Advertisement

ಕಟ್ಟಡ ಕುಸಿತ ಪ್ರಕರಣ: ಸಾವಿನ ಸಂಖ್ಯೆ 6ಕ್ಕೆ ಏರಿಕೆ, 55 ಜನರ ರಕ್ಷಣೆ

07:39 AM Mar 20, 2019 | Karthik A |

ಧಾರವಾಡ: ನಿರ್ಮಾಣ ಹಂತದಲ್ಲಿದ್ದ ಕಟ್ಟಡ ಕುಸಿತ ಘಟನೆಯಲ್ಲಿ ಇದುವರೆಗೆ 6 ಜನ ಮೃತಪಟ್ಟಿದ್ದು,  ರಕ್ಷಣಾ ಕಾರ್ಯಾಚರಣೆಯಲ್ಲಿ 55 ಜನರನ್ನು ರಕ್ಷಣೆ ಮಾಡಲಾಗಿದೆ. ಸಾವಿನ ಸಂಖ್ಯೆಯಲ್ಲಿ ಹೆಚ್ಚಳವಾಗುವ ಸಾಧ್ಯತೆ ಇದೆ ಎಂದು ಪೊಲೀಸ್ ಮಹಾ ನಿರ್ದೇಶಕ ಎನ್.ಎಂ.ರೆಡ್ಡಿ ಹೇಳಿದರು.

Advertisement

ಸುದ್ದಿಗೋಷ್ಠಿಯಲ್ಲಿ ಅಧಕೃತವಾಗಿ ಮಾಹಿತಿ ನೀಡಿದ ಅವರು, ನಮ್ಮ ಅಂದಾಜಿನ ಪ್ರಕಾರ ಕಟ್ಟಡದ ತಳಭಾಗದಲ್ಲಿ 15-20 ಜನ ಸಿಲುಕಿಕೊಂಡಿದ್ದಾರೆ. ರಾಜ್ಯದಿಂದ ಎಸ್.ಡಿ.ಆರ್.ಎಫ್. ಹಾಗೂ ಕೇಂದ್ರದಿಂದ ಎನ್.ಡಿ.ಆರ್.ಎಫ್. ತಂಡವನ್ನು ಕರೆಯಿಸಲಾಗಿದ್ದು, ಕಾರ್ಯಾಚರಣೆ ನಡೆಸಲಾಗುತ್ತಿದೆ. ಕಾರ್ಯಾಚರಣೆಗೂ ಒಂದು ಪದ್ಧತಿ ಇದೆ ಆ ಪದ್ಧತಿ ಪ್ರಕಾರ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದರು. ಕಟ್ಟಡದ ಅವಶೇಷಗಳ ನಾಲ್ಕು ಕಡೆಗಳಲ್ಲಿ ಜನ ಇದ್ದಾರೆ ಎಂಬ ಕುರುಹು ಸಿಕ್ಕಿದೆ. ಅವರನ್ನು ರಕ್ಷಣೆ ಮಾಡುವುದು ನಮ್ಮ ಮೊದಲ ಕರ್ತವ್ಯ ಎಂದರು.

ಎಸ್.ಡಿ.ಆರ್.ಎಫ್.ನಿಂದ 45 ಜನ, ಎನ್.ಡಿ.ಆರ್.ಎಫ್.ನಿಂದ 110 ಜನ, 8 ರಕ್ಷಣಾ ತಂಡ ಕಾರ್ಯಾಚರಣೆ ಮಾಡುತ್ತಿವೆ. 230 ಅಗ್ನಿಶಾಮಕ ದಳದ ಸಿಬ್ಬಂದಿ ರಾತ್ರಿಯಿಡೀ ಕಾರ್ಯಾಚರಣೆ ಮಾಡಿದ್ದಾರೆ. ನಿನ್ನೆ ರಾತ್ರಿ ಕಟ್ಟಡದ ಮಾಲೀಕರ ಮೇಲೆ 304 ಕಾಯ್ದೆಯಡಿ ಪ್ರಕರಣ ದಾಖಲು ಮಾಡಲಾಗಿದ್ದು, ಅದಕ್ಕಾಗಿ ಒಂದು ತಂಡ ರಚನೆ ಮಾಡಿ ಸದ್ಯದಲ್ಲೇ ಅವರನ್ನು ಬಂಧಿಸಲಿದ್ದೇವೆ ಎಂದರು. ಈ ರಕ್ಷಣಾ ಕಾರ್ಯಾಚರಣೆಯಲ್ಲಿ ಪ್ರತಿಯೊಂದೂ ಸವಾಲಾಗುತ್ತಿವೆ. ಕೊನೆಯ ವ್ಯಕ್ತಿಯನ್ನು ರಕ್ಷಣೆ ಮಾಡುವವರೆಗೂ ಕಾರ್ಯಾಚರಣೆ ಮುಂದುವರೆಯಲಿದೆ ಎಂದರು.

ಹುಬ್ಬಳ್ಳಿ, ಧಾರವಾಡ ಮಹಾನಗರ ಪೊಲೀಸ್ ಆಯುಕ್ತ ಎಂ.ಎನ್.ನಾಗರಾಜ, ಜಿಲ್ಲಾಧಿಕಾರಿ ದೀಪಾ ಚೋಳನ್, ಅಗ್ನಿಶಾಮಕ ಹಾಗೂ ತುರ್ತು ಸೇವೆಗಳ ಡಿಐಜಿ ರವಿಕಾಂತೇಗೌಡ ಹಾಗೂ ಎಸ್ಪಿ ಸಂಗೀತಾ ಜಿ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next