Advertisement

ಆರ್ ಎಸ್ಎಸ್ ಮೇಲೆ ಬುಲ್ಡೋಜರ್…: ಅಪಪ್ರಚಾರ ಎಂದ ಸಿದ್ದರಾಮಯ್ಯ

01:48 PM Jul 27, 2022 | Team Udayavani |

ಬೆಂಗಳೂರು : ”ಆರ್ ಎಸ್ ಎಸ್ ,ಶ್ರೀರಾಮಸೇನೆ,ಬಜರಂಗದಳದ ಮೇಲೆ ಬುಲ್ಡೋಜರ್ ನುಗ್ಗಿಸಬೇಕು ಎಂದು ನಾನು ಕರೆಕೊಟ್ಟಿದ್ದೇನೆ ಎಂಬ ಅರ್ಥದಲ್ಲಿ ಪ್ರಕಟವಾಗಿದ್ದ ಪತ್ರಿಕಾ ವರದಿ ಸಂಪೂರ್ಣ ಸುಳ್ಳು” ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಸ್ಪಷ್ಡಪಡಿಸಿದ್ದಾರೆ.

Advertisement

ಬಹಳಷ್ಟು ಬಿಜೆಪಿ ಬೆಂಬಲಿಗರು ಈ ವಿಚಾರವನ್ನು ಹಂಚಿಕೊಂಡು ನನ್ನ ವಿರುದ್ಧ ಅಪಪ್ರಚಾರ ನಡೆಸುತ್ತಿದ್ದಾರೆ.ಇದು ಸಂಪೂರ್ಣ ಸುಳ್ಳು ಸುದ್ದಿಯಾಗಿದೆ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ವಿರೋಧ ಪಕ್ಷದವರು, ಅಲ್ಪಸಂಖ್ಯಾತರು, ಸೈದ್ದಾಂತಿಕ ವಿರೋಧಿಗಳ ಮನೆ ಮೇಲೆ ಬುಲ್ಡೋಜರ್ ಹರಿಸುತ್ತೇವೆ ಎಂಬ ಹಿಂಸಾತ್ಮಕ ಹೇಳಿಕೆಗಳೇ ತಪ್ಪು, ಇಂತಹ ಹೇಳಿಕೆಗಳಿಂದ ಪ್ರಚೋದನೆಗೀಡಾಗಿ ಇನ್ನೊಂದು ಗುಂಪಿನವರು ಶ್ರೀರಾಮಸೇನೆ, ಬಜರಂಗದಳದವರ ಮನೆ ಮೇಲೆ ಬುಲ್ಡೋಜರ್ ಹರಿಸುತ್ತೇವೆ ಎಂದು ಹೇಳುತ್ತಾರೆ. ಇದಕ್ಕೆ ಯಾರೂ ಅವಕಾಶ ನೀಡಬಾರದು” ಎಂದಷ್ಟೇ ನಾನು ಹೇಳಿದ್ದು ಎಂದಿದ್ದಾರೆ.

ಇದನ್ನು ತಿರುಚಿ ಪ್ರಕಟವಾದ ವರದಿಯನ್ನು ಇನ್ನಷ್ಟು ತಿರುಚಿ ಕೆಲವು ಸಮಾಜವಿರೋಧಿ ಶಕ್ತಿಗಳು ನನ್ನ ವಿರುದ್ದ ಅಪಪ್ರಚಾರ ನಡೆಸುತ್ತಿವೆ ಎಂದು ಹೇಳಿದ್ದಾರೆ.

ಈ ಪ್ರಚೋದನಕಾರಿ ಮತ್ತು ಕಾನೂನು ಬಾಹಿರ ನಡೆ-ನುಡಿಗಳನ್ನು ನಿಲ್ಲಿಸದೆ ಹೋದರೆ ಅಂತಹವರ ವಿರುದ್ದ ಕಾನೂನುಕ್ರಮಕ್ಕಾಗಿ  ಪೊಲೀಸರಿಗೆ ದೂರು ನೀಡಲು ನಿರ್ಧರಿಸಿದ್ದೇನೆ ಎಂದು ಎಚ್ಚರಿಕೆ ನೀಡಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next