Advertisement
ಈ ಸಂಬಂಧ ಕರ್ನಾಟಕ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಸಲ್ಲಿಸಿದ್ದ ಪ್ರಸ್ತಾವನೆಗೆ ರಾಜ್ಯ ಸರಕಾರ ಅನುಮೋದನೆ ನೀಡಿದೆ. ಇದರಿಂದ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ನೋಂದಾಯಿಸಿಕೊಂಡ 22 ಲಕ್ಷಕ್ಕೂ ಅಧಿಕ ಕಾರ್ಮಿಕರಿಗೆ ಆಹಾರ ಕಿಟ್ ದೊರಕಲಿದೆ.
2ನೇ ಅಲೆಯ ಹಿನ್ನೆಲೆಯಲ್ಲಿ ಘೋಷಿಸಲಾದ ಪ್ಯಾಕೇಜ್‌ನಡಿಯ ಈ ಕಾರ್ಯಕ್ರಮದಲ್ಲಿ ಸುಮಾರು 25 ಲಕ್ಷ ಕಾರ್ಮಿಕರಿಗೆ ತಲಾ 3 ಸಾವಿರ ರೂ. ಆರ್ಥಿಕ ನೆರವನ್ನು ನೇರವಾಗಿ ಅವರ ಖಾತೆಗೆ ವರ್ಗಾಯಿಸಲಾಗುತ್ತಿದೆ. ಇದಕ್ಕಾಗಿ 749.55 ಕೋ.ರೂ. ಬಿಡುಗಡೆಗೆ ಅನುಮೋದನೆ ನೀಡಲಾಗಿದೆ ಎಂದು ಸಿಎಂ ಯಡಿಯೂರಪ್ಪ ಶನಿವಾರ ಹೇಳಿದರು. ಕೌÒರಿಕರು, ಅಗಸರು, ಟೈಲರುಗಳು, ಹಮಾಲರು, ಗೃಹ ಕಾರ್ಮಿಕರು, ಮೆಕ್ಯಾನಿಕ್ ಗಳು, ಚಿಂದಿ ಆಯುವವರು, ಅಕ್ಕಸಾಲಿ ಗರು, ಕಮ್ಮಾರರು, ಕುಂಬಾರರು ಮತ್ತು ಭಟ್ಟಿ ಕಾರ್ಮಿಕರ ಸಹಿತ 11 ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ತಲಾ 2 ಸಾವಿರ ರೂ. ನೆರವು ಘೋಷಿಸಲಾಗಿದ್ದು, ಇದಕ್ಕಾಗಿ ಸೇವಾ ಸಿಂಧುವಿನಡಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಸುಮಾರು 3.3 ಲಕ್ಷ ಫಲಾನುಭವಿಗಳಿಗೆ ಇದರಿಂದ ಅನುಕೂಲ ವಾಗಲಿದೆ ಎಂದು ಸಿಎಂ ತಿಳಿಸಿದರು.
Related Articles
Advertisement