Advertisement

ಕಟ್ಟಡ ಕಾರ್ಮಿಕರು ಸರ್ಕಾರಿ ಸೌಲಭ್ಯ ಬಳಸಿಕೊಳ್ಳಿ

01:44 PM Nov 13, 2021 | Team Udayavani |

ಆಲೂರು: ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ನೋಂದಣಿ ಹೊಂದಿದ ಕಟ್ಟಡ ಕಾರ್ಮಿಕರಿಗಾಗಿ ಸರ್ಕಾರ ಹಲವಾರು ಮೂಲ ಸೌಲಭ್ಯಗಳನ್ನು ನೀಡುತ್ತಿದ್ದು ಅವುಗಳನ್ನು ಸರಿಯಾದ ರೀತಿಯಲ್ಲಿ ಬಳಸಿಕೊಂಡು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಜೆಎಂಎಫ್ಸಿ ನ್ಯಾಯಧೀಶೆ ಹಾಗೂ ತಾಲೂಕು ಕಾನೂನು ಸೇವಾ ಸಮಿತಿ ಸದಸ್ಯ ಕಾರ್ಯದರ್ಶಿ ಡಿ. ಎಸ್‌. ಪ್ರತಿಭಾ ತಿಳಿಸಿದರು. ಅವರು ಆಲೂರು ಪಟ್ಟಣದ ಕೆಇಬಿ ವೃತ್ತದಲ್ಲಿ ಹಿರಿಯ ಕಾರ್ಮಿಕ ನಿರೀಕ್ಷಿಕರ ಕಚೇರಿ ಉದ್ಘಾಟಿಸಿ ಮಾತನಾಡಿದರು.

Advertisement

ಕಾರ್ಮಿಕ ಇಲಾಖೆಯಿಂದ ನೋಂದಣಿಯಾದ ಕಾರ್ಮಿಕರಿಗೆ ಸರ್ಕಾರದಿಂದ ಸಾಕಷ್ಟು ಮೂಲ ಸೌಲಭ್ಯಗಳನ್ನು ನೀಡುತ್ತಿದೆ. ಈ ಬಗ್ಗೆ ಅರಿವು ಮೂಡಿಸುವ ಸಲುವಾಗಿ ಕಾನೂನು ಸೇವಾ ಸಮಿತಿ ವಕೀಲರ ಸಂಘ ಇತರೆ ಇಲಾಖೆ ಸಹಕಾರದೊಂದಿಗೆ ತಾಲೂಕಾದ್ಯಂತ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು ಎಷ್ಟೋ ಕಾರ್ಮಿಕರು ಇದರ ಲಾಭವನ್ನು ಪಡೆಯುತ್ತಿದ್ದಾರೆ.

ಇದನ್ನೂ ಓದಿ:- ಬೆಂಗಳೂರಿನಲ್ಲಿ ಹಾಡಹಗಲೇ ವ್ಯಕ್ತಿಯ ಕೊಚ್ಚಿ ಭೀಕರ ಕೊಲೆ

ಮಕ್ಕಳ ಶಿಕ್ಷಣಕ್ಕಾಗಿ ವಿದ್ಯಾರ್ಥಿ ವೇತನ, ಮಕ್ಕಳ ಮದುವೆಗೆ 50 ಸಾವಿರ ರೂ. ಸಹಾಯ ಧನ, ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾದರೆ 2 ಲಕ್ಷ ರೂ., ಅಪಘಾತದಿಂದ ಮರಣ ಹೊಂದಿದರೆ 5 ಲಕ್ಷ ರೂ. ನೀಡಲಾಗುವುದು ಎಂದ ಅವರು, ಕಾರ್ಮಿಕರ ಕಷ್ಟಗಳಿಗೆ ಒಕ್ಕೂಟ ಸ್ಪಂದಿಸುತ್ತಿದೆ ಎಂದರು.

ಹಾಸನ ಹಿರಿಯ ಕಾರ್ಮಿಕ ನಿರೀಕ್ಷಕ ಆನಂದರಾವ್‌ ಮಾತನಾಡಿ, ಸೌಲಭ್ಯ ಪಡೆಯುವ ಕಾರ್ಮಿಕರು ನಿಗದಿತ ನಮೂನೆಯಲ್ಲಿ ಅರ್ಜಿಯನ್ನು ಭರ್ತಿ ಮಾಡಿ ಆಯಾ ವಿಭಾಗದ ಕಾರ್ಮಿಕ ಅಧಿಕಾರಿಗಳು/ ಹಿರಿಯ ಕಾರ್ಮಿಕ ನಿರೀಕ್ಷಕರು/ ಕಾರ್ಮಿಕ ನಿರೀಕ್ಷಕರು ಇವರ ಬಳಿ ನೋಂದಣಿಗಾಗಿ ಸಲ್ಲಿಸಬೇಕು.

Advertisement

ಕಾರ್ಮಿಕ ಇಲಾಖೆಯಲ್ಲಿ ನೋಂದಣಿ ಮಾಡಿಕೊಂಡು ಕಾರ್ಮಿಕ ಕಾರ್ಡ್‌ ಪಡೆಯುವುದು ಅತ್ಯಂತ ಅಗತ್ಯವಾಗಿದೆ. ನೋಂದಣಿಗಾಗಿ ಕಾಮಗಾರಿ ನಡೆಯುತ್ತಿರುವ ಕಟ್ಟಡದ ಮಾಲಿಕರು, ಗುತ್ತಿಗೆದಾರರು ಅಥವಾ ಕರ್ನಾಟಕ ಸ್ಟೇಟ್‌ ಕಾಂಟ್ರ್ಯಾಕ್ಟರ್ ಅಸೋಸಿಯೇಷನ್‌ನವರು ನೀಡುವ ಉದ್ಯೋಗದ ದೃಢೀಕರಣ ಪತ್ರವನ್ನು ಲಗತ್ತಿಸುವುದು ಅಗತ್ಯವಾಗಿದೆ ಎಂದರು.

ಇಲಾಖೆಯಿಂದ ಸವಲತ್ತುಗಳನ್ನು ಕೊಡಿಸುವುದಾಗಿ ಹೇಳಿಕೊಂಡು ಕೆಲ ಮಧ್ಯವರ್ತಿಗಳು ಹಣ ಪಡೆದು,ಮೋಸ ಮಾಡುತ್ತಿದ್ದಾರೆ. ಈ ಕುರಿತು ಅರಿವು ಅಗತ್ಯ. ಕಾರ್ಮಿಕರು ಕುಟುಂಬದ ಬೆನ್ನೆಲುಬಾಗಿದ್ದು, ಕೊರೊನಾ ನಿಯಂತ್ರಣಕ್ಕಾಗಿ ಸರಕಾರದ ನಿಯಮಗಳನ್ನು ಪಾಲಿಸಿ, ಲಸಿಕೆ ಹಾಕಿಸಿಕೊಂಡು ಆರೋಗ್ಯವಾಗಿರಿ ಎಂದರು. ಸುಮಾರು 25 ಕಟ್ಟಡ ಕಾರ್ಮಿಕರನ್ನು ಗುರುತಿಸಿ ನೊಂದಾವಣೆ ಮಾಡಿಸಿ ಗುರುತಿನ ಚೀಟ ನೀಡಲಾಯಿತು. ಹಿರಿಯ ವಕೀಲ ಸುರೇಶ್‌, ಕಟ್ಟಡ ಕಾರ್ಮಿಕರ ಸಂಘದ ತಾಲೂಕು ಅಧ್ಯಕ್ಷ ಆನಂದ್‌ ಹಾಗೂ ಪದಾಧಿಕಾರಿಗಳು ಕಾರ್ಮಿಕರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next