದ್ಘಾಟಿಸಿ ಅವರು ಮಾತನಾಡಿದರು.

ಮಕ್ಕಳು ದೇಶದ ಆಸ್ತಿಯಾಗಿದ್ದಾರೆ. ಪೋಷಕರು ತಮ್ಮ ಮಕ್ಕಳಲ್ಲಿನ ಪ್ರತಿಭೆಯನ್ನು ಸಣ್ಣ ವಯಸ್ಸಿನಲ್ಲಿಯೇ ಗುರುತಿಸಿ ಬೆಳೆಸಬೇಕು. ಅವರು ಕ್ರೀಡೆಗಳತ್ತ ಹೆಚ್ಚು ಒಲವು ತೋರಿಸುವಂತೆ ಪ್ರೇರಣೆ ನೀಡಬೇಕು ಎಂದ ಅವರು, ರಾಜ್ಯಮಟ್ಟದ ಟೇಬಲ್‌ ಟೆನ್ನಿಸ್‌ ಕ್ರೀಡಾಕೂಟಗಳು ನಮ್ಮ ಜಿಲ್ಲೆಯಲ್ಲಿ ನಡೆಯುತ್ತಿರುವುದು ಸಂತೋಷ ತಂದಿದೆ. ಅದರಂತೆ ಇಲ್ಲಿನ ವಿದ್ಯಾರ್ಥಿಗಳು ಅತ್ಯುತ್ತಮ ಪ್ರದರ್ಶನ ನೀಡಿ ಜಿಲ್ಲೆಯ ಕೀರ್ತಿ ಹೆಚ್ಚಿಸಬೇಕು ಎಂದು ತಿಳಿಸಿದರು.

ನಗರಸಭೆ ಅಧ್ಯಕ್ಷೆ ಶಾಲಿನಿರಾಜು ಚಿಂತಾಮಣಿ ಮಾತನಾಡಿ, ವಿದ್ಯಾರ್ಥಿಗಳು ಕೇವಲ ಪಠ್ಯ ಪುಸ್ತಕಗಳಿಗೆ ಮಾತ್ರ ಸೀಮಿತವಾಗದೇ ನಿರಂತರವಾಗಿ ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸಬೇಕಿದೆ ಎಂದರು. ಜಿಲ್ಲಾ ಪಂಚಾಯತ ಉಪಾಧ್ಯಕ್ಷ ಡಾ| ಪ್ರಕಾಶ ಪಾಟೀಲ ಮಾತನಾಡಿ, ಮಕ್ಕಳು ದೈಹಿಕವಾಗಿ ಸದೃಢರಾಗಲು ತಪ್ಪದೇ ಕ್ರೀಡೆಗಳಲ್ಲಿ ಭಾಗವಹಿಸಬೇಕು. ಕ್ರೀಡೆಗಳಲ್ಲಿ ತೊಡಗಿಸಿಕೊಂಡವರಿಗೆ ಯಾವುದೇ ರೀತಿಯ ಆರೋಗ್ಯ ಸಮಸ್ಯೆಗಳು ಎದುರಾಗುವುದಿಲ್ಲ ಎಂದು ಹೇಳಿದರು.

ಶಾಹೀನ್‌ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ| ಅಬ್ದುಲ್‌ ಖದೀರ್‌, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಮಲ್ಲಿಕಾರ್ಜುನ್‌ ಎಸ್‌. ಮಾತನಾಡಿದರು. ಸಂಸ್ಥೆಯ ನಿರ್ದೇಶಕರಾದ ಅಬ್ದುಲ್‌ ಹಮೀದ್‌, ಅಬ್ದುಲ್‌ ಹಸ್ಸಿಮ್‌, ಹಣಮಂತರಾವ್‌ ಮೈಲಾರಿ, ವಿಠಲದಾಸ್‌ ಪ್ಯಾಗೆ, ಜಿಲ್ಲೆಯ ವಿವಿಧ ಪದವಿ ಪೂರ್ವ ಕಾಲೇಜುಗಳ ಪ್ರಾಚಾರ್ಯರು, ಉಪನ್ಯಾಸಕರು, ದೈಹಿಕ ಶಿಕ್ಷಣ ಉಪನ್ಯಾಸಕರು, ಶಾಹೀನ್‌ ಶಿಕ್ಷಣ ಸಂಸ್ಥೆಯ ಉಪನ್ಯಾಸಕರು ಸೇರಿದಂತೆ ವಿವಿಧ ಭಾಗಗಳಿಂದ ಆಗಮಿಸಿದ್ದ ಕ್ರೀಡಾಪಟುಗಳು ಇದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next