ನವದೆಹಲಿ: ದೆಹಲಿಯ ಕಬೀರ್ ನಗರದಲ್ಲಿ ಹಳೆಯದಾದ ಎರಡು ಅಂತಸ್ತಿನ ಕಟ್ಟಡವೊಂದು ಗುರುವಾರ ಮುಂಜಾನೆ ಕುಸಿದು ಬಿದ್ದ ಪರಿಣಾಮ ಇಬ್ಬರು ಮೃತಪಟ್ಟು ಓರ್ವ ಗಂಭೀರ ಗಾಯಗೊಂಡ ಘಟನೆ ನಡೆದಿದೆ.
ಘಟನೆ ನಡೆದ ವಿಚಾರ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ದೌಡಾಯಿಸಿದ ರಕ್ಷಣಾ ಸಿಬಂದಿ ಕಟ್ಟಡ ಅವಶೇಷಗಳಿ ಸಿಲುಕಿದ್ದ ಇಬ್ಬರ ದೇಹವನ್ನು ಹೊರತೆಗೆದಿದ್ದಾರೆ ಜೊತೆಗೆ ಓರ್ವನಿಗೆ ಗಾಯವಾಗಿದ್ದು ಆತನನ್ನು ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲಿಸಲಾಗಿದೆ.
ಪೊಲೀಸರ ಮಾಹಿತಿ ಪ್ರಕಾರ ಗುರುವಾರ ಮುಂಜಾನೆ 2:16 ರ ಸುಮಾರಿಗೆ ಕಬೀರ್ ನಗರದಲ್ಲಿ ಕಟ್ಟಡ ಕುಸಿದು ಬಿದ್ದ ಬಗ್ಗೆ ಕರೆ ಬಂದಿದೆ ಕೂಡಲೇ ನಮ್ಮ ತಂಡ ಅಗ್ನಿಶಾಮಕ ಠಾಣೆಗೆ ಮಾಹಿತಿ ನೀಡಿ ತಂಡದೊಂದಿಗೆ ಸ್ಥಳಕ್ಕೆ ದಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿ ಕಟ್ಟಡ ಅವಶೇಷಗಳಡಿ ಸಿಲುಕಿದ್ದ ಮೂವರನ್ನು ರಕ್ಷಣೆ ಮಾಡಿ ಆಸ್ಪತ್ರೆಗೆ ದಾಖಲಿಸಿದ್ದೇವೆ ಆದರೆ ಅದರಲ್ಲಿ ಇಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ಹೇಳಿದ್ದಾರೆ ಓರ್ವ ಕಾರ್ಮಿಕನ ಸ್ಥಿತಿ ಗಂಭೀರವಾಗಿದೆ ಎಂದು ಹೇಳಿದ್ದಾರೆ.
ಮೃತರನ್ನು ಅರ್ಷದ್ (30) ಮತ್ತು ತೌಹಿದ್ (20) ಎಂದು ಗುರುತಿಸಲಾಗಿದೆ. ಗಂಭೀರ ಗಾಯಗೊಂಡವನನ್ನು ರೆಹಾನ್ (22) ಎನ್ನಲಾಗಿದ್ದು ಈತ ಜಿಟಿಬಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ ಎಂದು ಈಶಾನ್ಯ ಡಿಸಿಪಿ ಜಾಯ್ ಟಿರ್ಕಿ ತಿಳಿಸಿದ್ದಾರೆ.
ಕಟ್ಟಡದ ಮಾಲೀಕರನ್ನು ಶಾಹಿದ್ ಎಂದು ಗುರುತಿಸಲಾಗಿದೆ. ಆತನ ಪತ್ತೆಗೆ ಪೊಲೀಸರು ಬಲೆ ಬಿಸಿದ್ದು, ಆರೋಪಿಯ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನೂ ಓದಿ: ಸದಸ್ಯತ್ವಕ್ಕೆ ರಾಜೀನಾಮೆ ನೀಡಲಿದ್ದಾರ ಜೆಡಿಎಸ್ ಸದಸ್ಯ ಮರಿತಿಬ್ಬೇಗೌಡ… ಮುಂದಿನ ನಡೆ ಏನು?