ನವದೆಹಲಿ : ದೆಹಲಿಯ ಲಾಹೋರಿ ಗೇಟ್ ಪ್ರದೇಶದಲ್ಲಿ ಕಟ್ಟಡವೊಂದು ಕುಸಿದು,ಮೂರು ಮಂದಿ ಸಾವನ್ನಪ್ಪಿದ್ದು, ಕನಿಷ್ಠ ಐದು ಮಂದಿ ಗಾಯಗೊಂಡಿದ್ದು, ಹಲವರು ಅವಶೇಷಗಳಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ.
ಶನಿವಾರ ಮಧ್ಯಾಹ್ನದಿಂದ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದ ರವಿವಾರ ಸಂಜೆ ಸುಮಾರು 7;30ರ ವೇಳೆಗೆ ಕಟ್ಟಡ ಕುಸಿದು ಬಿದ್ದಿದೆ ಎನ್ನಲಾಗಿದೆ, ಅಲ್ಲದೆ ಘಟನಾ ಸ್ಥಳಕ್ಕೆ ಐದು ಅಗ್ನಿಶಾಮಕ ವಾಹನಗಳು ಧಾವಿಸಿದ್ದು. ಐದು ಮಂದಿಯನ್ನು ರಕ್ಷಿಸಿ ಆಸ್ಪತ್ರೆಗೆ ರವಾನಿಸಲಾಗಿದ್ದು, ಉಳಿದವರ ಪತ್ತೆಗೆ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.
ಕಳೆದ ಕೆಲ ದಿನಗಳಿಂದ ದೆಹಲಿಯಲ್ಲಿ ನಿರಂತರ ಮಳೆ ಸುರಿಯುತ್ತಿದ್ದು ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ ಅಲ್ಲದೆ ಫ್ಲೈಓವರ್‌ಗಳ ಕೆಳಗೆ ಜಲಾವೃತವಾಗಿರುವ ರಸ್ತೆಗಳ ಬಗ್ಗೆ ಜಾಗರೂಕರಾಗಿರಿ ಎಂದು ಸಂಚಾರ ಪೊಲೀಸರು ವಾಹನ ಸವಾರರಿಗೆ ಎಚ್ಚರಿಕೆ ನೀಡಿದ್ದಾರೆ.
ನಿರಂತರ ಸುರಿಯುತ್ತಿರುವ ಮಳೆಯಿಂದ ಕೆಲವೆಡೆ ಮರಗಳು ರಸ್ತೆಯ ಮೇಲೆ ಉರುಳಿ ಬಿದ್ದಿದ್ದು ವಾಹನ ಸಂಚಾರ ದುಸ್ತರವಾಗಿದೆ.
ಇದನ್ನೂ ಓದಿ : ಸಂಕೇಶ್ವರ: ಮೂರು ಕಾರು-ದ್ವಿಚಕ್ರ ವಾಹನ ನಡುವೆ ಸರಣಿ ಅಪಘಾತ, ತಾಯಿ ಮಗು ಸಾವು, ಹಲವರಿಗೆ ಗಾಯ