Advertisement

ಸಿಎಸ್‌ಆರ್‌ ಅನುದಾನದಲ್ಲಿ ಸುಸಜ್ಜಿತ ಕಟ್ಟಡ

01:41 PM Aug 29, 2020 | Suhan S |

ದೇವನಹಳ್ಳಿ: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ವತಿಯಿಂದ ಸುಮಾರು 5 ಕೋಟಿ ರೂ. ವೆಚ್ಚದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕಟ್ಟಡ ನಿರ್ಮಾಣವಾಗಿದ್ದು, ಖಾಸಗಿ ಶಾಲೆಗಳಿಗಿಂತಲೂ ಕಡಿಮೆ ಇಲ್ಲದ ರೀತಿಯಲ್ಲಿ ಸರ್ಕಾರಿ ಶಾಲೆ ಅಭಿವೃದ್ಧಿಪಥದತ್ತ ಸಾಗುತ್ತಿದೆ ಎಂದು ಶಾಸಕ ಎಲ್‌.ಎನ್‌.ನಾರಾ ಯಣಸ್ವಾಮಿ ತಿಳಿಸಿದರು.

Advertisement

ನಗರದ ಮಿನಿ ವಿಧಾನಸೌಧ ಮುಂಭಾಗ ದಲ್ಲಿರುವ ಕೊರಚರ ಪಾಳ್ಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಸಿಎಸ್‌ಆರ್‌ ಅನುದಾನ ದಲ್ಲಿ 5 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿರುವ ಕಟ್ಟಡ ಉದ್ಘಾಟಿಸಿ ಅವರು ಮಾತನಾಡಿದರು. ಟ್ರಸ್ಟ್‌ ಮಾಡಿಕೊಳ್ಳಿ: ತಾಲೂಕಿನಲ್ಲಿ ತಾವು ಶಾಸಕರಾದ ಮೇಲೆ ಅನೇಕ ಶಾಲೆಗಳು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸಿಎಸ್‌ಆರ್‌ ಅನುದಾನದಲ್ಲಿ ಸುಸಜ್ಜಿತವಾಗಿ ಕಟ್ಟಡ ನಿರ್ಮಾಣವಾಗಿದೆ. ಶಾಲೆಯ ಅಭಿವೃದ್ಧಿ ಸಮಿತಿಯು ಟ್ರಸ್ಟ್‌ ಮಾಡಿಕೊಂಡು ಶಾಲೆಯನ್ನು ಮತ್ತಷ್ಟು ಅಭಿವೃದ್ಧಿಗೊಳಿಸಬೇಕು ಎಂದು ಹೇಳಿದರು.

ಅವಳಿ ನಗರ: ತಾಲೂಕಿನಲ್ಲಿ ಎಸ್‌ಸಿಪಿ/ಟಿಎಸ್‌ಪಿ ಯೋಜನೆಯಲ್ಲಿ 1.50 ಕೋಟಿ ಅನುದಾನ ಬಿಡುಗಡೆಯಾಗಿದೆ. ದೇವನಹಳ್ಳಿ ಜಿಲ್ಲಾ ಕೇಂದ್ರ ಮಾಡಲು ಈಗಾಗಲೇ ಜಿಲ್ಲಾ ಉಸ್ತುವಾರಿ ಸಚಿವರು ಜಿಲ್ಲಾಧಿಕಾರಿಗಳಿಗೆ ಪ್ರಸ್ತಾವನೆ ಸಲ್ಲಿಸುವಂತೆ ಸೂಚಿಸಿದ್ದಾರೆ. ವಿಜಯಪುರ ಮತ್ತು ದೇವನಹಳ್ಳಿಯನ್ನು ಹುಬ್ಬಳ್ಳಿ ಮತ್ತು ಧಾರವಾಡ ಅವಳಿ ನಗರದ ಮಾದರಿಯಲ್ಲಿ ನಗರ ಸಭೆಯನ್ನಾಗಿ ಮಾಡಿ, ಅಭಿವೃದ್ಧಿಗೊಳಿಸಲಾಗುವುದು ಎಂದರು.

ಪುರಸಭಾ ಮಾಜಿ ಅಧ್ಯಕ್ಷ ಲಕ್ಷ್ಮೀನಾರಾಯಣ್‌, ನರಸಿಂಹಮೂರ್ತಿ, ಟೌನ್‌ ಜೆಡಿಎಸ್‌ ಅಧ್ಯಕ್ಷ ಮುನಿನಂಜಪ್ಪ, ಪುರಸಭಾ ಸದಸ್ಯ ಜಿ.ಎ.ರವೀಂದ್ರ, ನಾಗೇಶ್‌, ಟೌನ್‌ ಜೆಡಿಎಸ್‌ ಪ್ರಧಾನ ಕಾರ್ಯದರ್ಶಿ ಸಾಯಿಕುಮಾರ್‌, ನಿವೃತ್ತ ಮುಖ್ಯ ಶಿಕ್ಷಕ ಶ್ರೀರಾಮಯ್ಯ, ಮಾಜಿ ಪುರಸಭಾ ಸದಸ್ಯ ಹನುಮಂತಪ್ಪ, ರವಿಕುಮಾರ್‌, ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ರಾಜ್ಯ ಕಾರ್ಯದರ್ಶಿ ಪುಟ್ಟಸ್ವಾಮಿ, ಯುವ ಜೆಡಿಎಸ್‌ ಅಧ್ಯಕ್ಷ ಭರತ್‌, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರು, ಮುಖ್ಯ ಶಿಕ್ಷಕರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next