Advertisement

Udupi ವ್ಯಸನ ಮುಕ್ತ ಸಮಾಜದ ನಿರ್ಮಾಣವಾಗಲಿ: ಡಿಸಿ ಡಾ| ವಿದ್ಯಾಕುಮಾರಿ

10:31 PM Aug 12, 2024 | Team Udayavani |

ಉಡುಪಿ: ಯುವ ಪೀಳಿಗೆಯು ದುಃಶ್ಚಟಗಳಿಗೆ ಒಳಗಾಗುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಸರಕಾರವು ನಶಾ ಮುಕ್ತ ಭಾರತ ಅಭಿಯಾನ ಹಮ್ಮಿಕೊಂಡಿದ್ದು, ಯುವಜನತೆಯು ಮಾದಕ ವ್ಯಸನಗಳ ದುಷ್ಪರಿಣಾಮ ಅರಿತು ಮಾದಕ ವ್ಯಸನ ಮುಕ್ತ ಸಮಾಜದ ನಿರ್ಮಾಣವಾಗಬೇಕು ಎಂದು ಜಿಲ್ಲಾಧಿಕಾರಿ ಡಾ| ಕೆ. ವಿದ್ಯಾಕುಮಾರಿ ನೀಡಿದರು.

Advertisement

ಅಜ್ಜರಕಾಡು ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ಸೋಮವಾರ ಜಿಲ್ಲಾ ಡಳಿತ, ಜಿ. ಪಂ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಅಂಗವಿಕಲರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಭಾರತೀಯ ರೆಡ್‌ ಕ್ರಾಸ್‌, ಸರಕಾರಿ ಮಹಿಳಾ ಕಾಲೇಜು, ಕ್ರೀಡಾ ಇಲಾಖೆ ಆಶ್ರಯದಲ್ಲಿ ವಿಶ್ವ ಶಾಂತಿಗಾಗಿ ಜಿನೇವಾ ಒಪ್ಪಂದಗಳ ಸ್ಮರಣೆ ಮತ್ತು ನಶಾಮುಕ್ತ ಭಾರತ ಅಭಿಯಾನದ ಅಂಗವಾಗಿ ಜರಗಿದ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದರು.

ಯುವ ಜನತೆ ತಮ್ಮ ಜವಾಬ್ದಾರಿಗಳನ್ನು ಮರೆತು ಮಾದಕ ವ್ಯಸನಗಳ ಸೇವನೆಯಿಂದ ಅಮೂಲ್ಯ ಬದುಕನ್ನು ಹಾಳು ಮಾಡಿಕೊಳ್ಳುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಸಮಾಜಘಾತಕ ಶಕ್ತಿಗಳಾಗಿ ಪರಿವರ್ತನೆಗೊಳ್ಳುವ ಸಾಧ್ಯತೆ ಇದೆ ಎಂದು ಜಿಲ್ಲಾಧಿಕಾರಿ ಆತಂಕ ವ್ಯಕ್ತಪಡಿಸಿದರು. ಇಂದಿನಿಂದಲೇ ಈ ಬಗ್ಗೆ ಅರಿವು ಮೂಡಿಸುವುದು ಅಗತ್ಯವಾಗಿದೆ ಎಂದರು.
ರೆಡ್‌ಕ್ರಾಸ್‌ ಸಂಸ್ಥೆಯ ಕಾರ್ಯದರ್ಶಿ ಡಾ| ಗಣನಾಥ ಎಕ್ಕಾರು ಪ್ರತಿಜ್ಞಾವಿಧಿ ಭೋಧಿಸಿದರು. ಈ ಸಂದರ್ಭದಲ್ಲಿ ರೆಡ್‌ಕ್ರಾಸ್‌ ಸಂಸ್ಥೆ ಮೊಬೈಲ್‌ ಆರೋಗ್ಯ ವಾಹನಕ್ಕೆ ಚಾಲನೆ ನೀಡಲಾಯಿತು.

ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್‌., ಎಎಸ್‌ಪಿ ಸಿದ್ದಲಿಂಗಪ್ಪ, ಮಹಿಳಾ ಕಾಲೇಜಿನ ಪ್ರಾಂಶುಪಾಲ ಭಾಸ್ಕರ್‌ ಶೆಟ್ಟಿ, ಆರೋಗ್ಯ ಇಲಾಖೆ ಡಿಎಚ್‌ಒ ಐ.ಪಿ. ಗಡಾದ್‌, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಶ್ಯಾಮಲಾ ಸಿ. ಕೆ., ಅಂಗವಿಕಲ ಕಲ್ಯಾಣ ಇಲಾಖೆ ಅಧಿಕಾರಿ ರತ್ನಾ, ರೆಡ್‌ಕ್ರಾಸ್‌ ಉಪಸಭಾಪತಿ ಡಾ| ಅಶೋಕ್‌ ಕುಮಾರ್‌ ವೈ.ಜಿ, ಆಡಳಿತ ಮಂಡಳಿಯ ಸದಸ್ಯ ಚಂದ್ರಶೇಖರ್‌, ಗೌರವ ಖಜಾಂಜಿ ರಮಾದೇವಿ, ನೋಡೆಲ್‌ ಅಧಿಕಾರಿ ಜಯಶ್ರೀ ಮೊದಲಾದವರು ಉಪಸ್ಥಿತರಿದ್ದರು. ರೆಡ್‌ಕ್ರಾಸ್‌ ಜಿಲ್ಲಾ ಸಭಾಪತಿ ಬಸ್ರೂರು ರಾಜೀವ ಶೆಟ್ಟಿ ಸ್ವಾಗತಿಸಿ, ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಡಾ| ರೋಶನ್‌ ರೋಶನ್‌ ಶೆಟ್ಟಿ ನಿರೂಪಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next