ಮುಂಬೈ: ಮಹಾರಾಷ್ಟ್ರದ ಭಿವಂಡಿಯಲ್ಲಿ ಬಹುಮಹಡಿ ಕಟ್ಟಡವೊಂದು ಕುಸಿದುದಿದ್ದು, 10 ಜನರು ಸಾವನ್ನಪ್ಪಿದ ಘಟನೆ ಸೋಮವಾರ ಬೆಳಿಗ್ಗೆ ನಡೆದಿದೆ.
ಮೂರು ಮಹಡಿಯ ಕಟ್ಟಡ ಇದಾಗಿದ್ದು, ಇಂದು ಮುಂಜಾನೆ ಕುಸಿದಿದೆ. ಕಟ್ಟಡದಲ್ಲಿ ಇನ್ನೂ ಹಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.
ಥಾಣೆಯ ಭಿವಂಡಿ ನಗರದ ಪಟೇಲ್ ಕಂಪೌಂಡ್ ಪ್ರದೇಶದಲ್ಲಿರುವ ಈ ಕಟ್ಟಡ ಕುಸಿತ ಸಂಭವಿಸಿದೆ. ಇದುವರೆಗೆ 25 ಜನರನ್ನು ರಕ್ಷಿಸಲಾಗಿದ್ದು, ಇನ್ನೂ 20ರಿಂದ 25 ಜನರು ಅವಶೇಷಗಳಡಿ ಸಿಲುಕಿರುವ ಶಂಕೆ ಇದೆ ಎಂದು ಎನ್ ಡಿಆರ್ ಎಫ್ ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನೂ ಓದಿ:ಏಳು ದಶಕಗಳಿಂದ ಕತ್ತಲೆಯಲ್ಲಿ ಬದುಕುತ್ತಿದ್ದ ಗಡಿ ಹಳ್ಳಿಗಳಿಗೆ ವಿದ್ಯುತ್ ಸಂಪರ್ಕ
Related Articles
ಈ ಕಟ್ಟಡವನ್ನು 1984ರಲ್ಲಿ ನಿರ್ಮಿಸಲಾಗಿತ್ತು. ಸುಮಾರು 20 ಕುಟುಂಬಗಳು ಇದರಲ್ಲಿ ವಾಸವಿದ್ದರು ಎನ್ನಲಾಗಿದೆ. ಎನ್ ಡಿಆರ್ ಎಫ್ ಪಡೆಗಳು ಸ್ಥಳಕ್ಕೆ ದೌಡಾಯಿಸಿದ್ದು, ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ.