Advertisement
ಕಾರ್ಮಿಕ ಇಲಾಖೆಯಿಂದ ನೋಂದಣಿಯಾದ ಕಾರ್ಮಿಕರಿಗೆ ಸರ್ಕಾರದಿಂದ ಸಾಕಷ್ಟು ಮೂಲ ಸೌಲಭ್ಯಗಳನ್ನು ನೀಡುತ್ತಿದೆ. ಈ ಬಗ್ಗೆ ಅರಿವು ಮೂಡಿಸುವ ಸಲುವಾಗಿ ಕಾನೂನು ಸೇವಾ ಸಮಿತಿ ವಕೀಲರ ಸಂಘ ಇತರೆ ಇಲಾಖೆ ಸಹಕಾರದೊಂದಿಗೆ ತಾಲೂಕಾದ್ಯಂತ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು ಎಷ್ಟೋ ಕಾರ್ಮಿಕರು ಇದರ ಲಾಭವನ್ನು ಪಡೆಯುತ್ತಿದ್ದಾರೆ.
Related Articles
Advertisement
ಕಾರ್ಮಿಕ ಇಲಾಖೆಯಲ್ಲಿ ನೋಂದಣಿ ಮಾಡಿಕೊಂಡು ಕಾರ್ಮಿಕ ಕಾರ್ಡ್ ಪಡೆಯುವುದು ಅತ್ಯಂತ ಅಗತ್ಯವಾಗಿದೆ. ನೋಂದಣಿಗಾಗಿ ಕಾಮಗಾರಿ ನಡೆಯುತ್ತಿರುವ ಕಟ್ಟಡದ ಮಾಲಿಕರು, ಗುತ್ತಿಗೆದಾರರು ಅಥವಾ ಕರ್ನಾಟಕ ಸ್ಟೇಟ್ ಕಾಂಟ್ರ್ಯಾಕ್ಟರ್ ಅಸೋಸಿಯೇಷನ್‌ನವರು ನೀಡುವ ಉದ್ಯೋಗದ ದೃಢೀಕರಣ ಪತ್ರವನ್ನು ಲಗತ್ತಿಸುವುದು ಅಗತ್ಯವಾಗಿದೆ ಎಂದರು.
ಇಲಾಖೆಯಿಂದ ಸವಲತ್ತುಗಳನ್ನು ಕೊಡಿಸುವುದಾಗಿ ಹೇಳಿಕೊಂಡು ಕೆಲ ಮಧ್ಯವರ್ತಿಗಳು ಹಣ ಪಡೆದು,ಮೋಸ ಮಾಡುತ್ತಿದ್ದಾರೆ. ಈ ಕುರಿತು ಅರಿವು ಅಗತ್ಯ. ಕಾರ್ಮಿಕರು ಕುಟುಂಬದ ಬೆನ್ನೆಲುಬಾಗಿದ್ದು, ಕೊರೊನಾ ನಿಯಂತ್ರಣಕ್ಕಾಗಿ ಸರಕಾರದ ನಿಯಮಗಳನ್ನು ಪಾಲಿಸಿ, ಲಸಿಕೆ ಹಾಕಿಸಿಕೊಂಡು ಆರೋಗ್ಯವಾಗಿರಿ ಎಂದರು. ಸುಮಾರು 25 ಕಟ್ಟಡ ಕಾರ್ಮಿಕರನ್ನು ಗುರುತಿಸಿ ನೊಂದಾವಣೆ ಮಾಡಿಸಿ ಗುರುತಿನ ಚೀಟ ನೀಡಲಾಯಿತು. ಹಿರಿಯ ವಕೀಲ ಸುರೇಶ್, ಕಟ್ಟಡ ಕಾರ್ಮಿಕರ ಸಂಘದ ತಾಲೂಕು ಅಧ್ಯಕ್ಷ ಆನಂದ್ ಹಾಗೂ ಪದಾಧಿಕಾರಿಗಳು ಕಾರ್ಮಿಕರು ಉಪಸ್ಥಿತರಿದ್ದರು.