Advertisement

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

12:53 AM Dec 19, 2024 | Team Udayavani |

ಬೆಳಗಾವಿ: ರಾಜ್ಯದಲ್ಲಿ ಮುಂದಿನ 6 ತಿಂಗಳಲ್ಲಿ ಬಾಕಿ ಉಳಿದಿರುವ ಹೊಸ ತಾಲೂಕುಗಳಲ್ಲಿ ಪ್ರಜಾಸೌಧ ಕಟ್ಟಡ ನಿರ್ಮಾಣ ಮಾಡಿಕೊಡಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದರು.

Advertisement

ವಿಧಾನ ಪರಿಷತ್‌ದಲ್ಲಿ ಕಾಂಗ್ರೆಸ್‌ ಸದಸ್ಯ ಜಗದೇವ್‌ ಗುತ್ತೇದಾರ ಪ್ರಶ್ನೆಗೆ ಉತ್ತರ ನೀಡಿದ ಸಚಿವರು, ರಾಜ್ಯದಲ್ಲಿ 65 ಹೊಸ ತಾಲೂಕುಗಳ ರಚನೆಯಾಗಿದೆ.

ಕಲ್ಯಾಣ ಕರ್ನಾಟಕ ಭಾಗದ 16 ತಾಲೂಕುಗಳಿಗೆ ಕಟ್ಟಡ ನಿರ್ಮಾಣಕ್ಕೆ ಮಂಜೂರಾತಿ ನೀಡಲಾಗಿದೆ. ಉಳಿದ 49 ತಾಲೂಕುಗಳಲ್ಲಿ ಮುಂದಿನ 6 ತಿಂಗಳಲ್ಲಿ ಪ್ರಜಾಸೌಧ ಕಟ್ಟಡ ನಿರ್ಮಾಣ ಮಾಡಿಕೊಡಲು ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ಭರವಸೆ ನೀಡಿದರು.

 

Advertisement

Udayavani is now on Telegram. Click here to join our channel and stay updated with the latest news.

Next